Asianet Suvarna News Asianet Suvarna News

ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ನಿಷೇಧ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ಮುಂದಿನ ವಾರ ವಿಚಾರಣೆ

ಫೆಬ್ರವರಿ 2002 ರಲ್ಲಿ ಗಲಭೆ ಭುಗಿಲೆದ್ದಾಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿ ಅವರು ತಪ್ಪು ಎಸಗಿದ್ದರು ಎಂಬುದಕ್ಕೆ ಸುಪ್ರೀಂ ಕೋರ್ಟ್ ನೇಮಿಸಿದ ತನಿಖೆಯಲ್ಲಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ.

supreme court to hear cases challenging ban on bbc series on pm next week ash
Author
First Published Jan 30, 2023, 3:28 PM IST

ನವದೆಹಲಿ (ಜನವರಿ 30, 2023): ಪ್ರಧಾನಿ ನರೇಂದ್ರ ಮೋದಿ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಮತ್ತು 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಆರೋಪಗಳನ್ನು ಬ್ಲಾಕ್‌ ಮಾಡಲು ಎಮರ್ಜೆನ್ಸಿ ಅಧಿಕಾರ ಬಳಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಗಳನ್ನು ಸುಪ್ರೀಂಕೋರ್ಟ್ ಮುಂದಿನ ಸೋಮವಾರ ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆ.ಬಿ. ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಈ ವಿಷಯದ ಕುರಿತು ತಮ್ಮ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳನ್ನು ತುರ್ತಾಗಿ ಪಟ್ಟಿ ಮಾಡುವಂತೆ ಕೋರಿ ಅರ್ಜಿದಾರರಾದ ವಕೀಲ ಎಂ.ಎಲ್ ಶರ್ಮಾ ಮತ್ತು ಹಿರಿಯ ವಕೀಲ ಸಿ.ಯು ಸಿಂಗ್ ಸಲ್ಲಿಸಿದ ಪಿಐಎಲ್‌ಗಳನ್ನು ಗಮನಿಸಿದೆ.

ಇನ್ನು, ಎಂ.ಎಲ್. ಶರ್ಮಾ ಅವರ ಜೊತೆಗೆ, ಹಿರಿಯ ಪತ್ರಕರ್ತ ಎನ್. ರಾಮ್, ವಕೀಲ ಪ್ರಶಾಂತ್ ಭೂಷಣ್ ಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಮತ್ತೊಂದು ಅರ್ಜಿಯನ್ನು (Application) ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮದಿಂದ (Social Media) ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು (Documentary Link) ತೆಗೆದುಹಾಕಲು ಕೇಂದ್ರವು ಐಟಿ ನಿಯಮಗಳ (IT Rules) ಅಡಿಯಲ್ಲಿ ಎಮರ್ಜೆನ್ಸಿ ಅಧಿಕಾರವನ್ನು (Emergency Powers) ಬಳಸಿದೆ ಎಂದು ವಕೀಲ ಸಿ.ಯು ಸಿಂಗ್ ಹೇಳಿದ್ದಾರೆ. ಅಲ್ಲದೆ, ಎನ್. ರಾಮ್ ಮತ್ತು ವಕೀಲ ಪ್ರಶಾಂತ್ ಭೂಷಣ್ ಅವರ ಟ್ವೀಟ್‌ಗಳನ್ನು ತೆಗೆದುಹಾಕಲಾಗಿದೆ ಮತ್ತು ಕೇಂದ್ರವು ಇನ್ನೂ ಔಪಚಾರಿಕವಾಗಿ ನಿರ್ಬಂಧಿಸುವಿಕೆಯ ಆದೇಶವನ್ನು ನೀಡಿಲ್ಲ ಎಂದೂ ಹೇಳಿದರು. ಅಲ್ಲದೆ, ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ ಅಜ್ಮೀರ್‌ನ ಕಾಲೇಜು ವಿದ್ಯಾರ್ಥಿಗಳನ್ನು ಹೊರ ಹಾಕಲಾಗಿದೆ ಎಂದೂ ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನು ಓದಿ: ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರ: ಕೇಂದ್ರದ ನಿಷೇಧ ಪ್ರಶ್ನಿಸಿ ಸುಪ್ರೀಕೋರ್ಟ್‌ಗೆ ಅರ್ಜಿ

ಇನ್ನು, ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Union Law Minister Kiren Rijiju) ಅವರು ಕೋರ್ಟ್‌ಗಳ ಸಮಯ ವ್ಯರ್ಥ ಮಾಡುತ್ತಿರುವುದಕ್ಕೆ ಅರ್ಜಿದಾರರನ್ನು ಟೀಕಿಸಿದ್ದಾರೆ. ಸಾವಿರಾರು ಸಾಮಾನ್ಯ ನಾಗರಿಕರು ನ್ಯಾಯಕ್ಕಾಗಿ ಕಾಯುತ್ತಿರುವ ಮತ್ತು ವಿಚಾರಣೆಗೆ ದಿನಾಂಕ ನಿಗದಿಗಾಗಿ ಹುಡುಕುತ್ತಿರುವ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಅಮೂಲ್ಯ ಸಮಯವನ್ನು ಅವರು ಹೀಗೆಯೇ ವ್ಯರ್ಥ ಮಾಡುತ್ತಾರೆ ಎಂದು ಕಿರಣ್‌ ರಿಜಿಜು ಟ್ವೀಟ್‌ ಮಾಡಿದ್ದಾರೆ. 
 
 "ರಾಷ್ಟ್ರಪತಿಯಿಂದ ಭಾರತದ ಸಂವಿಧಾನದ 352 ನೇ ವಿಧಿಯ ಅಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸದೆಯೇ, ಕೇಂದ್ರ ಸರ್ಕಾರವು ತುರ್ತು ನಿಬಂಧನೆಗಳನ್ನು ಅನ್ವಯಿಸಬಹುದೇ..?" ಎಂದು ಪಿಐಎಲ್ ಪ್ರಶ್ನೆ ಮಾಡಿದೆ. ಹಾಗೂ, ಬಿಬಿಸಿ ಸಾಕ್ಷ್ಯಚಿತ್ರವು ದಾಖಲಿಸಲಾದ ಸತ್ಯಗಳನ್ನು ಹೊಂದಿದೆ. ಅವುಗಳನ್ನು ಸಾಕ್ಷಿ ಎಂದು ಪರಿಗಣಿಸಬಹುದು ಎಂದು ಎಂ.ಎಲ್‌. ಶರ್ಮಾ ಅವರ ಪಿಐಎಲ್‌ ಹೇಳಿದೆ.

ಇದನ್ನೂ ಓದಿ: ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿಸಿದ ಬೆನ್ನಲ್ಲೇ ಕಾಂಗ್ರೆಸ್‌ ತೊರೆದ ಮಾಜಿ ಕೇಂದ್ರ ಸಚಿವ ಆಂಟನಿ ಪುತ್ರ

ಮಾಹಿತಿ ಮತ್ತು ಪ್ರಸಾರ (I&B) ಸಚಿವಾಲಯವು BBC ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯನ್ನು ನಿರ್ಬಂಧಿಸಲು ಟ್ವಿಟ್ಟರ್‌ ಮತ್ತು ಯೂಟ್ಯೂಬ್‌ಗೆ ಸೂಚಿಸಿದೆ.  ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಸಹ ಪ್ರಧಾನಿ ಮೋಇಯನ್ನು ಸಮರ್ಥಿಸಿಕೊಂಡಿದ್ದರು. ಬ್ರಿಟನ್‌ನ ರಾಷ್ಟ್ರೀಯ ಬ್ರಾಡ್‌ಕಾಸ್ಟರ್‌ನ ಸಾಕ್ಷ್ಯಚಿತ್ರದಲ್ಲಿನ 50ಕ್ಕೂ ಹೆಚ್ಚು ಟ್ವೀಟ್‌ಗಳನ್ನು ತೆಗೆದುಹಾಕಲು ಸಚಿವಾಲಯ ಟ್ವಿಟ್ಟರ್‌ಗೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ. ಇನ್ನು, ಕೇಂದ್ರ ಸರ್ಕಾರವು ಸಾಕ್ಷ್ಯಚಿತ್ರವನ್ನು "ಪ್ರಚಾರದ ತುಣುಕು" ಎಂದು ಕರೆದಿದೆ, ಅದು ವಸ್ತುನಿಷ್ಠತೆಯ ಕೊರತೆ ಮತ್ತು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದೂ ಹೇಳಿದೆ.

ಫೆಬ್ರವರಿ 2002 ರಲ್ಲಿ ಗಲಭೆ ಭುಗಿಲೆದ್ದಾಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿ ಅವರು ತಪ್ಪು ಎಸಗಿದ್ದರು ಎಂಬುದಕ್ಕೆ ಸುಪ್ರೀಂ ಕೋರ್ಟ್ ನೇಮಿಸಿದ ತನಿಖೆಯಲ್ಲಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ.

ಇದನ್ನು ಓದಿ: ಮೋದಿ ಸಾಕ್ಷ್ಯಚಿತ್ರ ಮತ್ತಷ್ಟು ಕಿಚ್ಚು; ಕೆಲವೆಡೆ ಪ್ರದರ್ಶನ: ಸತ್ಯ ಹೊರಗೆ ಬಂದೇ ಬರುತ್ತದೆ ಎಂದ ರಾಹುಲ್‌ ಗಾಂಧಿ

Follow Us:
Download App:
  • android
  • ios