ಹಿಂದೂ ಹೋರಾಟಕ್ಕೆ ಗೆಲುವು, ಗ್ಯಾನವಾಪಿ ಮಸೀದಿಯಲ್ಲಿ ಪೂಜೆ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಣೆ!

ಗ್ಯಾನವಾಪಿ ಹೋರಾಟದಲ್ಲಿ ಹಿಂದೂಗಳಿಗ ಅತೀ ದೊಡ್ಡ ಗೆಲುವು ಸಿಕ್ಕಿದೆ. ವಾರಣಾಸಿ ಜಿಲ್ಲಾ ಕೋರ್ಟ್, ಅಲಹಾಬಾದ್ ಹೈಕೋರ್ಟ್ ಬಳಿಕ ಇದೀಗ ಸುಪ್ರೀಂ ಕೋರ್ಟ್‌ನಲ್ಲೂ ವ್ಯಾಸ ಠಿಖಾನದಲ್ಲಿ ಹಿಂದೂ ದೇವರ ಪೂಜೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇದೇ ವೇಳೆ ಮಸೀದಿ ಸಮಿತಿ ಅರ್ಜಿಯನ್ನು ವಜಾಗೊಳಿಸಿದೆ. 

Supreme Court refuse to stay Allahabad high court order on allowing Hindu perform prayers inside Gyanvapi Mosque ckm

ನವದೆಹಲಿ(ಏ.01) ವಾರಣಾಸಿ ಗ್ಯಾನವಾಪಿ ಮಸೀದಿ ನೆಲಮಹಡಿಯಲ್ಲಿ ದೇವರ ಪೂಜೆಗೆ ಹಿಂದೂಗಳಿಗೆ ಅವಕಾಶ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸಮೀದಿಗೆ ಸಮೀತಿಗೆ ಹಿನ್ನಡೆಯಾಗಿದೆ.  ವಾರಣಾಸಿ ಜಿಲ್ಲಾ ಕೋರ್ಟ್, ಅಲಹಾಬಾದ್ ಹೈಕೋರ್ಟ್ ಬಳಿಕ ಸುಪ್ರೀಂ ಕೋರ್ಟ್‌ನಲ್ಲೂ ಹಿಂದೂಗಳಿಗ ಭರ್ಜರಿ ಗೆಲುವಾಗಿದೆ. ಮಸೀದಿಯ ನೆಲಮಹಡಿಯಲ್ಲಿರುವ ವ್ಯಾಸ್‌ ಠಿಖಾನಾ ಎಂದೂ ಕರೆಯಲಾಗುವ ಜ್ಞಾನವಾಪಿ ಮಸೀದಿಯ ದಕ್ಷಿಣದ ಭಾಗದ ನೆಲಮಹಡಿಯಲ್ಲಿನ ಮೂರ್ತಿಗಳಿಗೆ ಪೂಜೆ ಮಾಡಲು ಅವಕಾಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಮೂಲಕ ಮಸೀದಿ ಸಮಿತಿಯ ಅರ್ಜಿಯನ್ನು ವಜಾಗೊಳಿಸಿದೆ.

ಗ್ಯಾನವಾಪಿ ಮಸೀದಿ ಉಸ್ತುವಾರಿ ವಹಿಸಿರುವ ಅಂಜುಮನ್‌ ಇಂತೇಝಾಮಿಯಾ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇಂದು ಸುಪ್ರೀಂ ಕೋರ್ಟ್ ಮುಖ್ಯನ್ಯಾಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಈ ಅರ್ಜಿ ಕುರಿತು ವಿಚಾರಣೆ ನಡೆಸಿ ಆದೇಶ ನೀಡಿದೆ. ಅಲಹಾಬಾದ್ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್, ಹಿಂದೂಗಳ ಪೂಜೆಗೆ ತಡೆ ನೀಡಲು ನಿರಾಕರಿಸಿದೆ. ಇದೇ ವೇಳೆ ಮಸೀದಿ ಆವರಣದೊಳಗೆ ಹಿಂದೂಗಳ ಧಾರ್ಮಿಕ ಆಚರಣೆಗಳ ಮೇಲೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.  

ಭೋಜಶಾಲಾ ದೇವಾಲಯ ಸಂಕೀರ್ಣದ ಎಎಸ್‌ಐ ಸರ್ವೆಗೆ ಆದೇಶ ನೀಡಿದ ಹೈಕೋರ್ಟ್‌!

ಮಸೀದಿಯ ನೆಲಮಹಡಿಯಲ್ಲಿರುವ ಹಿಂದೂ ಮೂರ್ತಿಗಳ ಪೂಜೆಗೆ ಅವಕಾಶ ನೀಡುವಂತೆ ವಾರಣಾಸಿ ಕೋರ್ಟ್‌ನಲ್ಲಿ ಸುದೀರ್ಘ ವಿಚಾರಣೆ ನಡೆದಿತ್ತು. ಈ ಹೋರಾಟದಲ್ಲಿ ಜನವರಿ 31ರಂದು ಮಹತ್ವದ ಗೆಲುವು ಸಿಕ್ಕಿತ್ತು. ವಾರಣಾಸಿ ಜಿಲ್ಲಾ ನ್ಯಾಯಾಲಯ ಜನವರಿ 31ಕ್ಕೆ ಹಿಂದೂಗಳಿಗೆ ಪೂಜೆಗೆ ಅವಕಾಶಕ್ಕೆ ಕೋರ್ಟ್ ಸಮ್ಮತಿಸಿತ್ತು. ಇಷ್ಟೇ ಅಲ್ಲ ಒಂದು ವಾರದೊಳಗೆ ಪೂಜೆಗೆ ಅವಕಾಶ ನೀಡಬೇಕು ಎಂದು ಆದೇಶ ನೀಡಿತ್ತು. ಇದರಂತೆ ಜನವರಿ 31ರ ತಡರಾತ್ರಿಯೇ ಪೂಜೆಗೆ ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆ ಮಾಡಿತ್ತು.

ವಾರಾಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಮುಸ್ಲಿಮ್ ಸಮಿತಿ ಪ್ರಶ್ನಿಸಿತ್ತು. ಹೈಕೋರ್ಟ್ ಕೂಡ ಈ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಕೂಟ ಹಿಂದೂಗಳ ಪೂಜೆಗೆ ಅಸ್ತು ಎಂದಿದೆ. 

ಗ್ಯಾನವಾಪಿ ಕೆಳಮಹಡಿಯ ಮಂದಿರದಲ್ಲಿ ಪೂಜೆ ಸಲ್ಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್‌!

1993ರ ಬಳಿಕ 2024ರ ಜನವರಿ 31ಕ್ಕೆ ಗ್ಯಾನವಾಪಿಸಿ ನೆಲಮಹಡಿಯಲ್ಲಿರುವ ಹಿಂದೂ ಮೂರ್ತಿಗಳಿಗೆ ಪೂಜೆ ಮಾಡಲಾಗಿತ್ತು. 1993ರಲ್ಲಿ ಅಂದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಹಿಂದೂಗಳ ಪೂಜೆಗೆ ಅವಕಾಶ ನಿರಾಕರಿಸಿದ್ದು. ಕೋಮು ಗಲಭೆ ಸೃಷ್ಟಿಯಾಗಲಿದೆ ಅನ್ನೋ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. 
 

Latest Videos
Follow Us:
Download App:
  • android
  • ios