Asianet Suvarna News Asianet Suvarna News

Article 370 Verdict: ಲಡಾಖ್‌ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನಕ್ಕೂ ಸುಪ್ರೀಂ ಅಸ್ತು

ಜಮ್ಮು ಮತ್ತು ಕಾಶ್ಮೀರದಲ್ಲಿ, 2024 ರ ಸೆಪ್ಟೆಂಬರ್ 30 ರೊಳಗೆ ಚುನಾವಣೆ ನಡೆಸುವಂತೆ ಮತ್ತು ಶೀಘ್ರ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವಂತೆಯೂ ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಲಡಾಖ್‌ ಕೇಂದ್ರಾಡಳಿತ ಪ್ರದೇಶವಾಗೇ ಇರಲಿದೆ ಎಂದೂ ತೀರ್ಪಿನಲ್ಲಿ ತಿಳಿಸಿದೆ. 

supreme court upholds reorganisation of ladakh as union territory ash
Author
First Published Dec 11, 2023, 1:43 PM IST

ನವದೆಹಲಿ (ಡಿಸೆಂಬರ್ 11, 2023): ಈ ಹಿಂದೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಭಾಗವಾಗಿದ್ದ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ನೀಡಿರುವುದಕ್ಕೂ ಸುಪ್ರೀಂಕೋರ್ಟ್‌ ಸೋಮವಾರ ಎತ್ತಿ ಹಿಡಿದಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ,  2024 ರ ಸೆಪ್ಟೆಂಬರ್ 30 ರೊಳಗೆ ಚುನಾವಣೆಯನ್ನು ನಡೆಸುವಂತೆ ಮತ್ತು ಶೀಘ್ರ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸುವಂತೆಯೂ ಸುಪ್ರೀಂ ಕೋರ್ಟ್ ಹೇಳಿದೆ. 

ಆದರೆ, ಲಡಾಖ್‌ ಅನ್ನು ಕೇಂದ್ರಾಡಳಿತ ಪ್ರದೇಶವಾಗೇ ಇರಿಸಲು ಸೂಚಿಸಿದೆ. ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಲಡಾಖ್‌ಗೆ ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನ ನೀಡಿತ್ತು. ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುತ್ತೆ. ಆದರೆ, ಲಡಾಖ್‌ ಪ್ರದೇಶವನ್ನು ರಾಜ್ಯಕ್ಕೆ ಸೇರಿಸುವ ಬಗ್ಗೆ ಸಮಸ್ಯೆ ಇದ್ದು, ಈ ಹಿನ್ನೆಲೆ ಈ ವಿಚಾರ ಇತ್ಯರ್ಥವಾಗಿಲ್ಲ ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್‌ ಜನರಲ್‌ ಹೇಳಿದರು. ಈ ಹಿನ್ನೆಲೆ ಲಡಾಖ್‌ ಅನ್ನು ಹಾಗೇ ಬಿಡಲು ಸುಪ್ರೀಂಕೋರ್ಟ್‌ ಹೇಳಿದೆ. 

ಇದನ್ನು ಓದಿ: ಸೆಪ್ಟೆಂಬರ್ 2024ರೊಳಗೆ ಜಮ್ಮು ಕಾಶ್ಮೀರದಲ್ಲಿ ಎಲೆಕ್ಷನ್‌ ನಡೆಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಡೆಡ್‌ಲೈನ್‌

ಈ ಮಧ್ಯೆ, ಸಂವಿಧಾನದ 370ನೇ ವಿಧಿ ತಾತ್ಕಾಲಿಕ ನಿಬಂಧನೆಯಾಗಿದೆ ಮತ್ತು ಅದನ್ನು ಹಿಂತೆಗೆದುಕೊಳ್ಳುವ ಅಧಿಕಾರ ರಾಷ್ಟ್ರಪತಿಗಳಿಗೆ ಇದೆ ಎಂದೂ ಸುಪ್ರೀಂಕೋರ್ಟ್‌ ಪಂಚ ಸದಸ್ಯ ಸಾಂವಿಧಾನಿಕ ಪೀಠ ತೀರ್ಪನ್ನು ಬರೆಯುವಾಗ ಹೇಳಿದೆ. ತನಗೆ ಮತ್ತು ನ್ಯಾಯಮೂರ್ತಿಗಳಾದ ಗವಾಯಿ ಮತ್ತು ಸೂರ್ಯ ಕಾಂತ್ ಅವರಿಗೆ ತೀರ್ಪು ಬರೆದ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಈ ಬಗ್ಗೆ ಹೇಳಿದರು.

ಹಾಗೂ, ಈ ಹಿಂದೆ ರಾಜ್ಯವಾಗಿದ್ದ ಜಮ್ಮು ಮತ್ತು ಕಾಶ್ಮೀರವು ದೇಶದ ಇತರ ರಾಜ್ಯಗಳಿಗಿಂತ ಭಿನ್ನವಾದ ಆಂತರಿಕ ಸಾರ್ವಭೌಮತ್ವವನ್ನು ಹೊಂದಿಲ್ಲ . ಭಾರತೀಯ ಸಂವಿಧಾನದ ಎಲ್ಲಾ ನಿಬಂಧನೆಗಳನ್ನು ಜಮ್ಮು ಕಾಶ್ಮೀರಕ್ಕೆ ಅನ್ವಯಿಸಬಹುದು. ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ ಮತ್ತು ಇದು 1 ಮತ್ತು 370 ನೇ ವಿಧಿಯಿಂದ ಸ್ಪಷ್ಟವಾಗಿದೆ ಎಂದು ಅವರು ತೀರ್ಪನ್ನು ಘೋಷಿಸುವಾಗ ಹೇಳಿದರು. ಜಮ್ಮು ಕಾಶ್ಮೀರ ಸಂವಿಧಾನ ಸಭೆಯು ಶಾಶ್ವತ ಸಂಸ್ಥೆಯಾಗಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದೂ ಸಿಜೆಐ ಹೇಳಿದ್ದಾರೆ.

ಇದನ್ನು ಓದಿ: ಕಾಶ್ಮೀರಕ್ಕೆ ವಿಶೇಷ ಸ್ಥಾನ ರದ್ದು ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌: ಮೋದಿ ಸರ್ಕಾರಕ್ಕೆ ಜಯ

ಹಿಂದಿನ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ನಿಬಂಧನೆಯನ್ನು ರದ್ದುಗೊಳಿಸುವಲ್ಲಿ ಯಾವುದೇ "ಸಾಂವಿಧಾನಿಕ ವಂಚನೆ" ಇಲ್ಲ ಎಂದು ಹೇಳುವ ಮೂಲಕ 370 ನೇ ವಿಧಿಯನ್ನು ರದ್ದುಗೊಳಿಸುವ ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿತ್ತು.

News Hour: ಸೋಮವಾರ ಸುಪ್ರೀಂನಲ್ಲಿ ಆರ್ಟಿಕಲ್ 370 ಭವಿಷ್ಯ!

Latest Videos
Follow Us:
Download App:
  • android
  • ios