ಅಯೋಧ್ಯೆ ಭೂವಿವಾದ ಕುರಿತಾದ ಸುಪ್ರೀಂಕೋರ್ಟ್ ತೀರ್ಪು/ ವಿವಾದಿತ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಆದೇಶ ನೀಡಿದ ಸುಪ್ರೀಂಕೋರ್ಟ್/ ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ 5 ಎಕರೆ ಜಾಗಕ್ಕೆ ಸುಪ್ರೀಂ ಆದೇಶ/ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ತೀರ್ಮಾನ/ ಸುಪ್ರೀಂಕೋರ್ಟ್ ತೀರ್ಮಾನ ತೃಪ್ತಿ ತಂದಿದೆ ಎಂದ ಸುನ್ನಿ ವಕ್ಫ್ ಬೋರ್ಡ್/ ಮೇಲ್ಮನವಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ಸರ್ವಾನುಮತದ ನಿರ್ಣಯ/ 

ನವದೆಹಲಿ(ನ.09): ಮಹತ್ವದ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ಭೂವಿವಾದದ ಕುರಿತಾದ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸುವದಿಲ್ಲ ಎಂದು ಉತ್ತರಪ್ರದೇಶ ಸುನ್ನಿ ವಕ್ಫ್ ಬೋರ್ಡ್ ಸ್ಪಷ್ಟಪಡಿಸಿದೆ.

ರಾಮನಿಗೆ ದೊರೆತ ಅಯೋಧ್ಯೆ: ಶತಮಾನಗಳ ನಂಬಿಕೆಗೆ ಸುಪ್ರೀಂ ತೀರ್ಪಿನ ನೈವೇದ್ಯೆ!

ಸುಪ್ರೀಂ ತೀರ್ಪು ನಮಗೆ ಒಪ್ಪಿತವಾಗಿದ್ದು, ಈ ಕುರಿತು ಮೇಲ್ಮನವಿ ಸಲ್ಲಿಸದಿರುವ ನಿರ್ಣಯವನ್ನು ಬೋರ್ಡ್ ಸರ್ವಾನುಮತದಿಂದ ಸ್ವೀಕರಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಬಾಬರ್ ಅಯೋಧ್ಯೆ(5 ಎಕರೆ)ಯಲ್ಲೇ ಇರಲಿದ್ದಾನೆ: ಸಹೋದರರ ನಂಬಿಕೆ ಮುಖ್ಯ ಎಂದ ಸುಪ್ರೀಂ!

ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಅದರಂತೆ ಎಲ್ಲೆರಿಗೂ ಒಪ್ಪಿತವಾಗಿರುವ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಬೋರ್ಡ್ ಸ್ಪಷ್ಟಪಡಿಸಿದೆ.

Scroll to load tweet…

ತೀರ್ಪು ಪ್ರಕಟವಾದ ಬಳಿಕ ತೀರ್ಪು ತೃಪ್ತಿ ತಂದಿಲ್ಲ ಎಂದು ಹೇಳಿದ್ದ ಬೋರ್ಡ್ ಪರ ವಕೀಲ ಜಫರಯಾಬ್ ಜಿಲಾನಿ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಬೋರ್ಡ್ ಮೀಟಿಂಗ್‌ನಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದ್ದರು.