ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡದ ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ವರ್ಗಾವಣೆ!
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ಸೇರಿದಂತೆ ವಿವಿಧ ಹೈಕೋರ್ಟ್ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ನವದೆಹಲಿ (ಆ.11): ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ಅವರನ್ನು ವರ್ಗಾವಣೆ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ, "ಉತ್ತಮ ನ್ಯಾಯದಾನ" ಎಂದು ಉಲ್ಲೇಖಿಸಿ ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಯನ್ನು ಕೊಲಿಜಿಯಂ ಮಾಡಿದೆ. ಪ್ರಚ್ಛಕ್ ಅವರನ್ನು ಗುಜರಾತ್ ಹೈಕೋರ್ಟ್‌ನಿಂ ಬಿಹಾರದ ಪಾಟ್ನಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಶಿಫಾರಸು ಮಾಡಿದೆ. ಮಾನನಷ್ಟ ಮೊಕದ್ದಮೆಯಲ್ಲಿನ ಶಿಕ್ಷೆಯ ವಿರುದ್ಧ ರಾಹುಲ್ ಗಾಂಧಿಯ ಮೇಲ್ಮನವಿಯನ್ನು ಪರಿಗಣಿಸಲು ನಿರಾಕರಿಸಿದ ನ್ಯಾಯಮೂರ್ತಿ ಗೀತಾ ಗೋಪಿ ಮತ್ತು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸಮೀರ್ ದವೆ ಸೇರಿದಂತೆ ಗುಜರಾತ್ ಹೈಕೋರ್ಟ್‌ನ ಇತರ ಮೂವರು ನ್ಯಾಯಾಧೀಶರನ್ನು ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.
ನ್ಯಾಯಮೂರ್ತಿ ಸಮೀರ್ ದವೆ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ಸ್ಥಳಾಂತರಿಸಲಾಗುವುದು ಮತ್ತು ನ್ಯಾಯಮೂರ್ತಿ ಗೀತಾ ಗೋಪಿ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಲಾಗುವುದು. ಗುಜರಾತ್ ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಾಧೀಶ ನ್ಯಾಯಮೂರ್ತಿ ಅಲ್ಪೇಶ್ ವೈ ಕೊಗ್ಜೆ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಇವುಗಳಲ್ಲದೆ, ಅಲಹಾಬಾದ್, ಗುಜರಾತ್ ಮತ್ತು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗಳ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ, ನ್ಯಾಯಮೂರ್ತಿಗಳಾದ ಎಎಸ್ ಸಾಂಗ್ವಾನ್, ಅವನೀಶ್ ಜಿಂಗಾನ್, ಆರ್‌ಎಂ ಸಿಂಗ್ ಮತ್ತು ಅರುಣ್ ಮೊಂಗಾ ಕ್ರಮವಾಗಿ ಅಲಹಾಬಾದ್, ಗುಜರಾತ್, ಮಧ್ಯಪ್ರದೇಶ ಮತ್ತು ರಾಜಸ್ಥಾನ ಹೈಕೋರ್ಟ್‌ಗಳಿಗೆ ವರ್ಗಾವಣೆಯಾಗಲಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ವಿಕೆ ಸಿಂಗ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ.
ಇಡೀ ಭಾರತವೇ ನನ್ನ ಮನೆ: ಆ.12ರಿಂದ ತವರು ಕ್ಷೇತ್ರ ವಯನಾಡ್‌ಗೆ ರಾಹುಲ್ ಭೇಟಿ
ಭಾರತದ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಕೊಲಿಜಿಯಂ ಆಗಸ್ಟ್ 3 ರಂದು ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿತು.
ರಾಹುಲ್‌ಗೆ ಮರಳಿ ಸಂಸತ್ ಸದಸ್ಯತ್ವ: ಇಂದು ನಿರ್ಧಾರ, ತಪ್ಪಿದಲ್ಲಿ ಕಾಂಗ್ರೆಸ್ ಸುಪ್ರೀಂಗೆ ಮೊರೆ?