ಒನ್ ರ‍್ಯಾಂಕ್, ಒನ್ ಪೆನ್ಷನ್: ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿ 2 ಲಕ್ಷ ದಂಡ ವಿಧಿಸಿದ ಸುಪ್ರೀಂ

ನವೆಂಬರ್ 14ರೊಳಗೆ ಎಲ್ಲಾ ಪಿಂಚಣಿ ಸಮಸ್ಯೆಗಳನ್ನು ಸರಿಪಡಿಸಲು ಸರ್ಕಾರಕ್ಕೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 25ಕ್ಕೆ ಮುಂದೂಡಲಾಗಿದೆ.

supreme-court-raps-central-government-on-One Rank One Pension case-imposed-fine-of-rs-2-lakhs mrq

ನವದೆಹಲಿ: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್ (Supreme Court) 2 ಲಕ್ಷ ರೂಪಾಯಿ ದಂಡ ವಿಧಿಸಿದೆ. ಒಂದು ಶ್ರೇಣಿ, ಒಂದು ಪಿಂಚಣಿ ಯೋಜನೆಯಡಿ (One Rank One Pension Scheme) ನಿವೃತ್ತ ಸೇನಾ ಕ್ಯಾಪ್ಟನ್‌ಗಳ ಪಿಂಚಣಿ ಕುರಿತು ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆ ಸುಪ್ರೀಂ ಕೋರ್ಟ್, ಪಿಂಚಣಿಯನ್ನು ಶೇಕಡಾ 10 ರಷ್ಟು ಹೆಚ್ಚಿಸಬೇಕು. ನವೆಂಬರ್ 14ರೊಳಗೆ ಎಲ್ಲಾ ಪಿಂಚಣಿ ಸಮಸ್ಯೆಗಳನ್ನು ಸರಿಪಡಿಸಲು ಸರ್ಕಾರಕ್ಕೆ ಆದೇಶಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 25ಕ್ಕೆ ಮುಂದೂಡಲಾಗಿದೆ. ಕೇಂದ್ರ ಸರ್ಕಾರ ದಂಡವನ್ನು ಒಂದು ತಿಂಗಳೊಳಗೆ ಸಶಸ್ತ್ರ ಪಡೆಗಳ ಕಲ್ಯಾಣ ನಿಧಿಗೆ (Armed Forces Welfare Fund) ಜಮೆ ಮಾಡಬೇಕು ಎಂದು ನ್ಯಾಯಾಲಯ ಆದೇಶ ನೀಡಿದೆ. 2021ರಿಂದ ಒನ್ ರ‍್ಯಾಂಕ್, ಒನ್ ಪೆನ್ಷನ್ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸುತ್ತಿದೆ.

Latest Videos
Follow Us:
Download App:
  • android
  • ios