ರಫೇಲ್ ಹಗರಣದ ಅರ್ಜಿ ವಜಾ: ಮೋದಿಗೆ ಕ್ಲೀನ್ ಚಿಟ್, ರಾಹುಲ್‌ಗೆ ಮುಖಭಂಗ!
ಪ್ರಧಾನಿ ಮೋದಿಗೆ ಸುಪ್ರೀಂ ಕ್ಲೀನ್ ಚಿಟ್| ರಫೇಲ್ ಡೀಲ್ ತನಿಖೆ ಇಲ್ಲ ಎಂದ ಸುಪ್ರೀಂ| ರಫೇಲ್ ಡೀಲ್ ತನಿಖೆ ಕೋರಿದ್ದ ಅರ್ಜಿ ವಜಾ| ಅರುಣ್ ಶೌರಿ, ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಅರ್ಜಿ ವಜಾ| ರಫೇಲ್ ಡೀಲ್ ಬಗ್ಗೆ ತನಿಖೆಗೆ ಸುಪ್ರೀಂಕೋರ್ಟ್ ನಕಾರ
"
ನವದೆಹಲಿ[ನ.14]: ಬಹು ವಿವಾದಿತ ರಫೇಲ್ ಖರೀದಿ ಹಗರಣ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪ್ರಧಾನಿ ಮೋದಿಗೆ ಮತ್ತೆ ಕ್ಲೀನ್ ಚಿಟ್ ಸಿಕ್ಕಿದ್ದು, ಕೈಗೆ ತೀವ್ರ ಮುಖಭಂಗವಾಗಿದೆ. ಇಷ್ಟೇ ಅಲ್ಲದೇ ಕೈ ನಾಯಕ ರಾಹುಲ್ ಗಾಂಧಿಗೆ ಎಚ್ಚರಿಕೆಯಿಂದಿರುವಂತೆ ಸುಪ್ರೀಂ ಕೋರ್ಟ್ ವಾರ್ನಿಂಗ್ ನೀಡಿದೆ.
ರಫೇಲ್ ಡೀಲ್ ತನಿಖೆ ಕೋರಿದ್ದ ಅರುಣ್ ಶೌರಿ, ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಬಹು ವಿವಾದಿತ ರಫೇಲ್ ಯುದ್ಧವಿಮಾನ ಖರೀದಿ ಪ್ರಕರಣ ಬಹುತೇಕ ಅಂತ್ಯಗೊಂಡಿದೆ.
ಶಬರಿಮಲೆ ವಿವಾದ: ಮಹಿಳೆಯರ ಪ್ರವೇಶಕ್ಕಿಲ್ಲ ತಡೆ, ಆದರೆ ಇದೇ ತೀರ್ಪು ಅಂತಿಮವಲ್ಲ
ಏನಿದು ವಿವಾದ?
‘ಫ್ರಾನ್ಸ್ ಜತೆಗಿನ ರಫೇಲ್ ಯುದ್ಧವಿಮಾನ ಖರೀದಿ ಸರಿ ಇದೆ’ ಎಂದು ಮೋದಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕ್ಲೀನ್‌ಚಿಟ್ ನೀಡಿತ್ತು. ಆದರೆ ಈ ತೀರ್ಪಿನ ವಿರುದ್ಧ ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ, ಅರುಣ್ ಶೌರಿ, ವಕೀಲ ಪ್ರಶಾಂತ ಭೂಷಣ್, ಆಮ್ ಆದ್ಮಿ ಪಾರ್ಟಿ ಸಂಸದ ಸಂಜಯ ಸಿಂಗ್ ಹಾಗೂ ಇನ್ನೂ ಕೆಲವರು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯ ಮೇ 10ರಂದು ತೀರ್ಪು ಕಾಯ್ದಿರಿಸಿತ್ತು.
ಶಬರಿಮಲೆ ಸುಪ್ರೀಂ ಆದೇಶ: ಕೇರಳದಲ್ಲಿ ಮತ್ತೆ ಅದೇ ಆವೇಶ!
ನವೆಂಬರ್ 14ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ