ಇಸ್ಫೋಸಿಸ್ ಪ್ರತಿಷ್ಠಾನದ ಸಮಾಜಸೇವಕಿ ಸುಧಾ ಮೂರ್ತಿ ಅವರು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ದುರ್ಗಾದೇವಿ (Durga Devi temple) ಮಂದಿರಕ್ಕೆ ತೆರಳಿ ಅಳಿಯ ಹಾಗೂ ಬ್ರಿಟನ್ ಪ್ರಧಾನಿ (British Prime Minister) ರಿಷಿ ಸುನಾಕ್ (Rishi Sunak)ಅವರಿಗೆ ಒಳಿತಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಸಿಂಧುದುರ್ಗ: ಇಸ್ಫೋಸಿಸ್ ಪ್ರತಿಷ್ಠಾನದ ಸಮಾಜಸೇವಕಿ ಸುಧಾ ಮೂರ್ತಿ ಅವರು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ದುರ್ಗಾದೇವಿ (Durga Devi temple) ಮಂದಿರಕ್ಕೆ ತೆರಳಿ ಅಳಿಯ ಹಾಗೂ ಬ್ರಿಟನ್ ಪ್ರಧಾನಿ (British Prime Minister) ರಿಷಿ ಸುನಾಕ್ (Rishi Sunak)ಅವರಿಗೆ ಒಳಿತಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಈ ನಡುವೆ, ಇತ್ತೀಚೆಗೆ ಪ್ರಖರ ಹಿಂದುತ್ವವಾದಿ ಸಾಂಭಾಜಿ ಭಿಡೆ (Sambhaji Bhide) ಅವರ ಪಾದಗಳಿಗೆ ಸುಧಾಮೂರ್ತಿ ನಮಸ್ಕರಿಸಿದ್ದ ವಿವಾದಿತ ವೀಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಸುಧಾ, ‘ಭಿಡೆ ಅವರು ಯಾರೆಂದೇ ನನಗೆ ಗೊತ್ತಿರಲಿಲ್ಲ. ಹಿರಿಯರಿಗೆ ನಮಸ್ಕರಿಸುವುದು ನಮ್ಮ ಸಂಪ್ರದಾಯ’ ಎಂದು ಸ್ಪಷ್ಟಪಡಿಸಿದರು. ಇತ್ತೀಚೆಗೆ ಭಿಡೆ, ಹಣೆಯ ಮೇಲೆ ಕುಂಕುಮ ಇಲ್ಲವೆಂಬ ಕಾರಣಕ್ಕೆ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ್ದರು.
ವಿವಾದ ಹುಟ್ಟು ಹಾಕಿದ ಸಂಭಾಜಿ ಭಿಡೆ ಕಾಲಿಗೆರಗಿದ ಸುಧಾಮೂರ್ತಿ ನಡೆ
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಬಲಪಂಥೀಯ ನಾಯಕ ಮತ್ತು ಶಿವ ಪ್ರತಿಷ್ಠಾನ ಸಂಸ್ಥಾಪಕ ಸಂಭಾಜಿ ರಾವ್ ಭಿಡೆ ಅವರನ್ನು ಲೇಖಕಿ ಮತ್ತು ಲೋಕೋಪಕಾರಿ ಸುಧಾ ಮೂರ್ತಿ ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಬಿಢೆ ಅವರ ಕಾಲಿಗೆ ನಮಸ್ಕರಿಸಿದ ಸುಧಾ ಮೂರ್ತಿಯವರ ನಡೆ ಎಲ್ಲೆಡೆ ಪರ ವಿರೋಧ ಚರ್ಚೆಗೆ ಕಾರಣವಾಗಿತ್ತು.
ಇದಕ್ಕೆ ಕಾರಣ ಈ ಸಂಭಾಜಿ ರಾವಿ ಭಿಡೆಯವರದು ಬಹಳ ವಿವಾದಿತ ವ್ಯಕ್ತಿತ್ವ. 2018ರಲ್ಲಿ ಸಂಭವಿಸಿದ ಭೀಮಾ ಕೋರೆಗಾಂವ್ ಘರ್ಷಣೆಯಲ್ಲಿ,ಕಲ್ಲು ತೂರಾಟದ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲ್ಪಟ್ಟ ವ್ಯಕ್ತಿಗಳಲ್ಲಿ ಭಿಡೆ ಕೂಡಾ ಒಬ್ಬರಾಗಿದ್ದಾರೆ. ಕಳೆದ ವಾರ, ನವೆಂಬರ್ 2ರಂದು, ಇದೇ ಭಿಡೆ, ಮಹಿಳಾ ದೂರದರ್ಶನ ಸುದ್ದಿ ವರದಿಗಾರ್ತಿಯೊಬ್ಬರು ಹಣೆಗೆ ಬಿಂದಿ ಇಟ್ಟಿಲ್ಲ ಎಂಬ ಕಾರಣಕ್ಕೆ ಅವರೊಂದಿಗೆ ಮಾತನಾಡಲು ನಿರಾಕರಿಸಿ ವಿವಾದ ಮೈ ಮೇಲೇಳೆದುಕೊಂಡಿದ್ದರು.
ಭಿಡೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿಯಾಗಿ ಹೊರ ಬರುವಾಗ ನಡೆದ ಈ ಘಟನೆಯು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಶಿಂಧೆ ಅವರೊಂದಿಗಿನ ಭೇಟಿಯ ಬಗ್ಗೆ ಪ್ರಶ್ನೆ ಕೇಳಿದ ವರದಿಗಾರ್ತಿಗೆ, ಮೊದಲು ಬಿಂದಿ ಇಡುವುದನ್ನು ಕಲಿಯಿರಿ, ಇಲ್ಲದಿದ್ದರೆ ತಾನು ಮಾತನಾಡುವುದಿಲ್ಲ. ಮಹಿಳೆ ಭಾರತ ಮಾತೆಯನ್ನು ಹೋಲುತ್ತಾಳೆ ಮತ್ತು ಅವಳು ಬಿಂದಿ ಇಟ್ಟುಕೊಳ್ಳದೆ ವಿಧವೆಯ ಹಾಗೆ ಕಾಣಿಸಿಕೊಳ್ಳಬಾರದು ಎಂದು ಭಿಡೆ ಹೇಳಿದ್ದು ಬಹು ಚರ್ಚಿತ ವಿಷಯವಾಗಿತ್ತು. ಈ ವಿಷಯವಾಗಿ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗವು ಭಿಡೆಗೆ ನೋಟಿಸ್ ನೀಡಿತ್ತು.
Gandhada Gudi ಗಂಧದ ಗುಡಿಯಲ್ಲಿ ನನ್ನ ತವರೂರನ್ನು ಹೊಗಳಿದ್ದಾರೆ: ಡಾ. ಸುಧಾಮೂರ್ತಿ ಸಂತಸ
