ಬ್ರಿಟನ್‌ನಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಚಟುವಟಿಕೆಗಳ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸುನಕ್‌ಗೆ ಪ್ರಧಾನಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ನವದೆಹಲಿ: ವ್ಯಾಪಾರ, ಆರ್ಥಿಕ ಅಭಿವೃದ್ಧಿ ಸೇರಿದಂತೆ ಹಲವು ವಲಯಗಳ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗುರುವಾರ ಫೋನ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬ್ರಿಟನ್‌ನಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಚಟುವಟಿಕೆಗಳ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸುನಕ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಬ್ರಿಟನ್‌ನಲ್ಲಿ ಭಾರತೀಯರ ಭದ್ರತೆ ಕುರಿತಾಗಿ ಕಳವಳಗಳು ವ್ಯಕ್ತವಾಗಿದೆ. ಅಲ್ಲದೇ ಭಾರತ ವಿರೋಧಿ ಕೃತ್ಯಗಳು ನಡೆಯುತ್ತಿವೆ. ಇಂತಹವುಗಳ ವಿರುದ್ಧ ಬ್ರಿಟನ್ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮೋದಿ ಹೇಳಿದ್ದಾರೆ. ಅಲ್ಲದೇ, ಆರ್ಥಿಕ ಅಪರಾಧಿಗಳನ್ನು (economic criminals) ಹಸ್ತಾಂತರಿಸುವ ಕುರಿತಾಗಿಯೂ ಮಾತುಕತೆ ನಡೆಸಲಾಗಿದೆ. ವಿಜಯ ಮಲ್ಯ ಲಂಡನ್‌ನಲ್ಲಿರುವುದು ಇಲ್ಲಿ ಗಮನಾರ್ಹ.
ಬ್ರಿಟನ್ ಸಂಸತ್ತಲ್ಲಿ ಪ್ರಧಾನಿ ಮೋದಿ ಸಮರ್ಥಿಸಿದ ಪ್ರಧಾನಿ ರಿಷಿ ಸುನಕ್
2030ರವರೆಗೆ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧದ ಕುರಿತಾಗಿ ಅದರಲ್ಲೂ ಮುಖ್ಯವಾಗಿ ವ್ಯಾಪಾರ ಮತ್ತು ಆರ್ಥಿಕತೆ ವಲಯಗಳ ಕುರಿತಾಗಿ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ನಡುವೆ ಮುಕ್ತ ವ್ಯಾಪಾರದ ಕುರಿತಾಗಿ ಶೀಘ್ರ ನಿರ್ಧಾರ ಕೈಗೊಳ್ಳಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಇದೇ ವೇಳೆ ಸೆಪ್ಟೆಂಬರ್‌ನಲ್ಲಿ ನಡೆಯುವ ಜಿ20 ಸಭೆಗೆ ಸುನಕ್ ಅವರನ್ನು ಮೋದಿ ಆಹ್ವಾನಿಸಿದ್ದಾರೆ. ಅಲ್ಲದೇ ಭಾರತದ ಜಿ20 ಆಧ್ಯಕ್ಷತೆ ಮತ್ತು ಬೈಸಾಕಿ ಹಬ್ಬಕ್ಕೆ ಸುನಕ್ ಶುಭಾಶಯಗಳನ್ನು ತಿಳಿಸಿದ್ದಾರೆ.
ವಿವಾದಿತ ಮೋದಿ ಸಾಕ್ಷ್ಯಚಿತ್ರಕ್ಕೆ ಬಿಬಿಸಿ ಸಂಸ್ಥೆ ಸಮರ್ಥನೆ: ಭಾರತ, ರಿಷಿ ಸುನಕ್ ಟೀಕೆಗೆ ಸ್ಪಷ್ಟನೆ