ಮಧ್ಯ ಪ್ರದೇಶದ ಮೊರೆನಾ ಬಳಿ 2 ಯುದ್ಧ ವಿಮಾನ ಪತನ; ಓರ್ವ ಪೈಲಟ್‌ ಸಾವು

ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ರಕ್ಷಣಾ ಮೂಲಗಳು ಮಾಹಿತಿ ನೀಡಿವೆ.

sukhoi 30 and mirage 2000 aircraft crash near morena in madhya pradesh ash

ನವದೆಹಲಿ (ಜನವರಿ 28, 2023): ಮಧ್ಯಪ್ರದೇಶದ ಮೊರೇನಾದ ಬಳಿ 2 ಯುದ್ಧ ವಿಮಾನಗಳು ಪತನವಾಗಿದೆ. ಸುಖೋಯ್ - 30 ಹಾಗೂ ಮಿರಾಜ್ 2000 ಯುದ್ಧ ವಿಮಾನಗಳು ಪತನವಾಗಿದೆ. ಮಧ್ಯಪ್ರದೇಶದ ಗ್ವಾಲಿಯರ್‌ ಏರ್‌ಬೇಸ್‌ನಿಂದ ಹೊರಟಿದ್ದ ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ತಿಳಿದುಬಂದಿದೆ. ಆದರೆ, ಈ ಅವಘಡಕ್ಕೆ ಕಾರಣ ಈವರೆಗೆ ತಿಳಿದುಬಂದಿಲ್ಲ. ಇನ್ನು, ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ರಕ್ಷಣಾ ಮೂಲಗಳು ಮಾಹಿತಿ ನೀಡಿವೆ. ಎರಡೂ ಯುದ್ಧ ವಿಮಾನಗಳು ಡಿಕ್ಕಿ ಹೊಡೆದುಕೊಂಡಿದ್ದು, ಈ ಬಗ್ಗೆ ತನಿಖೆ ಮಾಡಲಾಗುವುದು ಎಂದು ಭಾರತೀಯ ವಾಯುಪಡೆ ತಿಳಿಸಿದೆ. ಈ ಅವಘಡದಲ್ಲಿ ಒಬ್ಬರು ಪೈಲಟ್‌ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸುಖೋಯ್ - 30 ಯುದ್ಧ ವಿಮಾನದಲ್ಲಿ ಇಬ್ಬರು ಪೈಲಟ್‌ಗಳಿದ್ದರು. ಈ ಪೈಕಿ, ಒಬ್ಬರನ್ನು ರಕ್ಷಿಸಲಾಗಿದ್ದು, ಅವರು ಬದುಕುಳಿದಿದ್ದಾರೆ ಎಂದು ತಿಳಿದಿದೆ. ಅಲ್ಲದೆ, ಮಿರಾಜ್ 2000 ವಿಮಾನದಲ್ಲಿ ಒಬ್ಬರು ಪೈಲಟ್‌ ಇದ್ದು, ಅವರು ಸಹ ಬದುಕುಳಿದಿದ್ದಾರೆ. ಈ ಇಬ್ಬರು ಪೈಲಟ್‌ಗಳಿಗೆ ಗಾಯಗಳಾಗಿದ್ದು, ಇವರಿಬ್ಬರು ಸುರಕ್ಷಿವಾಗಿರುವ ಬಗ್ಗೆ ಮೊರೆನಾ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಈ ಇಬ್ಬರನ್ನು ಸುರಕ್ಷಿತವಾಗಿ ಯುದ್ಧ ವಿಮಾನಗಳಿಂದ ಕಾಪಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನು ಓದಿ: ಪತನಗೊಂಡ ವಿಮಾನದ ಬ್ಲ್ಯಾಕ್‌ಬಾಕ್ಸ್‌ ಪತ್ತೆ: ಯೇತಿ ವಿಮಾನ ಬಳಸುತ್ತಿದ್ದ ಕಿಂಗ್‌ಫಿಶರ್

ಯುದ್ಧ ವಿಮಾನವೊಂದರ ಅವಶೇ‍ಷ ಪತ್ತೆಯಾಗಿದ್ದು, ಮಧ್ಯ ಪ್ರದೇಶದ ಮೊರೆನಾ ಬಳಿ ಎರಡು ಯುದ್ಧ ವಿಮಾನಗಳು ಪತನವಾಗಿರುವ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಅವರಿಗೆ ಮಾಹಿತಿ ನೀಡಲಾಗಿದೆ. ಅವರು ವಾಯುಸೇನಾ ಮುಖ್ಯಸ್ಥ ಹಾಗೂ ಚೀಫ್‌ ಆಫ್‌ ಡಿಫೆನ್ಸ್‌ ಸ್ಟಾಫ್‌ ಅವರ ಜತೆ ಸಂಪರ್ಕದಲ್ಲಿದ್ದಾರೆ ಎಂದೂ ತಿಳಿದುಬಂದಿದೆ.

ಈ ಮೊದಲು ರಾಜಸ್ಥಾನದ ಭರತ್‌ಪುರದಲ್ಲಿ ಚಾರ್ಟಡ್‌ ವಿಮಾನ ಪತನವಾಗಿದೆ ಎಂದು ಭರತ್‌ಪುರ ಜಿಲ್ಲಾಧಿಕಾರಿ ಅಲೋಕ್‌ ರಂಜನ್‌ ಮಾಹಿತಿ ನೀಡಿದ್ದರು. ಆದರೆ, ಸುತ್ತಮುತ್ತಲ ಪ್ರದೇಶದಲ್ಲಿ ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ರಕ್ಷಣಾ ಮೂಲಗಳು ಮಾಹಿತಿ ನೀಡಿದ್ದವು. ಬಳಿಕ, ಮಧ್ಯ ಪ್ರದೇಶದ ಮೊರೇನಾ ಬಳಿ ಈ ಯುದ್ಧ ವಿಮಾನಗಳು ಪತನಗೊಂಡಿವೆ ಎಂಬುದು ಸ್ಪಷ್ಟವಾಗಿದೆ. 

ಇದನ್ನೂ ಓದಿ: ನೇಪಾಳ ವಿಮಾನ ಅಪಘಾತದಲ್ಲೇ ಬಲಿಯಾದ ಪೈಲಟ್‌ ದಂಪತಿ..!

Latest Videos
Follow Us:
Download App:
  • android
  • ios