ಪ್ರಧಾನಿ ವಿರುದ್ಧ ಹೇಳಿಕೆ: ರಾಹುಲ್‌ಗೆ ಹಕ್ಕುಚ್ಯುತಿ ನೋಟಿಸ್
ಇತ್ತೀಚೆಗೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಆಡಿದ ಮಾತುಗಳ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸಚಿವ ಪ್ರಹ್ಲಾದ ಜೋಶಿ (Prahlada Joshi) ಹಾಗೂ ಬಿಜೆಪಿ ಸಂಸದ ನಿಶಿಕಾಂತ್ ದುಬೆ (Nishikant Dubey)ಅವರು ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ
ನವದೆಹಲಿ: ಇತ್ತೀಚೆಗೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಆಡಿದ ಮಾತುಗಳ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸಚಿವ ಪ್ರಹ್ಲಾದ ಜೋಶಿ (Prahlada Joshi) ಹಾಗೂ ಬಿಜೆಪಿ ಸಂಸದ ನಿಶಿಕಾಂತ್ ದುಬೆ (Nishikant Dubey)ಅವರು ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ. ಈ ನೋಟಿಸ್‌ಗೆ ಉತ್ತರಿಸಬೇಕು ಸ್ಪೀಕರ್ ಅವರು ರಾಹುಲ್‌ಗೆ (Rahul Gandhi) ಸೂಚಿಸಲಾಗಿದೆ ಎಂದು ಲೋಕಸಭಾ ಸಚಿವಾಲಯ ಹೇಳಿದೆ.
ಇತ್ತೀಚೆಗೆ ತಮ್ಮ ಭಾಷಣದಲ್ಲಿ ರಾಹುಲ್ ಅವರು, ಹಗರಣ ನಡೆಸಿರುವ ಉದ್ಯಮಿ ಅದಾನಿಗೂ (businessman Adani) ಮೋದಿಗೂ ಏನು ಸಂಬಂಧ? 2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಅದಾನಿ ಆಸ್ತಿ ಹೆಚ್ಚಳದ ಹಿಂದಿನ ಗುಟ್ಟೇನು? ಎಂದು ಪ್ರಶ್ನಿಸಿದ್ದರು. ಆದರೆ ಈ ಆರೋಪಗಳು ಸುಳ್ಳು, ಅಸಂಸದೀಯವಾಗಿವೆ ಹಾಗೂ ದುರುದ್ದೇಶದಿಂದ ಕೂಡಿವೆ. ಪ್ರಧಾನಿಗಳ ಹಕ್ಕುಚ್ಯುತಿ ಆಗಿದೆ ಎಂದು ಜೋಶಿ ಹಾಗೂ ದುಬೆ ಹಕ್ಕುಚ್ಯುತಿ ನೋಟಿಸ್ ನೀಡಿದ್ದರು.
ಬಿಜೆಪಿ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಇಲ್ಲ: ಪ್ರಹ್ಲಾದ ಜೋಷಿ
ಅದಾನಿ ಶ್ರೀಮಂತಿಕೆ 609ರಿಂದ 2ನೇ ಸ್ಥಾನಕ್ಕೇರಿದ್ದು ಹೇಗೆ? ಸಂಸತ್ತಿನಲ್ಲಿ ರಾಹುಲ್ ಗಾಂಧಿ ಪ್ರಶ್ನೆ!