Asianet Suvarna News Asianet Suvarna News

ಕಾವೇರಿ ಪ್ರಾಧಿಕಾರದ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌! ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ಆದೇಶ

ಕರ್ನಾಟಕದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದಿದೆ. 

Supreme Court shocked Karnataka again per day 5000 cusecs of cauvery water release to Tamil Nadu sat
Author
First Published Sep 21, 2023, 11:19 AM IST

ನವದೆಹಲಿ (ಸೆ.21): ಕರ್ನಾಟಕದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ. ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ತಲಾ 5 ಸಾವಿರ ಕ್ಯೂಸೆಕ್ಸ್‌ ನೀರು ಹರಿಸಬೇಕು ಎಂದು ತಿಳಿಸಿದೆ.

ಕನ್ನಡ ನಾಡಿನಲ್ಲಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿಯೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಕರ್ನಾಟಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಪರ ವಕೀಲರು ಪರಸ್ಪರ ವಾದ ಮಂಡಿಸಿದ್ದಾರೆ. ಇಲ್ಲಿದೆ ನೋಡಿ ಪರಸ್ಪರ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್‌ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್‌ ನೀಡು ಬಿಡುವಂತೆ ಆದೇಶ ಹೊರಡಿಸಿದೆ. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಗವಾಯ್‌ ಆದೇಶ ಹೊರಡಿಸಿದ್ದಾರೆ. 

ಕಾವೇರಿ ಹಂಚಿಕೆಯಲ್ಲಿ ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ ಹೆಚ್ಚಲು ಕಾರಣ: ಸಿದ್ದರಾಮಯ್ಯ

ಪ್ರಾಧಿಕಾರದ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್‌:  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣಾ ಸಮಿತಿ ಎರಡರಲ್ಲೂ ಜಲ, ಕೃಷಿ ತಜ್ಞರು ಇದ್ದಾರೆ. ಬರ, ಮಳೆ ಕೊರತೆ ಆಧರಿಸಿ ತೀರ್ಮಾನ ಕೈಗೊಂಡಿದ್ದರು. ಅಲ್ಲದೆ ಮತ್ತಿತರ ವಿಚಾರಗಳನ್ನು ಪರಿಗಣಿಸಿ 5000 ಕ್ಯೂಸೆಕ್ಸ್‌ ನೀರು ಬಿಡುಗಡೆ ತೀರ್ಮಾನ ಮಾಡಿದ್ದರು. ಸರಾಸರಿ ಒಳಹರಿವು ಕಡಿಮೆ ಆಗಿದೆ. ಸಂಕಷ್ಟ ಪರಿಸ್ಥಿತಿ ಈಗಲೂ ಇದೆ. ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ಇದನ್ನೆಲ್ಲ ಕಾವೇರಿ ಸಮಿತಿ ಮತ್ತು ಪ್ರಾಧಿಕಾರ ಆದ್ಯತೆಗೆ ತೆಗೆದುಕೊಂಡಿದೆ. ಹಾಗಾಗಿ ಎರಡು ಸಮಿತಿ ಮತ್ತು ಪ್ರಾಧಿಕಾರಗಳ ಅದೇಶಗಳನ್ನ ತಡೆಹಿಡಿಯಲು ಸಾಧ್ಯ ಇಲ್ಲ ಎಂದು ಸುಪ್ರೀಂಕೋರ್ಟ್ ಸಮಿತಿ, ಪ್ರಾಧಿಕಾರದ ಅದೇಶಗಳನ್ನ ಎತ್ತಿಹಿಡಿದಿದೆ.

ಕಾವೇರಿ ಹೋರಾಟಕ್ಕೆ ಧುಮಿಕಿದ ಮೊದಲ ಕನ್ನಡ ನಟ ದರ್ಶನ್‌ ತೂಗುದೀಪ

ವಾಸ್ತವಾಂಶ ತಿಳಿಯಲು ರಾಜ್ಯಕ್ಕೆ ಬರಬೇಕು:ಕರ್ನಾಟಕದ ಪರಿಸ್ಥಿತಿ ಯನ್ನಅರ್ಥ ಮಾಡಿಕೊಂಡೇ ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Control Committee-CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (Cauvery Water Management Authority-CWMA) ಸರಿಯಾದ ಕ್ರಮ ಕೈಗೊಂಡಿದೆ. ಇನ್ನು ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಾಣ, ಸಂಕಷ್ಟ ಸೂತ್ರದ ಅಗತ್ಯತೆ ಹಾಗೂ ರೈತರ ಪರವಾದ ತೀರ್ಮಾನವನ್ನು ಕೈಗೊಳ್ಳಲು ಪ್ರಾಧಿಕಾರ ಹಾಗೂ ಸಮಿತಿಗಳಲ್ಲಿ ತಜ್ಞರು ಇದ್ದಾರೆ ಎಂದು ಸುಪ್ರೀಂ ಕೋರ್ಟ್‌ ತಿಳಿಸಿತು. ಇದಕ್ಕೆ ಸದ್ಯ ವಾಸ್ತವ ಪರಿಸ್ಥಿತಿ ಅಧ್ಯಯನ ಮಾಡಲು ತಜ್ಞರು ಬರಬೇಕು ಎಂದು ವಕೀಲ ಮೋಹನ್ ಕಾತರಕಿ ಮನವಿ ಮಾಡಿದರು. ಆದರೆ, ಇದನ್ನು ಆಲಿಸದೇ 2 ವಾರಗಳಿಗೆ ವಿಚಾರಣೆ ಮುಂದೂಡಿಕೆ ಮಾಡಲಾಯಿತು. 

Follow Us:
Download App:
  • android
  • ios