ನವದೆಹಲಿ(ಆ.31): ಸುಪ್ರೀಂಕೋರ್ಟ್‌ ಹಾಗೂ ಮುಖ್ಯ ನ್ಯಾಯಮೂರ್ತಿ ವಿರುದ್ಧವೇ ಆಕ್ಷೇಪಾರ್ಹ ಟ್ವೀಟ್‌ ಮಾಡಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ವಕೀಲ ಮತ್ತು ಹೋರಾಟಗಾರ ಪ್ರಶಾಂತ್‌ ಭೂಷಣ್‌ಗೆ ಸುಪ್ರೀಂ ಕೋರ್ಟ್ ಒಂದು ರೂಪಾಯಿ ದಂಡ ವಿಧಿಸಿದೆ. 

ಪ್ರಕರಣ ಸಂಬಂಧ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ಸೆ.15 ರೊಳಗೆ ದಂಡ ಪಾವತಿಸುವಂತೆ ಆದೇಶಿಸಿದೆ. ಇದನ್ನು ಪಾವತಿ ಮಾಡದಿದ್ದರೆ  ವಕೀಲಿ ವೃತ್ತಿಯಿಂದ ಬ್ಯಾನ್ ಅಥವಾ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದಿದೆ. ನ್ಯಾ.ಅರುಣ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ನೀಡಿದೆ

ಪ್ರಶಾಂತ್ ಭೂಷಣ್‌ ವಿರುದ್ಧ ನ್ಯಾಯಾಂಗ ನಿಂದನೆ ತೀರ್ಪು ಮುಂದಕ್ಕೆ!

ಏನಿದು ಕೇಸ್‌?:

ಕಳೆದ 6 ವರ್ಷಗಳಲ್ಲಿ ದೇಶದ ಪ್ರಜಾಪ್ರಭುತ್ವವನ್ನು ಹಾಳು ಮಾಡುವುದರಲ್ಲಿ ಹಿಂದಿನ ನಾಲ್ಕು ಸಿಜೆಗಳು ಪಾತ್ರ ವಹಿಸಿದ್ದಾರೆ ಎಂದು ಭೂಷಣ್‌ ಟ್ವೀಟ್‌ ಮಾಡಿದ್ದರು. ಅಲ್ಲದೆ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ಅವರು ಹಾರ್ಲೆ ಡೇವಿಡ್‌ಸನ್‌ ಬೈಕ್‌ ಅನ್ನು ಹೆಲ್ಮೆಟ್‌, ಮಾಸ್ಕ್‌ ಇಲ್ಲದೆ ಓಡಿಸುತ್ತಿದ್ದನ್ನು ಟೀಕಿಸಿದ್ದರು. ಈ ಸಂಬಂಧ ನ್ಯಾಯಾಂಗ ನಿಂದನೆ ವಿಚಾರಣೆ ಆರಂಭಿಸಿದ್ದ ಸುಪ್ರೀಂಕೋರ್ಟ್‌, ಆ.14ರಂದು ಭೂಷಣ್‌ ದೋಷಿ ಎಂದು ತೀರ್ಪು ನೀಡಿತ್ತು. ಭೂಷಣ್‌ ಅವರಿಗೆ ಗರಿಷ್ಠ 6 ತಿಂಗಳು ಸಜೆ ಅಥವಾ 2 ಸಾವಿರ ರು. ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶ ನ್ಯಾಯಾಲಯಕ್ಕಿದೆ.