ಮಹಾರಾಷ್ಟ್ರ. ಪಂಜಾಬ್ ಬೆನ್ನಲ್ಲೇ ಇದೀಗ ಮತ್ತೊಂದು ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆಯಾಗಿದ್ದು,  ನಾಳೆ (ಸೋಮವಾರ) 4.0 ಲಾಕ್‌ಡೌನ್ ಶುರುವಾಗಲಿದೆ.

ಚೆನ್ನೈ, (ಮೇ.17): ಮೂರನೇ ಹಂತದ ಲಾಕ್‌ಡೌನ್ ಇಂದಿಗೆ (ಭಾನುವಾರ) ಕೊನೆಯಾಗಲಿದ್ದು, 4ನೇ ಹಂತದ ಲಾಕ್‌ಡೌನ್‌ಗಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಾಗಿ ಎಲ್ಲರೂ ಕಾತರದಿಂದ ಕಾಯುತ್ತಿದ್ದಾರೆ.

ಈ ಮಧ್ಯೆ ತಮಿಳುನಾಡಿನಲ್ಲಿ ಮೇ.31ರ ವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದೆ. ನಾಲ್ಕನೇ ಹಂತ ಲಾಕ್‌ಡೌನ್ ವಿಸ್ತರಣೆ ಮಾಡಿ ಇಂದು (ಭಾನುವಾರ) ತಮಿಳುನಾಡು ಸರ್ಕಾರ ಆದೇಶ ಹೊರಡಿಸಿದೆ. 

ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ವಿಸ್ತರಣೆ: ಕರ್ನಾಟಕದ ಕತೆ ಏನು..?

ತಮಿಳುನಾಡಿನಲ್ಲಿ ಪ್ರಸ್ತುತ ಸುಮಾರು 10,585 ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 74 ಮಂದಿ ಮಾಹಾಮಾರಿಗೆ ಬಲಿಯಾಗಿದ್ದಾರೆ.

ಈಗಾಗಲೇ ಕೇಂದ್ರದ 4ನೇ ಹಂತದ ಲಾಕ್‌ಡೌನ್ ಮಾರ್ಗಸೂಚಿ ಬಿಡುಗಡೆ ಮುನ್ನವೇ ಮಾಹಾರಾಷ್ಟ್ರ, ಪಂಜಾಬ್ ಮಿಜೋರಾಂ ಸರ್ಕಾರಗಳು ತಮ್ಮ ರಾಜ್ಯಗಳಲ್ಲಿ ಮೇ.31ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿವೆ. 

ಆದ್ರೆ, ಕರ್ನಾಟಕ ಸರ್ಕಾರ ಮಾತ್ರ ಇದುವರೆಗೆ ಯಾವುದೇ ಇಂತಹ ತೀರ್ಮಾನ ಕೈಗೊಂಡಿಲ್ಲ. ಬದಲಾಗಿ ಕೇಂದ್ರದ ನೀತಿ-ನಿಯಮಗಳ ಆಧಾರದ ಮೇಲೆ ಬಿಎಸ್ ಯಡಿಯೂರಪ್ಪ ಸರ್ಕಾರ ಲಾಕ್‌ಡೌನ್ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

ಕಂಟೇನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲಾ ಕಡೆ ಲಾಕ್‌ಡೌನ್ ಸಡಿಲ ಮಾಡುವ ಎಲ್ಲಾ ಸಾಧ್ಯತೆಗಳಿವೆ.