Asianet Suvarna News Asianet Suvarna News

ದೀದಿಗೆ ಆತಂಕ; ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಕುರಿತು ಕೇಂದ್ರದ ಅಭಿಪ್ರಾಯ ಕೇಳಿದ ಕೋರ್ಟ್!

  • ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಕುರಿತು ವಿಚಾರಣೆಗೆ ಸುಪ್ರೀಂ ಸಮ್ಮತಿ
  • ರಾಷ್ಟ್ರಪತಿ ಆಳ್ವಿಕೆ ಹೇರುವ ಕುರಿತು ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿದ ಕೋರ್ಟ್
  • ಸುಪ್ರೀಂ ನಡೆಯಿಂದ ಟಿಎಂಸಿ ಹಾಗೂ ಮಮತಾ ಬ್ಯಾನರ್ಜಿಗೆ ಶುರುವಾಯ್ತು ಆತಂಕ
     
Supreme Court agreed to hear plea seeking direction to Centre to impose President Rule in West Bengal ckm
Author
Bengaluru, First Published Jul 1, 2021, 8:05 PM IST

ನವದೆಹಲಿ(ಜು.01): ಪಶ್ಚಿಮ ಬಂಗಾಳ ಸರ್ಕಾರ, ರಾಜ್ಯಪಾಲರ ನಡುವಿನ ತಿಕ್ಕಾಟ ಒಂದೆಡೆಯಾದರೆ ಮತ್ತೊಂದಡೆ ಇದೀಗ ಸಿಎಂ ಮಮತಾ ಬ್ಯಾನರ್ಜಿ ಆತಂಕ ಹೆಚ್ಚಾಗಿದೆ. ಕಾರಣ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿದೆ. ಇದು ದೀದಿ ಟಿಎಂಸಿ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ಬಂಗಾಳ ರಾಜ್ಯ​ಪಾ​ಲರ ಮೇಲೆ ದೀದಿ ಭ್ರಷ್ಟಾಚಾ​ರ ಆರೋ​ಪ!

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ಬಳಿಕ  ನಡೆದ ಹಿಂಸಾಚಾರ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಅರ್ಜಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಲು ಕೋರಲಾಗಿದೆ. ಈ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮಿತಿಸಿದೆ.

ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಹಾಗೂ ವಿನೀತ್ ಸರನ್ ನೇತೃತ್ವ ಪೀಠ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಮುಂದಾಗಿದೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ಹಾಗೂ ಚುನಾವಣಾ ಆಯೋಗಕ್ಕೆ ನೊಟೀಸ್ ನೀಡಿದೆ. 

ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ಜಸ್ಟೀಸ್!

ಹಿಂಸಾಚಾರ ಹಾಗೂ ರಾಷ್ಟ್ರಪತಿ ಆಳ್ವಿಕೆ ಕುರಿತು ಕೇಂದ್ರ ಸರ್ಕಾರ ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರು ಹಿಂದೂ ಮನಗಳಿಗೆ ಬೆಂಕಿ ಇಟ್ಟಿದ್ದಾರೆ. ಹಲವರ ಮೇಲೆ ಹಲ್ಲೆ ಮಾಡಿದ್ದಾರೆ. ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
 

Follow Us:
Download App:
  • android
  • ios