ಮನ್‌ ಕೀ ಬಾತ್: ಕರ್ನಾಟಕದ ‘ಬಾಕಾಹು’ಗೆ ಮೋದಿ ಮನ್ನಣೆ!

* ಮೋದಿ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮ

* 79ನೇ ಸರಣಿಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ

* ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಿ 

Support India Olympics team with Victory Punch campaign PM Modi on Mann Ki Baat pod

ನವದೆಹಲಿ(ಜು.25): ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ತಿಂಗಳ ರೇಡಿಯೋ ಕಾರ್ಯಕ್ರಮದ 79ನೇ ಸರಣಿಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನದಲ್ಲಿ ಪಾಲ್ಗೊಂಡು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಎಲ್ಲಾ ಕ್ರೀಡಾಪಟುಗಳಿಗೆ ಸ್ಪೂರ್ತಿ ತುಂಬಿ ಎಂದು ಕರೆ ನೀಡಿದ್ದಾರೆ. 

ಹೌದು ಟೋಕಿಯೋಗೆ ಹೋಗುವ ಪ್ರತಿಯೊಬ್ಬ ಆಟಗಾರನು ಒಬ್ಬರ ಸ್ವಂತ ಹೋರಾಟವನ್ನು ಹೊಂದಿದ್ದಾನೆ ಮತ್ತು ವರ್ಷಗಳ ಶ್ರಮವನ್ನು ಹೊಂದಿದ್ದಾನೆ. ಅವರು ತಮಗಾಗಿ ಮಾತ್ರವಲ್ಲ ದೇಶಕ್ಕಾಗಿ ಹೋಗುತ್ತಿದ್ದಾರೆ. ಈ ಸಮಯದಲ್ಲಿ ಒತ್ತಡಕ್ಕೆ ಒಳಗಾಗದೆ ದೇಶವು ಅವರನ್ನು ಬೆಂಬಲಿಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಮನ್‌ ಕೀ ಬಾತ್‌ ಪ್ರಮುಖ ಅಂಶಗಳು

* ಈ ಬಾರಿ ಆಗಸ್ಟ್ 15ರಂದು ಸ್ವಾತಂತ್ರ್ಯ ಮಹೋತ್ಸವದ ಅಮೃತ ಮಹೋತ್ಸವವನ್ನು ದೇಶ ಆಚರಣೆ ಮಾಡುತ್ತಿದೆ. ನಾವು 12 ಮಾರ್ಚ್‌ರಂದು ಅಮೃತ ಮಹೋತ್ಸವ ಯಾತ್ರೆಗೆ ಚಾಲನೆ ನೀಡಿದ್ದೇವೆ. ದೇಶದ ವಿವಿಧ ಭಾಗದಲ್ಲಿ ಹಲವಾರು ಕಾರ್ಯಕ್ರಮಗಳು ನಡೆಯುತ್ತಿವೆ. ಹೀಗಿರುವಾಗ ಎಷ್ಟು ಜನರು ಸಾಧ್ಯವೋ ಅಷ್ಟು ಜನರು ಸೇರಿ ರಾಷ್ಟ್ರಗೀತೆಯನ್ನು ಹಾಡಿ. ಇದನ್ನು ರಾಷ್ಟ್ರಗಾನ ಡಾಟ್ ಕಾಮ್ ಮೂಲಕ ರೆಕಾರ್ಡ್ ಮಾಡಿ, ಈ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಅಡುಗೆ ಮನೆಯ ಹೊಸ ಅತಿಥಿ ‘ಬಾಕಾಹು’..!

* ಅಮೃತ ಮಹೋತ್ಸವ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮವಲ್ಲ. ಇದು ದೇಶದ ಎಲ್ಲಾ ಜನರ ಕಾರ್ಯಕ್ರಮವಾಗಿದೆ. ನಿಮಗೆ ಎಲ್ಲೆಲ್ಲಿ ಸಾಧ್ಯವೋ ಅಲ್ಲಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಾತ್ರಂತ್ರ್ಯ ಸೇನಾನಿಗಳನ್ನು ನೆನಪಿಸಿಕೊಳ್ಳಿ ಎಂದು ಮೋದಿ ಮನವಿ ಮಾಡಿದರು.

* ಆತ್ಮ ನಿರ್ಭರ ಭಾರತ್‌ ನಮ್ಮ ಕನಸು ಅದನ್ನು ನಾವೆಲ್ಲರೂ ಸಾಕಾರಗೊಳಿಸೋಣ ನೀವು ಕೈಮಗ್ಗದ ಬಟ್ಟೆ ಖರೀದಿ ಮಾಡಿದರೆ ದೇಶದ ಬಡ ಜನರಿಗೆ ನೆರವಾಗಲಿದೆ. ಖಾದಿ ಮಳಿಗೆಯಲ್ಲಿ ಒಂದು ದಿನದಲ್ಲಿ 1 ಕೋಟಿ ರೂ. ವಹಿವಾಟು ನಡೆಯುತ್ತದೆ ಎಂಬುದನ್ನು ತೋರಿಸಿದ್ದೀರಿ.

* ಮನ್ ಕೀ ಬಾತ್ ಆಲಿಸುತ್ತಿರುವ ಯುವ ಜನರಿಗೆ ನಾನು ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಒಂದು ಸಮೀಕ್ಷೆಯ ಪ್ರಕಾರ 35 ವರ್ಷದೊಳಗಿನ ಹೆಚ್ಚು ಜನರು ಮನ್ ಕೀ ಬಾತ್ ಹೆಚ್ಚು ಕೇಳುತ್ತಾರೆ ಎಂಬುದು ತಿಳಿದು ಬಂದಿದೆ.

* ಮನ್ ಕೀ ಬಾತ್‌ನಲ್ಲಿ ನಾವು ದೇಶದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡುತ್ತೇವೆ. ಇಲ್ಲಿ ಹೊಸ ಹೊಸ ಉದ್ಯಮದ ಐಡಿಯಾಗಳು ಸಿಗುತ್ತವೆ. ಯುವಕರು ಈ ಮೂಲಕ ಪ್ರೇರಿತರಾಗಿ ಕಾರ್ಯ ನಿರ್ವಹಣೆ ಮಾಡಲು ಅನುಕೂಲವಾಗಿದೆ.

ಮೈದಾ, ಗೋಧಿ ಹಿಟ್ಟಿಗೆ ಪರ್ಯಾಯ ಈ ಬಾಕಾಹು..! ಏನಿದು ?

* ನಾವು ತಂತ್ರಜ್ಞಾನದ ವಿಚಾರದ ಬಗ್ಗೆ ಮಾತನಾಡುತ್ತೇವೆ. ಮದ್ರಾಸ್ ಐಐಟಿಯ ವಿದ್ಯಾರ್ಥಿಗಳು 3ಡಿ ಪ್ರಿಂಟಿಂಗ್ ಯೂನಿಟ್ ಸ್ಥಾಪನೆ ಮಾಡಿದ್ದಾರೆ. ನಿರ್ಮಾಣ ಕ್ಷೇತ್ರದಲ್ಲಿ ತಂತ್ರಜ್ಞಾನದಿಂದ ಕೆಲಸಗಳು ಬೇಗ ನಡೆಯುತ್ತಿವೆ ಎಂದು ಮೋದಿ ಹೇಳಿದರು.

* ನಾವು ಹೊಸದನ್ನು ಕಲಿಯಬೇಕಾದರೆ ಪ್ರಯೋಗಳನ್ನು ಮಾಡಬೇಕು. ರೈತರು, ಯುವಕರು ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಯಶಸ್ಸು ಕಂಡಿದ್ದಾರೆ.

* ಸೇಬು ಎಂದರೆ ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳು ಕಣ್ಣಮುಂದೆ ಬರುತ್ತವೆ. ಆದರೆ ಇಂದು ಮಣಿಪುರದಲ್ಲಿಯೂ ಸೇಬು ಬೆಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ತರಬೇತಿ ಮುಗಿಸಿಕೊಂಡು ಬಂದು ಇಂದು ಸೇಬು ಬೆಳೆಯುತ್ತಿದ್ದಾರೆ. ಈಗ ಹಲವು ರೈತರು ಇವರಿಂದ ಪ್ರೇರಣೆ ಪಡೆದಿದ್ದಾರೆ.

* ಬಾಳೆ ಮರದ ನಾರಿನಿಂದ ಇಂದು ಹ್ಯಾಂಡ್ ಬ್ಯಾಗ್ ತಯಾರು ಮಾಡಲಾಗುತ್ತಿದೆ. ಇದರಿಂದ ಮಹಿಳೆಯರಿಗೆ ಅವರ ಗ್ರಾಮದಲ್ಲಿಯೇ ಉದ್ಯೋಗ ಸಿಕ್ಕಿದೆ. ಕರ್ನಾಟಕದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಬಾಳೆಯ ವಿವಿಧ ಉತ್ಪನ್ನಗಳನ್ನು ಬಾಳೆ ಹಿಟ್ಟಿನಿಂದ ತಯಾರು ಮಾಡುತ್ತಿದ್ದಾರೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ.

* ಚಂಡೀಗಢ್‌ನಲ್ಲಿ ವ್ಯಕ್ತಿಯೊಬ್ಬರು ಚಾಟ್‌ ಮಾರಾಟ ಮಾಡುತ್ತಾರೆ. ಕೋವಿಡ್ ಲಸಿಕೆ ಪಡೆದವರಿಗೆ ಅದೇ ದಿನ ಉಚಿತವಾಗಿ ಚೋಲೆ, ಪಟೋರೆ ನೀಡುತ್ತಿದ್ದಾರೆ. ಲಸಿಕೆ ಪಡೆದ ಸಂದೇಶ ತೋರಿಸಿದರೆ ಉಚಿತವಾಗಿ ಚಾಟ್ ಸಹಿಯಬಹುದಾಗಿದೆ.

* ತಮಿಳುನಾಡಿನ ರಾಧಿಕಾ ಗುಡ್ಡ ಪ್ರದೇಶದಲ್ಲಿ ವಾಸಿಸುವ ಜನರಿಗೆ ಆರೋಗ್ಯ ಸೇವೆ ನೀಡಲು ಅಂಬ್ಯುಲೆನ್ಸ್ ಸೇವೆ ಆರಂಭಿಸಿದ್ದಾರೆ. ಈಗ 6 ಅಂಬ್ಯುಲೆನ್ಸ್ ಇದೆ, ಆಕ್ಸಿಜನ್, ಸ್ಟ್ರೇಚ್ಚರ್ ಸೇರಿದಂತೆ ವಿವಿಧ ಸೌಲಭ್ಯಗಳಿವೆ. ಇದರಿಂದಾಗಿ ಮಹಿಳೆಯರು, ಬಡ ಜನರಿಗೆ ಅನುಕೂಲವಾಗಿದೆ.

* ಮುಂದಿನ ಎಲ್ಲಾ ಹಬ್ಬಗಳ ಶುಭಾಶಯಗಳನ್ನು ಮೋದಿ ಜನರಿಗೆ ತಿಳಿಸಿದರು. ಕೋವಿಡ್ ನಮ್ಮ ನಡುವೆಯೇ ಇದೆ. ಹಬ್ಬದ ಸಂಭ್ರಮದಲ್ಲಿ ಜನರು ಕೋವಿಡ್ ಮಾರ್ಗಸೂಚಿಗಳನ್ನು ಮರೆಯಬಾರದು ಎಲ್ಲರೂ ತಪ್ಪದೇ ಮಾಸ್ಕ್ ಧರಿಸಬೇಕು ಎಂದು ಕರೆಯನ್ನು ಕೊಟ್ಟರು.

Latest Videos
Follow Us:
Download App:
  • android
  • ios