ನವದೆಹಲಿ(ಏ.05): ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ಬಳಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದ್ದು, ಆತಂಕದ ವಾತಾವರಣ ಮನೆ ಮಾಡಿದೆ. ಈಗಾಗಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಸ್ಥಿತಿ ಹತೋಟಿಗೆ ತೆಗೆದುಕೊಳ್ಳುವ ಯತ್ನ ನಡೆಸುತ್ತಿದ್ದಾರೆ. \

ಅತ್ತ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳವೂ ಸ್ಥಳಕ್ಕಾಗಮಿಸಿ ಶೋಧ ಕಾರ್ಯ ಆರಂಭಿಸಿದೆ.

 

ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕಾಗಮಿಸಿ ಅನುಮಾನಾಸ್ಪದ ವಸ್ತುವನ್ನು ಪರಿಶೀಲಿಸಿದ್ದು, ಇದು ಮೇಲ್ನೋಟಕ್ಕೆ ಬೊಂಬೆ ಎಂದು ತಿಳಿದು ಬಂದಿದೆ.

ಬೊಂಬೆ ಗೆ ಪ್ಲಾಸ್ಟಿಕ್ ನಿಂದ ಸುತ್ತಿಡಲಾಗಿದೆಯಾದರೂ ಅನುಮಾನಾಸ್ಪದವಾಗಿ ಬಿದ್ದಿದ್ದ ಪರಿಣಾಮ ಶೋಧ ಕಾರ್ಯ ನಡೆಸಿ, ಇದನ್ನು ಪರಿಶೀಲನೆಗೆ ತನಿಖಾ ದಳ ಕೊಂಡೊಯ್ದಿದೆ.