ಬೆಂಗಳೂರು(ಮೇ.06): ಮಹತ್ವದ ಆದೇಶವೊಂದನ್ನು ನೀಡಿರುವ ಸುಪ್ರೀಂಕೋರ್ಟ್‌, ಶೇ.50ರ ಮೀಸಲಾತಿ ಮಿತಿಯನ್ನು ಮೀರಿ ಶಿಕ್ಷಣ ಹಾಗೂ ಸರ್ಕಾರಿ ನೌಕರಿಗಳಲ್ಲಿ ಮಹಾರಾಷ್ಟ್ರ ಸರ್ಕಾರ ಜಾರಿಗೊಳಿಸಿದ್ದ ಮರಾಠಾ ಮೀಸಲಾತಿಯನ್ನು ರದ್ದುಗೊಳಿಸಿದೆ. ಆದರೆ, ಈ ತೀರ್ಪು ಆಯಾ ರಾಜ್ಯಗಳ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗೆ ತಕ್ಕಂತೆ ಅನ್ವಯವಾಗಲಿದೆ. ಕರ್ನಾಟಕದಲ್ಲಿ ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಿಸಬೇಕೆಂಬ ಮನವಿ ಕೂಡಾ ದತ್ತಾಂಶಗಳನ್ನು (ಎಂಪರಿಕಲ್‌ ಡಾಟಾ) ಪರಿಗಣಿಸಿ ಹೆಚ್ಚಿಸಲು ಅವಕಾಶ ಇದೆ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ಈ ತೀರ್ಪು ಕೇಂದ್ರ ಸರ್ಕಾರ ಇತ್ತೀಚೆಗೆ ಮೇಲ್ವರ್ಗದ ಬಡವರಿಗೆ ಶೇ.10ರಷ್ಟುಮೀಸಲಾತಿ ನೀಡಿರುವ ಕ್ರಮಕ್ಕೆ ತದ್ವಿರುದ್ಧವಾಗಿದ್ದು, ಗೊಂದಲಕ್ಕೀಡು ಮಾಡಿದೆ ಎಂದು ಕೆಲವು ತಜ್ಞರು ಅನಿಸಿಕೆ ವ್ಯಕ್ತಪಡಿಸಿದ್ದಾರೆ.

'ಮರಾಠ ನಿಗಮ ಹಿಂಪಡೆಯದಿದ್ದರೆ ಸಾಹಿತ್ಯ ಸಮ್ಮೇಳನ ನಡೆಸಲು ಬಿಡಲ್ಲ’

ಇಂದಿರಾ ಸಾಹ್ನಿ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣ ಶೇ.50 ಮೀರುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದ್ದರೂ, ಪ್ರಾಯೋಗಿಕ ದತ್ತಾಂಶಗಳನ್ನು ಪರಿಶೀಲಿಸಿ ವಿಶೇಷ ಪ್ರಕರಣವೆಂದು ಪರಿಗಣಿಸುವುದಕ್ಕೆ ಅವಕಾಶ ನೀಡಬಹುದು ಎಂದು ತಿಳಿಸಿದೆ. ಹೀಗಾಗಿ ರಾಜ್ಯದಲ್ಲಿ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ನಡೆಸಿದ್ದು, ಈ ದತ್ತಾಂಶÜವನ್ನು ಸುಪ್ರೀಂಕೋರ್ಟ್‌ ತೀರ್ಪಿಗೆ ಸಲ್ಲಿಸಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವುದಕ್ಕೆ ಅವಕಾಶ ಇದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್‌.ಕಾಂತರಾಜ್‌ ಅಭಿಪ್ರಾಯ ಪಟ್ಟಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಮತ್ತೊಬ್ಬರ ಮಾಜಿ ಅಧ್ಯಕ್ಷ ಸಿ.ಎಸ್‌.ದ್ವಾರಕಾನಾಥ್‌, ಕೇಂದ್ರ ಸರ್ಕಾರ ಈಗಾಗಲೇ ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ನೀಡಿದ್ದು, ಶೇ.50ನ್ನು ಮೀರಿದಂತಾಗಿದೆ. ಈ ಸಂಬಂಧ ಸಲ್ಲಿಕೆಯಾಗಿರುವ ಪ್ರಕರಣಗಳು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿವೆ. ಹೀಗಿರುವಾಗ ಶೇ.50 ರಷ್ಟುಮೀಸಲಾತಿ ಮೀರುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ತೀರ್ಪು ನೀಡಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಸುಪ್ರೀಂಕೋರ್ಟ್‌ನ ತೀರ್ಪುಗಳು ತದ್ವಿರುದ್ಧವಾಗಿದ್ದು, ಕಾನೂನು ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಮಾರಾಠಿ ಭಾಷಾ ಪ್ರೇಮ ಮೆರೆದ ಕಾಂಗ್ರೆಸ್‌ ಶಾಸಕಿ : ಚುನಾವಣಾ ಬಹಿಷ್ಕಾರ ಎಚ್ಚರಿಕೆ

ಸರ್ಕಾಗಳು ಮೀಸಲಾತಿ ನೀಡುವ ಸಂದರ್ಭದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸು ಮತ್ತು ಕೇಂದ್ರ ಹಿಂದುಳದ ವರ್ಗಗಳ ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ಮುಂದಾಗಬೇಕು. ಆದರೆ, ಸರ್ಕಾರಗಳು ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿದಲ್ಲಿ ಸುಪ್ರೀಂಕೋರ್ಟ್‌ ಅಂಗೀಕರಿಸುವುದಿಲ್ಲ ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ವಿವರಿಸಿದ್ದಾರೆ.