ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಕಚೇರಿ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರನ್ನು ಸೇರಿ ಒಟ್ಟು 18 ಮಂದಿ ಬಿಜೆಪಿ ಪದಾಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶಿಲ್ಲಾಂಗ್: ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಕಚೇರಿ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರನ್ನು ಸೇರಿ ಒಟ್ಟು 18 ಮಂದಿ ಬಿಜೆಪಿ ಪದಾಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಗಲಭೆಗೆ ಕುಮ್ಮಕ್ಕು ನೀಡಿದ್ದ ಇಬ್ಬರು ಟಿಎಂಸಿ ಮುಖಂಡರಿಗೆ ಬಲೆ ಬೀಸಿದ್ದಾರೆ. ಪ್ರತಿಭಟನಾಕಾರರು ತುರು ನಗರವನ್ನು ರಾಜ್ಯದ ಚಳಿಗಾಲದ ರಾಜಧಾನಿಯನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಮನೆ ಎದುರು ಸೇರಿದ್ದರು. ಈ ವೇಳೆ ಕಲ್ಲು ತೂರಾಟವಾಗಿ 5 ಸಿಬ್ಬಂದಿಗೆ ಗಾಯವಾಗಿತ್ತು. ಅವರಿಗೆ ಮುಖ್ಯಮಂತ್ರಿ 50,000 ರು. ಪರಿಹಾರ ಘೋಷಣೆ ಮಾಡಿದ್ದಾರೆ.
ನಗ್ನ ಪರೇಡ್ ಸಂತ್ರಸ್ತರ ಭೇಟಿ ಮಾಡಿದ ದೆಹಲಿ ಮಹಿಳಾ ಆಯೋಗದ ಸ್ವಾತಿ
ನವದೆಹಲಿ/ಇಂಫಾಲ್: ಮಣಿಪುರದ ನಗ್ನ ಮೆರವಣಿಗೆಯ ಸಂತ್ರಸ್ತ ಮಹಿಳೆಯರ ಮನೆಗೆ ದೆಹಲಿ ಮಹಿಳಾ ಆಯೋಗ ಅಧ್ಯಕ್ಷೆ ಸ್ವಾತಿ ಮಲಿವಾಲ್ ಮಂಗಳವಾರ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ಭೇಟಿ ಬಳಿಕ ಮಾತನಾಡಿದ ಅವರು, ‘ದೆಹಲಿಯಿಂದ ಬಂದು ನನಗೆ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಆಗುತ್ತಿದೆ ಎಂದಾದರೆ, ಮುಖ್ಯಮಂತ್ರಿ ಬೀರೇನ್ ಸಿಂಗ್ ಅವರಿಗೆ ಏಕೆ ಆಗುತ್ತಿಲ್ಲ’ ಎಂದು ಪ್ರಶ್ನೆ ಮಾಡಿದರು. ಜೊತೆಗೆ ಆಡಳಿತದ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದ ಅವರು,‘ರಾಜ್ಯದಲ್ಲಿ ಯಾವುದೇ ರೀತಿಯ ಕ್ರಮಗಳನ್ನು ತೆಗೆದುಕೊಂಡಿಲ್ಲ. ರಾಜ್ಯ ಸರ್ಕಾರ ನನ್ನ ಭೇಟಿ ವಿಷಯ ತಿಳಿದಿದ್ದರೂ ಯಾವುದೇ ಭದ್ರತೆಗಳನ್ನು ಒದಗಿಸಿಲ್ಲ. ಈ ಕೂಡಲೇ ಮುಖ್ಯಮಂತ್ರಿ ಬೀರೇನ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಹಿಳಾ ಮತ್ತು ಮಕ್ಕಳ ಸಚಿವೆ ಸ್ಮೃತಿ ಇರಾನಿ ಮಣಿಪುರಕ್ಕೆ ಭೇಟಿ ನೀಡಬೇಕು’ ಎಂದು ಆಗ್ರಹಿಸಿದರು.
Manipur Violence: ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್, ಕೆಸಿಆರ್ ಪಕ್ಷ
ಮಲಗುಂಡಿ ಸ್ವಚ್ಚತೆ ವೇಳೆ 5 ವರ್ಷದಲ್ಲಿ 339 ಮಂದಿ ಕಾರ್ಮಿಕರ ಸಾವು: ಕೇಂದ್ರ
ನವದೆಹಲಿ: ಕಳೆದ 5 ವರ್ಷದಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಮಲಗುಂಡಿ ಸ್ವಚ್ಚಗೊಳಿಸುವ ವೇಳೆ 339 ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಾಮಾಜಿಕ ನ್ಯಾಯ ಸಚಿವ ರಾಮ್‌ದಾಸ್, 2023ರಲ್ಲಿ 9 ಮಂದಿ. 2022ರಲ್ಲಿ 66, 2021ರಲ್ಲಿ 58, 2020ರಲ್ಲಿ 22, 2019ರಲ್ಲಿ 117 ಹಾಗೂ 2018ರಲ್ಲಿ 67 ಜನರು ಮಲಗುಂಡಿಯನ್ನು ಶುಚಿಗೊಳಿಸಲು ಇಳಿದಾಗ ಮೃತಪಟ್ಟಿದ್ದಾರೆ. ಸರ್ಕಾರ ಈಗಾಗಲೇ ಮಾನವ ಶಕ್ತಿ ಬಳಸಿ ಮಲಗುಂಡಿ ಸ್ವಚ್ಚಗೊಳಿಸುವುದನ್ನು ನಿಷೇಧಿಸಿದೆ. ಇದರ ಹೊರತಾಗಿಯೂ ಅಂಥ ಘಟನೆ ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.
Kargil Vijay Diwas: ವೀರ ಸೈನಿಕರ ಜತೆಗೆ ಮಿರೇಜ್ 2000 ಮತ್ತು ಬೋಫೋರ್ಸ್ ಗನ್ ಸಹ ಈ ಯುದ್ಧದ ಹೀರೋಗಳು!
