Hindenburg report on Adani: ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್!
ಕುರಿತಾಗಿ ಹಿಂಡೆನ್‌ಬರ್ಗ್ ಮಾಡಿರುವ ವರದಿಯನ್ನು ಪ್ರಕಟಿಸುವ ಹಾಗೂ ಸುದ್ದಿ ಮಾಡಲು ತಡೆ ನೀಡುವಂತೆ ಅದಾನಿ ಗ್ರೂಪ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು, ಮಾಧ್ಯಮ ವರದಿಗಳಿಗೆ ತಡಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ನವದೆಹಲಿ (ಫೆ.24): ಅದಾನಿ ಗ್ರೂಪ್ ಆಫ್ ಕಂಪನಿಗಳ ಇತ್ತೀಚಿನ ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಮತ್ತು ಅದರ ಪರಿಣಾಮವಾಗಿ ಮಾರುಕಟ್ಟೆಯ ಮೇಲೆ ಆಗಿರುವ ಪರಿಣಾಮಕ್ಕೆ ಸಂಬಂಧಿಸಿದಂತೆ ಮಾಧ್ಯಮದ ವಿರುದ್ಧ ಯಾವುದೇ ತಡೆಯಾಜ್ಞೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಸ್ಪಷ್ಟಪಡಿಸಿದೆ. 'ಈ ವಿಚಾರದಲ್ಲಿ ನಾವು ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ನೀಡಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಶೀಘ್ರದಲ್ಲಿಯೇ ನಾವು ನಮ್ಮ ಆದೇಶ ನೀಡಲಿದ್ದೇವೆ' ಎಂದು ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿರುವ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಎಂಎಲ್ ಶರ್ಮಾ ಅವರು ಅದಾನಿ ಗ್ರೂಪ್ ವಿರುದ್ಧ ಮಾಧ್ಯಮಗಳು ಮಾಡುತ್ತಿರುವ ವರದಿಗಳಿಗೆ ತಡೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ಈ ಅದೇಶ ನೀಡಿದ್ದಾರೆ. ಇದಕ್ಕೂ ಮೊದಲು, ಫೆಬ್ರವರಿ 17 ರಂದು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾದಿರಿಸಿತ್ತು. ಶಾರ್ಟ್‌ಸೆಲ್ಲರ್ ಹಿಂಡೆನ್‌ಬರ್ಗ್ ಮಾಡಿದ್ದ ವರದಿಯಿಂದಾಗಿ ಅದಾನಿ ಗ್ರೂಪ್ ಮಾರುಕಟ್ಟೆಯಲ್ಲಿ 100 ಶತಕೋಟಿ ಡಾಲರ್ ನಷ್ಟವನ್ನು ಕಂಡಿದೆ. ಅದಾನಿ ಗ್ರೂಪ್ ಬಗ್ಗೆ ಹಿಂಡನ್‌ಬರ್ಗ್ ಮಾಡಿರುವ ವರದಿ ಹಾಗೂ ಅದರಿಂದ ಅದಾನಿ ಗ್ರೂಪ್‌ನ ಮೇಲೆ ಆದ ಪರಿಣಾಮಗಳ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿವೆ ಇದಕ್ಕೆ ತಡೆ ನೀಡಬೇಕು ಎಂದು ಕೋರ್ಟ್‌ನಲ್ಲಿ ನಾಲ್ಕು ಅರ್ಜಿ ಸಲ್ಲಿಸಲಾಗಿತ್ತು.
ನಾಲ್ವರು ಅರ್ಜಿದಾರರಲ್ಲಿ ಒಬ್ಬರಾಗಿರುವ ಶರ್ಮಾ ಅವರು ಹಿಂಡೆನ್‌ಬರ್ಗ್ ರಿಸರ್ಚ್‌ನ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಲು ಮತ್ತು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲು ಸೆಬಿ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದರು. ಹಿಂಡೆನ್‌ಬರ್ಗ್ ಮಾಡಿರುವಂಥ ಇಂಥ ವರದಿಗಳನ್ನು ಮೊದಲು ಸೆಬಿ ಮಾನ್ಯ ಮಾಡಬೇಕು. ಅಲ್ಲಿಯವರೆಗೂ ಇಂಥ ವರದಿಗಳನ್ನು ಆಧರಿಸಿ ಮಾಧ್ಯಮಗಳು ಲಿಸ್ಟೆಡ್ ಕಂಪನಿಗಳ ಬಗ್ಗೆ ಸುದ್ದಿ ಮಾಡಬಾರದು. ಇದಕ್ಕೆ ತಡೆ ನೀಡಬೇಕು ಎಂದು ಆಗ್ರಹಿಸಿ ಶರ್ಮ ಅವರು ಕೇಳಿದ್ದರು.
ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಕುಸಿದ ಅದಾನಿ,ಅಂಬಾನಿ ಸ್ಥಾನ; ಮುಗಿಯಿತಾ ಭಾರತದ ಶ್ರೀಮಂತರ ದರ್ಬಾರ್?
ಅವರು ಇಂದು ಈ ಮನವಿಯನ್ನು ಒತ್ತಿಹೇಳಲು ಪ್ರಯತ್ನಿಸಿದರು, ಅದನ್ನು ನ್ಯಾಯಾಲಯವು ಪರಿಗಣಿಸಲು ನಿರಾಕರಿಸಿತು. ಅದಾನಿ ಗ್ರೂಪ್ ಆಫ್ ಕಂಪನಿಗಳ ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಮತ್ತು ಇದರಿಂದ ಮಾರುಕಟ್ಟೆಯ ಮೇಲೆ ಆಗಿರುವ ಪರಿಣಾಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮುಚ್ಚಿದ ಕವರ್‌ನಲ್ಲಿ ನೀಡಿದ್ದ ಸಲಹೆಯನ್ನು ಫೆಬ್ರವರಿ 17 ರಂದು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.
ಗೌತಮ್ ಅದಾನಿ ಅಯ್ತು, ಈಗ ಅಣ್ಣ ವಿನೋದ್ ಅದಾನಿ ಮೇಲೆಯೂ ಆರೋಪ!
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು, ಸರ್ಕಾರದ ಸೀಲ್ಡ್ ಕವರ್ ಸಲಹೆಯನ್ನು ಅಂಗೀಕರಿಸಿದರೆ, ಅದು ಸರ್ಕಾರವೇ ಸಮಿತಿಯನ್ನು ನೇಮಿಸಿದೆ ಎಂಬ ಅನಿಸಿಕೆಯನ್ನು ನೀಡುವುದರಿಂದ ನ್ಯಾಯಾಲಯವು ತನ್ನದೇ ಆದ ಸಮಿತಿಯನ್ನು ನೇಮಿಸುತ್ತದೆ ಎಂದು ಹೇಳಿದೆ. ಈ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.