ಹೊಟ್ಟೆ ನೋವಿನ ಕಾರಣ ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ವೈದ್ಯರು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ನವದೆಹಲಿ (ಜೂ.17): ಹೊಟ್ಟೆ ನೋವಿನ ಕಾರಣ ಭಾನುವಾರ ದೆಹಲಿಯ ಸರ್ ಗಂಗಾರಾಂ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಸೋಮವಾರ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೇಳಿಕೆ ಬಿಡುಗಡೆ ಮಾಡಿರುವ ಆಸ್ಪತ್ರೆ ಮುಖ್ಯಸ್ಥ ಡಾ. ಅಜಯ್‌ ಸ್ವರೂಪ್, ‘ಸೋನಿಯಾ ಅವರು ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಲಾಜಿ ವಿಭಾಗದಲ್ಲಿ ದಾಖಲಾಗಿದ್ದಾರೆ. ಅವರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ. ವೈದ್ಯರು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ’ ಎಂದಿದ್ದಾರೆ.

ಇದನ್ನೂ ಓದಿ: Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?

ಜೂ.9ರಂದು ಕೂಡ ಸೋನಿಯಾ ಗಾಂಧಿ ಇದೇ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು. ಅದಕ್ಕೂ ಮುನ್ನ ಶಿಮ್ಲಾದಲ್ಲಿ ಅಧಿಕ ರಕ್ತದೊತ್ತಡದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಇದನ್ನೂ ಓದಿ: Sonia Gandhi : "ಲೋಕ" ದಾರಿ ಬಿಟ್ಟು ರಾಜ್ಯಸಭಾ ವ್ಯೂಹ ಹೆಣೆದದ್ದೇಕೆ 'ಕೈ' ರಾಜಮಾತೆ..?