ನವದೆಹಲಿ(ಜ.31): ಗಲ್ಲುಶಿಕ್ಷೆ ಪ್ರಶ್ನಿಸಿ ನಿರ್ಭಯಾ ಹತ್ಯಾಚಾರಿಗಳಲ್ಲಿ ಒಬ್ಬನಾದ ಪವನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಅಪರಾಧ ಮಾಡಿದಾಗ ತಾನು ಅಪ್ರಾಪ್ತನಾಗಿದ್ದು, ಈ ಹಿನ್ನೆಲೆಯಲ್ಲಿ ತನ್ನ ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಕೋರಿ ಪವನ್ ಗುಪ್ತಾ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದ.

ಆದರೆ ಪವನ್ ಗುಪ್ತಾ ವಾದವನ್ನು ಒಪ್ಪದ ಸರ್ವೋಚ್ಛ ನ್ಯಾಯಾಲಯ, ಆತನ ಅರ್ಜಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ರಿಹಾರ್ ಜೈಲಿನಲ್ಲಿ ನಾಲ್ವರೂ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ಸಿದ್ಧತೆ ಆರಂಭವಾಗಿದೆ.

ಗಲ್ಲು ಮೂವರಿಗೋ, ಎಲ್ಲರಿಗೋ?: ಗಂಟೆಯಲ್ಲಿನ ನಿರ್ಧಾರ!

ನಾಳೆ(ಫೆ.01) ಬೆಳಗ್ಗೆ 6 ಗಂಟೆಗೆ ನಾಲ್ವರೂ ಅಪರಾಧಿಗಳನ್ನು ಗಲ್ಲಿಗೇರಿಸಲಾಗುವುದು ಎಂದು ತಿಹಾರ್ ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.