ಚುನಾವಣಾ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ಅಮಾನತು ಮಾಡುವಂತೆ ಮಧ್ಯಂತರ ಆದೇಶ ಹೊರಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಬದಲಾಗಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ. SIR ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ಹೇಳಿದ್ದೇನು?
ನವದೆಹಲಿ (ಅ.05) ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿದೆ ಅನ್ನೋ ಗಂಭೀರ ಆರೋಪ, ಹೋರಾಟ ಇದೀಗ ಸುಪ್ರೀಂ ಕೋರ್ಟ್ ತಲುಪಿದೆ. ಗ್ಯಾನೇಶ್ ಕುಮಾರ್ ವಜಾಗೊಳಿಸಲು ಮಧ್ಯಂತರ ಆದೇಶ ನೀಡಬೇಕು ಅನ್ನೋ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ಆರೋಪಗಳಿಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಮೂವರು ಆಯುಕ್ತರಿಗೆ ನೋಟಿಸ್ ನೀಡಿದೆ.
ಸುಪ್ರೀಂ ಕೋರ್ಟ್ ಮುಖ್ಯನ್ಯಾಮೂರ್ತಿ ಸೂರ್ಯ ಕಾಂತ್, ಜಸ್ಟೀಸ್ ಜಯಮಾಲ್ಯ ಬಾಗ್ಚಿ ಹಾಗೂ ಜಸ್ಟಿಸ್ ವಿ ಮೋಹನಾ ಅವರಿದ್ದ ಪೀಠ ಚುನಾವಣಾ ಆಯೋಗದ ಮೇಲಿನ ಗಂಭೀರ ಆರೋಪಗಳ ಕುರಿತು ಅರ್ಜಿ ವಿಚಾರಣೆ ನಡೆಸಿದ್ದಾರೆ. ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಸಂಬಂಧ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆ, ಮತದಾರರನ್ನು ಉದ್ದೇಶಪೂರ್ವಕವಾಗಿ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಅನ್ನೋ ಆರೋಪಗಳ ಕುರಿತು ಅರ್ಜಿಯನ್ನು ವಿಚಾರಣೆ ನಡೆಸಲಾಗಿದೆ.
ಅಮಾನತು ಮಾಡಿ ಎಂದು ಮನವಿ
ಚುನಾವಣಾ ಆಯೋಗ ಮುಖ್ಯಸ್ಥ ಗ್ಯಾನೇಶ್ ಕುಮಾರ್ ಏಕಪಕ್ಷೀಯವಾಗಿ ಎಸ್ಐಆರ್ ವಿಚಾರದಲ್ಲಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇತರ ಇಬ್ಬರ ಅಭಿಪ್ರಾಯವನ್ನು ಪರಿಗಣಿಸದೆ ನಿರ್ಧಾರ ತೆಗೆದುಕೊಂಡಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಹಾಗ ಎಸ್ಐಆರ್ ಕುರಿತು ತೆಗೆದುಕೊಂಡ ನಿರ್ಧಾರಗಳು ಅನುಮಾನಕ್ಕೆ ಕಾರಣವಾಗಿದೆ. ಇದರಿಂದ ಮತದಾರರು ಚುನಾವಣಾ ಆಯೋಗದ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ತಕ್ಷಣಕ್ಕೆ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅಮಾತುಗೊಳಿಸಲು ಆದೇಶ ನೀಡಬೇಕು ಎಂಬ ವಾದ ಮುಂದಿಟ್ಟಿದ್ದರು.
ಚುನಾವಣಾ ಆಯೋಗ ಒಮ್ಮತದ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲಿ ಇತರ ಆಯುಕ್ತರ ಅಭಿಪ್ರಾಯ ಆಲಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆಯಾ ಅಥವಾ ಏಕಪರೀಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳಲಾಗಿದೆಯಾ ಅನ್ನೋ ಕುರಿತು ವಿಚಾರಣೆ ನಡೆಯಲಿದೆ. ಒಮ್ಮತದ ಆದೇಶವಲ್ಲ ಎಂಬುದು ಸಾಬೀತಾದರೆ ಎಸ್ಐಆರ್ ಕುರಿತು ಆದೇಶಗಳನ್ನು ರದ್ದುಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮುಖ್ಯ ಚುನಾವಣಾ ಆಯುಕ್ತರು ತೆಗೆದುಕೊಂಡ ನಿರ್ಧಾರಗಳ ವಿರುದ್ದ ಇತರ ಇಬ್ಬರು ಚುನಾವಣಾ ಆಯುಕ್ತರು 14 ಅಕ್ಷೇಪಣ ಪಟ್ಟಿ ಸಲ್ಲಿಸಿದ್ದಾರೆ. ಇದನ್ನೇ ಮುಖ್ಯ ಆಧಾರವಾಗಿಟ್ಟುಕೊಂಡು ಕೋರ್ಟ್‌ನಲ್ಲಿ ಗ್ಯಾನೇಶ್ ಕುಮಾರ್ ವಜಾಗೆ ಆಗ್ರಹಿಸಲಾಗಿದೆ. ಸದ್ಯ ವಜಾ ನಿರಾಕರಿಸಿದ ಸುಪ್ರೀಂ ಕೋರ್ಟ್, ಮೂವರಿಗೂ ಉತ್ತರಿಸುವಂತೆ ನೋಟಿಸ್ ನೀಡಿದೆ.


