ಕಾಶ್ಮೀರಕ್ಕೆ ವಾಪಸಾಗುತ್ತಾ 370ನೇ ವಿಧಿ? ಜುಲೈ 11ರಿಂದ ಸುಪ್ರೀಂ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ
370ನೇ ವಿಧಿ ರದ್ದುಗೊಳಿಸಿದ ಕೇಂದ್ರದ ನಿರ್ಧಾರದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹಾಗೂ ಜಮ್ಮು- ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸುವ ನಿರ್ಧಾರದಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಲಾಗಿದೆ ಎಂದು ಸಲ್ಲಿಕೆಯಾಗಿರುವ 20ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ಇದಾಗಿದೆ.
ನವದೆಹಲಿ (ಜುಲೈ 5, 2023): ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳನ್ನು ಜುಲೈ 11 ರಿಂದ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಈ ಕುರಿತ ಅರ್ಜಿಗಳ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ರಚಿಸಲಾಗಿದ್ದು, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಉಳಿದ ಸದಸ್ಯಾಗಿದ್ದಾರೆ.
370ನೇ ವಿಧಿ ರದ್ದುಗೊಳಿಸಿದ ಕೇಂದ್ರದ ನಿರ್ಧಾರದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹಾಗೂ ಜಮ್ಮು- ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸುವ ನಿರ್ಧಾರದಲ್ಲಿ ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸಲಾಗಿದೆ ಎಂದು ಸಲ್ಲಿಕೆಯಾಗಿರುವ 20ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ಇದಾಗಿದೆ. ಇತ್ತೀಚೆಗೆ ಜಮ್ಮು- ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕೂಡ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಸುಪ್ರೀಂಗೆ ಮನವಿ ಮಾಡಿದ್ದರು.
ಇದನ್ನು ಓದಿ: Amit Shah Interview: ಮೋದಿ ಬಂದ ಬಳಿಕ ಈಶಾನ್ಯ ಭಾರತ, ಜಮ್ಮು ಕಾಶ್ಮೀರದಲ್ಲಿ ಹಿಂಸಾಚಾರ ತೀವ್ರ ಕಡಿಮೆಯಾಗಿದೆ: ಅಮಿತ್ ಶಾdy