* ಹೊಸ ವರ್ಷಾಚರಣೆಯಂದು ವೈಷ್ಣೋದೇವಿ ಭವನದಲ್ಲಿ ದುರಂತ* ಕಾಲ್ತುಳಿತಕ್ಕೆ 12ಕ್ಕೂ ಅಧಿಕ ಸಾವು* ಮುಂದುವರೆದ ಭದ್ರತಾ ಕಾರ್ಯಾಚರಣೆ

ಶ್ರೀನಗರ(ಜ.01): ಕಣಿವೆ ನಾಡು ಜಮ್ಮುವಿನಲ್ಲಿರುವ ಮಾತಾ ವೈಷ್ಣೋದೇವಿ ಧಾಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಈವರೆಗೂ ಈ ಕಾಲ್ತುಳಿತದಲ್ಲಿ ಹಲವರು ಗಾಯಗೊಂಡಿದ್ದು, 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಪೊಲೀಸರು ಸೇರಿದಂತೆ ಭದ್ರತಾ ಪಡೆಗಳು ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಮೃತರ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದಿನಿಂದ ಹೊಸ ವರ್ಷ ಪ್ರಾರಂಭ, ಪ್ರತಿ ವರ್ಷ ಲಕ್ಷಾಂತರ ಭಕ್ತರು ವರ್ಷದ ಮೊದಲ ದಿನದಂದು ತಾಯಿಯ ದರ್ಶನಕ್ಕಾಗಿ ಭವನ ತಲುಪುತ್ತಾರೆ. ಈ ವರ್ಷವೂ ಹೊಸ ವರ್ಷಾಚಣೆಗೆಂದು ಭಕ್ತರು ಭಾರೀ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಜಮಾವಣೆಗೊಂಡಿದ್ದರು. ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರದತ್ತ ನುಗ್ಗಿ ಬಂದಾಗ ಈ ಕಾಲ್ತುಳಿತ ಸಂಭವಿಸಿದೆ. ಜಮ್ಮು ಕಾಶ್ಮೀರದ ತ್ರಿಕೂಟ ಬೆಟ್ಟಗಳಲ್ಲಿ ಮಾತಾ ವೈಷ್ಣೋದೇವಿ ಮಂದಿರವಿದ್ದು ಅಲ್ಲಿ ಈ ಅವಘಡ ಸಂಭವಿಸಿದೆ.

"

Scroll to load tweet…

ಸಮುದಾಯ ಆರೋಗ್ಯ ಕೇಂದ್ರದ ಬ್ಲಾಕ್ ಮೆಡಿಕಲ್ ಆಫೀಸರ್ ಡಾ ಗೋಪಾಲ್ ದತ್ ಪ್ರಕಾರ, ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ, ಆದರೂ ಈ ಸಂಖ್ಯೆ ಸಂಪೂರ್ಣವಾಗಿ ನಿಖರವಾಗಿಲ್ಲ. ಅವರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಗಾಯಾಳುಗಳನ್ನು ನಾರಾಯಣ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದು, ಒಟ್ಟು ಗಾಯಾಳುಗಳ ಸಂಖ್ಯೆyU ದೃಢಪಟ್ಟಿಲ್ಲ.

ಮೋದಿ ಸಂತಾಪ

Scroll to load tweet…

ಘಟನೆಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತದಲ್ಲಿ ಜನರು ಸಾವನ್ನಪ್ಪಿದ್ದಕ್ಕಾಗಿ ನಾನು ತೀವ್ರ ದುಃಖಿತನಾಗಿದ್ದೇನೆ ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುವುದರೊಂದಿಗೆ, ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದಿದ್ದಾರೆ