ಆರೋಗ್ಯ ತಪಾಸಣೆಗಾಗಿ ಲಂಡನ್‌ಗೆ ತೆರಳಲಿರುವ ಸೋನಿಯಾ ಗಾಂಧಿ: ರಾಹುಲ್, ಪ್ರಿಯಾಂಕಾ ಸಾಥ್
ಸೋನಿಯಾ ಗಾಂಧಿ ಇಂದು ದುಬೈ ಮೂಲಕ ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದು, ಜತೆಗೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಸಹ ತೆರಳಲಿದ್ದಾರೆ.
ಈಗಷ್ಟೇ ಕೋವಿಡ್‌ನಿಂದ ಚೇತರಿಸಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ವೈದ್ಯಕೀಯ ತಪಾಸಣೆಗಾಗಿ ಇಂದು ವಿದೇಶಕ್ಕೆ ತೆರಳಲಿದ್ದಾರೆ. ದುಬೈ ಮೂಲಕ ಲಂಡನ್‌ಗೆ ಸೋನಿಯಾ ಗಾಂಧಿ ಪ್ರಯಾಣ ಬೆಳೆಸಲಿದ್ದು ಅವರ ಜತೆಗೆ ಮಕ್ಕಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಹೋಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಮಂಗಳವಾರ ತಡ ರಾತ್ರಿ ಮಾಹಿತಿ ನೀಡಿದ್ದಾರೆ. ಜೊತೆಗೆ ಭಾರತಕ್ಕೆ ಮರಳುವ ಮುನ್ನ ಸೋನಿಯಾ, ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನೂ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕೂಡಾ ಸೋನಿಯಾ ಗಾಂಧಿ ಹಲವು ಬಾರಿ ಅಮೆರಿಕಕ್ಕೆ ವೈದ್ಯಕೀಯ ತಪಾಸಣೆಗಾಗಿ ತೆರಳಿದ್ದರು.
ಬುಧವಾರ ಮಧ್ಯಾಹ್ನ 75 ವರ್ಷದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದುಬೈ ಮೂಲಕ ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಮಾಹಿತಿ ನೀಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ಸೋನಿಯಾ ಗಾಂಧಿ ಅವರು ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಅವರು ರಾಷ್ಟ್ರ ರಾಜಧಾನಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಅಧ್ಯಕ್ಷರೊಂದಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಪ್ರಯಾಣಿಸಲಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೋನಿಯಾ ಗಾಂಧಿಗೆ ಮತ್ತೆ ವಕ್ಕರಿಸಿದ ಕೊರೊನಾ ಸೋಂಕು: 3 ತಿಂಗಳಲ್ಲಿ ಎರಡನೇ ಬಾರಿಗೆ COVID-19
ಸೆಪ್ಟೆಂಬರ್ 4 ರಂದು ರಾಷ್ಟ್ರ ರಾಜಧಾನಿ ನವ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪಕ್ಷದ 'ಮೆಹಂಗೈ ಪರ್ ಹಲ್ಲಾ ಬೋಲ್' ರ‍್ಯಾಲಿಯಲ್ಲಿ ಭಾಗವಹಿಸಲು ಕಾಂಗ್ರೆಸ್ ಮಾಜಿ ಅಧ್ಯಕ್ಷ ಮತ್ತು ಸೋನಿಯಾ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ದೆಹಲಿಗೆ ಹಿಂತಿರುಗಲಿದ್ದಾರೆ ಎಂದೂ ಜೈರಾಮ್ ರಮೇಶ್ ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಸೋನಿಯಾಗೆ ಮೂರನೇ ಬಾರಿಗೆ ಕೋವಿಡ್ -19 ಪತ್ತೆಯಾಗಿದೆ. ಆದರೂ, ಅವರು ಶೀಘ್ರದಲ್ಲೇ ಚೇತರಿಸಿಕೊಂಡರು ಮತ್ತು ಮಂಗಳವಾರವಷ್ಟೇ ಭಾರತದ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದರು. ಹಾಗೂ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ಸಹ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಜೂನ್‌ನಲ್ಲಿ, ಅವರು ಎರಡನೇ ಬಾರಿಗೆ ಕೋವಿಡ್ -19 ಸೋಂಕಿಗೆ ಒಳಗಾದ ನಂತರ ವೈದ್ಯರು ಸೋನಿಯಾ ಗಾಂಧಿ ಅವರ ಕೆಳ ಶ್ವಾಸೇಂದ್ರಿಯ ಪ್ರದೇಶದಲ್ಲಿ ಶಿಲೀಂಧ್ರಗಳ ಸೋಂಕನ್ನು ಪತ್ತೆಹಚ್ಚಿದ ನಂತರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಹಿಂದೆ ಸಹ ಸೋನಿಯಾ ಗಾಂಧಿ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದರು.
AICC President: ರಾಹುಲ್ ಅಧ್ಯಕ್ಷರಾಗದಿದ್ದರೆ ಸೋನಿಯಾ ಮುಂದುವರಿಕೆ?
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಶೀಘ್ರದಲ್ಲೇ ಚುನಾವಣೆ..!
ಈ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣಾ ನಡೆಯಲಿದ್ದು, ಚುನಾವಣಾ ದಿನಾಂಕವನ್ನು ಇನ್ನು ಕೆಲ ದಿನಗಳಲ್ಲೇ ಘೋಷಣೆ ಮಾಡಲಾಗುತ್ತದೆ ಎಂದು ಪಕ್ಷ ಮಾಹಿತಿ ನೀಡಿದ ಬಳಿಕ ಸೋನಿಯಾ ಗಾಂಧಿ ಮತ್ತೆ ವಿದೇಶಕ್ಕೆ ತೆರಳುತ್ತಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಯಾವಾಗ ನಡೆಯುತ್ತದೆ, ಮುಂದಿನ ಅಧ್ಯಕ್ಷರು ಯಾರು ಎಂಬ ಬಗ್ಗೆಯೂ ಕುತೂಹಲ ಮೂಡಿದೆ. ಈ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸಲು ಉತ್ಸುಕವಾಗಿಲ್ಲ ಎಂದು ಪಕ್ಷದ ಮುಖಂಡರು ಹೇಳುತ್ತಿದ್ದರು. ಹಾಗೂ, ಕುಟುಂಬದಿಂದ ಯಾರೇ ಪಕ್ಷದ ಮುಖ್ಯಸ್ಥರಾಗಬೇಕೆಂದು ಅವರು ಬಯಸುವುದಿಲ್ಲ. ಈ ಅನಿಶ್ಚಿತತೆಯ ನಡುವೆ ವಿದೇಶ ಪ್ರವಾಸ ಮಾಡುವ ಆಕೆಯ ನಿರ್ಧಾರವು ಬಹುಶಃ ಮತ್ತೊಂದು ಗೊಂದಲದ ಪದರವನ್ನು ಸೇರಿಸುತ್ತದೆ.