ಮಹದಾಯಿ ಕಾನೂನು ಹೋರಾಟ: ರಾಜ್ಯಕ್ಕೆ ಮತ್ತೊಂದು ಜಯ, ಗೋವಾಗೆ ಮುಖಭಂಗ

ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ  ಜಯ| ಗೋವಾ ಮೇಲ್ಮನವಿ ವಜಾ ಗೊಳಿಸಿದ ಸುಪ್ರೀಂ| ಗೋವಾ ಸರ್ಕಾರಕ್ಕೆ ಭಾರೀ ಹಿನ್ನಡೆ|ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು| ಕೇಂದ್ರ ಸರ್ಕಾರದ ನಡೆ ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು|
 

Supreme Court Dismissed Appeal from Goa for Mahadayi Dipute

ನವದೆಹಲಿ[ಮಾ.02]: ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ  ಮತ್ತೊಂದು ಜಯ ಸಿಕ್ಕಿದೆ. ಹೌದು, ಮಹಾದಾಯಿ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಈ ಮೂಲಕ ಗೋವಾ ಸರ್ಕಾರಕ್ಕೆ ಭಾರೀ ಹಿನ್ನೆಡೆಯಾಗಿದೆ. 

"

ಮಹದಾಯಿ: ಗೋವಾಗೆ ತಿರುಗೇಟು ನೀಡಲು ಕರ್ನಾಟಕ ಸಜ್ಜು

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕೇಂದ್ರ ಸರ್ಕಾರದ ನಡೆಯನ್ನ ಪ್ರಶ್ನಿಸಿ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿತ್ತು. ಹೀಗಾಗಿ ಈ ವಿಶೇಷ ಮೇಲ್ಮನವಿಯನ್ನ ಕೈಗೆತ್ತಿಕೊಂಡ ಸುಪ್ರೀಂ ಮಹಾದಾಯಿ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ ಎಂದು ತೀರ್ಪು ನೀಡುವ ಮೂಲಕ ಗೋವಾ ಸರ್ಕಾರದ ಮೇಲ್ಮನವಿಯನ್ನ ವಜಾ ಗೊಳಿಸಿದೆ. 

ಕರ್ನಾಟಕ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ನೇತೃತ್ವದ ವಕೀಲರ ತಂಡ ವಾದ ಮಂಡಿಸಿದೆ. ಈ ತೀರ್ಪಿನ ಮೂಲಕ ಉತ್ತರ ಕರ್ನಾಟಕದ ರೈತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. 

ಮಹದಾಯಿ: ಕರ್ನಾಟಕಕ್ಕೆ ಜಯ, ಗೋವಾದ ತಕರಾರಿಗೆ ಮಣೆ ಹಾಕದ ಕೇಂದ್ರ!

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಅಡ್ವೋಕೇಟ್ ಜನರಲ್ [ಎಜಿ] ಪ್ರಭುಲಿಂಗ ನಾವಡಗಿ ಅವರು, ಮಹದಾಯಿ ಕಾನೂನು ಹೋರಾಟದಲ್ಲಿ ರಾಜ್ಯಕ್ಕೆ ಜಯ ಸಿಕ್ಕಿದೆ. ಈ ಮೂಲಕ ಮತ್ತೆ ಕ್ಯಾತೆ ತೆಗೆದಿದ್ದ ಗೋವಾ ಸರ್ಕಾರಕ್ಕೆ ಭಾರೀ ಹಿನ್ನೆಡೆಯಾಗಿದೆ. ಮಹದಾಯಿ ಕಾಮಗಾರಿ ಆರಂಭಕ್ಕೆ ಯಾವುದೇ ಅಡ್ಡಿ ಇಲ್ಲ, ಟ್ರಿಬ್ಯುನಲ್ ಆದೇಶದನ್ವಯ ಕರ್ನಾಟಕ ಕಾಮಗಾರಿ ನಡೆಸಬಹುದು. ಗೋವಾ ಸರ್ಕಾರದ ಅರ್ಜಿಯನ್ನ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ ಎಂದು ಹೇಳಿದ್ದಾರೆ. 

Latest Videos
Follow Us:
Download App:
  • android
  • ios