ಕೃಷಿ ಕಾಯ್ದೆ ಜಾಹೀರಾತು ನೀಡಲು 8 ಕೋಟಿ ರು. ವೆಚ್ಚ| ಕಾಯ್ದೆ ಕುರಿತ ಮಿಥ್ಯೆ ಸರಿಪಡಿಸಲು ಜಾಹೀರಾತು: ಕೇಂದ್ರ
ನವದೆಹಲಿ(ಫೆ.14): ನೂತನ ಕೃಷಿ ಕಾಯ್ದೆಗಳ ಕುರಿತು ಸರ್ಕಾರ ರೈತರಿಗೆ ಸರಿಯಾದ ಮಾಹಿತಿ ನೀಡಿಲ್ಲ ಎಂಬ ಆರೋಪಗಳು ಕೇಳಿಬಂದಿರುವಾಗಲೇ, ಕೃಷಿ ಕಾಯ್ದೆಗಳ ಕುರಿತು ಸ್ಪಷ್ಟನೆಗಳನ್ನು ನೀಡಲು ಹಾಗೂ ಸಾಕ್ಷ್ಯಚಿತ್ರಗಳ ನಿರ್ಮಾಣಕ್ಕಾಗಿ 8 ಕೋಟಿ ರು.ಗಳನ್ನು ವೆಚ್ಚ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈ ಕುರಿತು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿರುವ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಕೃಷಿ ಕಾಯ್ದೆಗಳನ್ನು ಜಾರಿ ಮಾಡುವುದಕ್ಕೂ ಮುನ್ನ ರಾಜ್ಯಗಳ ಜೊತೆ ಸಮಾಲೋಚನೆ ಮಾಡಲಾಗಿತ್ತು. ಆದರೆ, ಪ್ರಚಾರಕ್ಕೋಸ್ಕರ ಕಾಯ್ದೆಯ ಕುರಿತು ಅಪಪ್ರಚಾರ ಮಾಡಲಾಗುತ್ತಿದೆ.
ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಂವಹನ ವಿಭಾಗ ತಮ್ಮ ಸಚಿವಾಲಯದ ಪರವಾಗಿ 2020ರ ಸೆಪ್ಟೆಂಬರ್‌ನಿಂದ ಜ.2021ರ ಅವಧಿಯಲ್ಲಿ 7.25 ಕೋಟಿ ರು.ಗಳ ಜಾಹೀರಾತುಗಳನ್ನು ಬಿಡುಗಡೆ ಮಾಡಿದೆ. ಹಿಂದಿ, ಇಂಗ್ಲಿಷ್ ಮತ್ತು ಸ್ಥಳೀಯ ಭಾಷೆಗಳ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲು ಈ ಹಣವನ್ನು ಬಳಕೆ ಮಾಡಲಾಗಿದೆ. ಅದೇ ರೀತಿ ಕೃಷಿ ಕಾಯ್ದೆಗಳ ಪ್ರಚಾರಕ್ಕೆ ಮೂರು ಸಾಕ್ಷ್ಯಚಿತ್ರಗಳು ಮತ್ತು ಕಾಯ್ದೆಗಳ ಬಗ್ಗೆ ಶೈಕ್ಷಣಿಕ ಮಾಹಿತಿ ನೀಡುವ 2 ಚಿತ್ರಗಳು ಮತ್ತು ಟೀವಿ ಮಾಧ್ಯಮದಲ್ಲಿ ಪ್ರಚಾರಕ್ಕಾಗಿ 68 ಲಕ್ಷ ರು.ಗಳನ್ನು ಖರ್ಚು ಮಾಡಲಾಗಿದೆ’ ಎಂದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 14, 2021, 10:50 AM IST