ಗೋವಾದ ಲೈರಾವಿ ದೇವಸ್ಥಾನದ ಜಾತ್ರೆಯಲ್ಲಿ ಕಾಲ್ತುಳಿತದಿಂದ ಆರು ಭಕ್ತರು ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅತಿಯಾದ ಜನಸಂದಣಿ ಮತ್ತು ನಿರ್ವಹಣಾ ವ್ಯವಸ್ಥೆಯ ಕೊರತೆಯಿಂದ ಈ ದುರ್ಘಟನೆ ಸಂಭವಿಸಿದೆ. ಪ್ರಧಾನಿ ಮೋದಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಸೂಚಿಸಿದ್ದಾರೆ.
ಪಣಜಿ(ಮೇ.03) ಆಂಧ್ರ ಪ್ರದೇಶದ ದೇವಸ್ಥಾನದ ಛಾವಣಿ ಕುಸಿದು 8 ಮಂದಿ ಮೃತಪಟ್ಟ ಘಟನೆ ಬೆನ್ನಲ್ಲೇ ಇದೀಗ ಗೋವಾದ ಪ್ರಸಿದ್ಧ ದೇವಸ್ಥಾನದಲ್ಲಿ ಅವಘಡ ಸಂಭವಿಸಿದೆ. ಗೋವಾದ ಲೈರಾವಿ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದೆ.ಶ್ರೀಗಾಂವ್‌ನಲ್ಲಿರುವ ಲೈರಾವಿ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಈ ವೇಳೆ ನಿರ್ವಹಣೆ ವ್ಯವಸ್ಥೆಯಲ್ಲಿ ಸಮಸ್ಯೆ ಎದುರಾಗಿದೆ. ಪರಿಣಾಮ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 6 ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದರೆ, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ವ್ಯವಸ್ಥೆ ಕೊರತೆಯಿಂದ ನೂಕ ನುಗ್ಗಲು
ಪ್ರಸಿದ್ಧ ಲೈರಾವಿ ದೇವಿ ದೇವಸ್ಥಾನದಲ್ಲಿ ಪ್ರತಿ ವರ್ಷ ಜಾತ್ರೆ ನಡೆಯುತ್ತದೆ. ಲೈರಾವಿ ದೇವಿ ಜಾತ್ರ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆದರೆ ಈ ಬಾರಿ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದಾರೆ. ಆದರೆ ಸರಿಯಾದ ನಿರ್ವಹಣಾ ವ್ಯವಸ್ಥೆ, ಸರದಿ ಸಾಲಿನಲ್ಲಿ ಭಕ್ತರು ಸಾಗಲು ಸಾಧ್ಯವಾಗರಿಲ್ಲ. ಹೆಚ್ಚಿನ ಜನಸಂದಣಿ ಹಾಗೂ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ನೂಕು ನುಗ್ಗಲು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಹೇಳುತ್ತಿದೆ.
ಕುಂಭಮೇಳ ಕಾಲ್ತುಳಿತ, ಬೆಳಗಾವಿಯ ಕುಟುಂಬಕ್ಕೆ ಯುಪಿ ಸರ್ಕಾರದಿಂದ 1 ಕೋಟಿ ಜಮೆ!
ನೂಕು ನುಗ್ಗಲು ಸಂಭವಿಸುತ್ತಿದ್ದಂತೆ ಭಕ್ತರು ಆತಂಕಗೊಂಡಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ. ಇದರಿಂದ ಅವಘಡದ ತೀವ್ರತೆ ಹೆಚ್ಚಾಗಿದೆ. ಭಕ್ತರು ಒಬ್ಬರ ಮೇಲೊಬ್ಬರು ಬಿದ್ದರೆ, ಹಲವರು ತುಳಿದುಕೊಂಡು ಸಾಗಿದ್ದಾರೆ. ಇದರ ಪರಿಣಾಮ 6 ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಪೊಲೀಸರು ನಿಯಂತ್ರಣಕ್ಕೆ ತೆಗೆದುಕೊಂಡ ಕೆಲವೇ ಕ್ಷಣದಲ್ಲಿ ಪರಿಸ್ಥಿತಿ ತಿಳಿಗೊಂಡಿದೆ. ಆದರೆ ಅಮಾಯಕ ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಗಾಯಾಗಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಗೋವಾ ಪೊಲೀಸ್ ವರಿಷ್ಢಾದಿಕಾರಿ ಅಕ್ಷತ್ ಕೌಶಲ್ ಮಾಹಿತಿ ನೀಡಿದ್ದಾರೆ.
ಸಿಎಂ ಜೊತೆ ಫೋನ್ ಮೂಲಕ ಮೋದಿ ಮಾತುಕತೆ
ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಘಟನೆ ಕುರಿತಿ ಮಾಹಿತಿ ಕೇಳಿದ್ದಾರೆ. ಇದೇ ವೇಳೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸುವಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ಎಲ್ಲಾ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಘಟನೆಗೆ ಆಘಾತ ವ್ಯಕ್ತಪಡಿಸಿದ ಪ್ರಮೋದ್ ಸಾವಂತ್
ಲೈರಾವಿ ದೇವಿ ಜಾತ್ರೆಯಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಆಘಾತ ತಂದಿದೆ. ಈ ಘಟನೆ ತೀವ್ರ ನೋವುಂಟು ಮಾಡಿದೆ. ಮೃತರ ಕುಟುಂಬದ ಜೊತೆ ಸರ್ಕಾರವಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾಹಿತಿ ಪಡೆದಿದ್ದಾರೆ. ಕೇಂದ್ರದಿಂದ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ.
ಮಹಾಕುಂಭ ಕಾಲ್ತುಳಿತದ ಬಳಿಕ ತೀವ್ರ ಕಟ್ಟೆಚ್ಚರ
ಪ್ರಯಾಗರಾಜ್ ಮಹಾಕುಂಭದ ವೇಳೆ ಕಾಲ್ತುಳಿತ ಸಂಭವಿಸಿ ಮಹಾ ಅವಘಡ ಸಂಭವಿಸಿತ್ತು. ಈ ಘಟನೆ ಬಳಿಕ ಎಲ್ಲಾ ರಾಜ್ಯಗಳು ತಮ್ಮ ತಮ್ಮ ರಾಜ್ಯದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲು ಕ್ರಮ ಕೈಗೊಳ್ಳುತ್ತಿದೆ.
ಕುಂಭಮೇಳದ ಕಾಲ್ತುಳಿತದಲ್ಲಿ 'ಮೃತಪಟ್ಟ' ವ್ಯಕ್ತಿ ತಿಥಿ ದಿನವೇ ವಾಪಸ್! ಅಷ್ಟಕ್ಕೂ ಆಗಿದ್ದೇನು?


