ಸಂಸದನ ವಿರುದ್ಧ ಟ್ವೀಟ್: ಬಿಜೆಪಿ ರಾಜ್ಯ ಕಾರ್ಯದರ್ಶಿ ಬಂಧಿಸಿದ ಸೈಬರ್ ಕ್ರೈಂ ಪೊಲೀಸರು
ಮಧುರೈ ಸಂಸದ ಸು ವೆಂಕಟೇಶನ್ ಅವರ ಇತ್ತೀಚಿನ ಟ್ವೀಟ್‌ಗೆ ಸಂಬಂಧಿಸಿದಂತೆ ಸೂರ್ಯ ಅವರನ್ನು ಬಂಧಿಸಲಾಗಿದೆ ಎಂದು ಸೈಬರ್ ಕ್ರೈಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೊಸದೆಹಲಿ (ಜೂನ್ 17, 2023) : ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.ಜಿ. ಸೂರ್ಯ ಅವರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಮಧುರೈ ಸಂಸದ ಸು. ವೆಂಕಟೇಶನ್ ವಿರುದ್ಧ ಕೆಲ ದಿನಗಳ ಹಿಂದೆ ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಚೆನ್ನೈನಲ್ಲಿ ಬಂಧಿಸಿದ್ದಾರೆ.
ಮಧುರೈ ಸಂಸದ ಸು ವೆಂಕಟೇಶನ್ ವಿರುದ್ಧದ ಇತ್ತೀಚಿನ ಟ್ವೀಟ್‌ಗೆ ಸಂಬಂಧಿಸಿದಂತೆ ಸೂರ್ಯ ಅವರನ್ನು ಬಂಧಿಸಲಾಗಿದೆ ಎಂದು ಸೈಬರ್ ಕ್ರೈಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು, ಈ ವಿಚಾರದ ಬಗ್ಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಕ್ರೋಶ ವ್ಯಕ್ತಪಡಿಸಿದ್ದು, ಎಸ್.ಜಿ. ಸೂರ್ಯ ಅವರ ಬಂಧನದ ಕ್ರಮವನ್ನು ಖಂಡಿಸಿದ್ದು, ಡಿಎಂಕೆ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನು ಓದಿ: ಬಂಧನದ ಬಳಿಕ ಡಿಎಂಕೆ ನಾಯಕ ಸೆಂಥಿಲ್ ಬಾಲಾಜಿಗೆ ಮತ್ತೊಂದು ಶಾಕ್: ಸಚಿವ ಸ್ಥಾನದಿಂದ ವಜಾ
ಮಲದಿಂದ ತುಂಬಿದ ಚರಂಡಿಯನ್ನು ಸ್ವಚ್ಛಗೊಳಿಸಿದ ಕಾರ್ಯಕರ್ತರೊಬ್ಬರು ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರು. ಈ ಹಿನ್ನೆಲೆ ಸಂಸದ ವೆಂಕಟೇಶನ್ ಅವರು ಸಾಕಷ್ಟು ಕ್ರಮ ಕೈಗೊಂಡಿಲ್ಲ ಎಂದು ಎಸ್.ಜಿ. ಸೂರ್ಯ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ. ಅಲ್ಲದೆ, ಸಂಸದ ವೆಂಕಟೇಶನಿಗೆ ಬರೆದ ಪತ್ರದಲ್ಲಿ ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಸೂರ್ಯ ಈ ಘಟನೆಯನ್ನು ತೀವ್ರವಾಗಿ ಟೀಕಿಸಿದ್ದರು. "ನಿಮ್ಮ ಪ್ರತ್ಯೇಕತಾವಾದದ ನಕಲಿ ರಾಜಕೀಯವು ಆ ಮೋರಿಗಿಂತ ಕೆಟ್ಟದಾಗಿ ಗಬ್ಬು ನಾರುತ್ತಿದೆ, ಮನುಷ್ಯನಾಗಿ ಬದುಕುವ ಮಾರ್ಗವನ್ನು ಕಂಡುಕೊಳ್ಳಿ, mate!" ಎಂದು ಸೂರ್ಯ ಟ್ವೀಟ್ ಮಾಡಿದ್ದರು.
ಸೂರ್ಯ ಅವರ ಬಂಧನವನ್ನು ಖಂಡಿಸಿ ಅಣ್ಣಾಮಲೈ ಟ್ವೀಟ್ ಮಾಡಿದ್ದು, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್‌ಜಿ ಸೂರ್ಯ ಅವರನ್ನು ಬಂಧಿಸಿರುವುದು ಖಂಡನೀಯ. ಡಿಎಂಕೆಯ ಮಿತ್ರಪಕ್ಷಗಳಾದ ಕಮ್ಯುನಿಸ್ಟರ ಅಸಹ್ಯ ದ್ವಂದ್ವ ನೀತಿಯನ್ನು ಬಹಿರಂಗಪಡಿಸುವುದು ಅವರ ಏಕೈಕ ತಪ್ಪು. ಈ ಬಂಧನಗಳು ನಮ್ಮನ್ನು ತಡೆಯುವುದಿಲ್ಲ ಮತ್ತು ನಾವು ಅಹಿತಕರ ಸತ್ಯದ ಧಾರಕರಾಗಿ ಮುಂದುವರಿಯುತ್ತೇವೆ ಎಂದೂ ಅವರು ಹೇಳಿದ್ದಾರೆ.
ಇದನ್ನೂ ಓದಿ: Breaking: ತಮಿಳುನಾಡು ಸರ್ಕಾರಕ್ಕೆ ಶಾಕ್: ಅಕ್ರಮ ಹಣ ವರ್ಗಾವಣೆ ಕೇಸಲ್ಲಿ ಸಚಿವ ವಿ. ಸೆಂಥಿಲ್ ಬಾಲಾಜಿ ಬಂಧಿಸಿದ ಇಡಿ
ಅಲ್ಲದೆ, ವಾಕ್ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ಡಿಎಂಕೆ ರಾಜ್ಯ ಯಂತ್ರವನ್ನು ಬಳಸುತ್ತಿದೆ ಎಂದೂ ಅವರು ಹೇಳಿದರು. "ಸ್ವಾತಂತ್ರ್ಯವನ್ನು ಮೊಟಕುಗೊಳಿಸಲು ರಾಜ್ಯ ಯಂತ್ರವನ್ನು ಬಳಸುವುದು ಮತ್ತು ಸಣ್ಣದೊಂದು ಟೀಕೆಗೆ ತಲ್ಲಣಗೊಳ್ಳುವುದು ಪ್ರಜಾಸತ್ತಾತ್ಮಕವಾಗಿ ಚುನಾಯಿತ ನಾಯಕನಿಗೆ ತಕ್ಕುದಲ್ಲ ಮತ್ತು ವಾಸ್ತವವಾಗಿ, ನಿರ್ಮಾಣದಲ್ಲಿ ನಿರಂಕುಶ ನಾಯಕನ ಚಿಹ್ನೆಗಳು" ಎಂದೂ ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
"ನಿರಂಕುಶಾಧಿಕಾರಿಗಳಿಂದ ಸ್ಫೂರ್ತಿ ಪಡೆಯುತ್ತಿರುವ ತಿಳುನಾಡು ಸಿಎಂ ತಿರು @mkstalin ರಾಜ್ಯವನ್ನು ಕಾನೂನು ರಹಿತ ಕಾಡನ್ನಾಗಿ ಮಾಡುತ್ತಿದ್ದಾರೆ. ಈ ಬಂಧನಗಳು ನಮ್ಮನ್ನು ತಡೆಯುವುದಿಲ್ಲ ಮತ್ತು ನಾವು ಅಹಿತಕರ ಸತ್ಯದ ವಾಹಕರಾಗಿ ಮುಂದುವರಿಯುತ್ತೇವೆ!," ಎಂದು ಅಣ್ಣಾಮಲೈ ಅದೇ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಡಿಎಂಕೆ, ಕಾಂಗ್ರೆಸ್ 3ಜಿ, 4ಜಿ ಪಕ್ಷ; ಈ ಪಕ್ಷಗಳಿಂದ ಹಲವು ತಲೆಮಾರಿನ ಭ್ರಷ್ಟಾಚಾರ: ಅಮಿತ್ ಶಾ ವ್ಯಂಗ್ಯ
ಈ ಮದ್ಯೆ, ಶುಕ್ರವಾರ ಚೆನ್ನೈ ಮೆಟ್ರೋಪಾಲಿಟನ್ ಸೆಷನ್ ನ್ಯಾಯಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಜೂನ್ 23, 2023 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ಕಳುಹಿಸಿದ ಬೆನ್ನಲ್ಲೇ ಈ ಬಂಧನವಾಗಿರುವುದು ರಾಜಕೀಯ ವಲಯದಲ್ಲಿ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದೆ.