Breaking: ತಮಿಳುನಾಡು ಸರ್ಕಾರಕ್ಕೆ ಶಾಕ್: ಅಕ್ರಮ ಹಣ ವರ್ಗಾವಣೆ ಕೇಸಲ್ಲಿ ಸಚಿವ ವಿ. ಸೆಂಥಿಲ್ ಬಾಲಾಜಿ ಬಂಧಿಸಿದ ಇಡಿ
ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದಲ್ಲಿ ವಿದ್ಯುತ್, ನಿಷೇಧ ಮತ್ತು ಅಬಕಾರಿ ಸಚಿವರಾಗಿರುವ ವಿ. ಸೆಂಥಿಲ್ ಬಾಲಾಜಿ ಅವರನ್ನು ಫೆಡರಲ್ ತನಿಖಾ ಸಂಸ್ಥೆ ಔಪಚಾರಿಕವಾಗಿ ಬಂಧಿಸಿದೆ.
ಚೆನ್ನೈ (ಜೂನ್ 14, 2023): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದಲ್ಲಿ ವಿದ್ಯುತ್, ನಿಷೇಧ ಮತ್ತು ಅಬಕಾರಿ ಸಚಿವರಾಗಿರುವ ವಿ. ಸೆಂಥಿಲ್ ಬಾಲಾಜಿ ಅವರನ್ನು ಫೆಡರಲ್ ತನಿಖಾ ಸಂಸ್ಥೆ ಔಪಚಾರಿಕವಾಗಿ ಬಂಧಿಸಿದೆ.
ತನಿಖಾ ಸಂಸ್ಥೆ ಮಂಗಳವಾರ ಡಿಎಂಕೆ ನಾಯಕನ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಅವರನ್ನು ವಿಚಾರಣೆಗೆ ಕರೆದೊಯ್ದಿದೆ. ಇದರ ಬೆನ್ನಲ್ಲೇ ಇಡಿ ಬುಧವಾರ ಬೆಳ್ಳಂಬೆಳಗ್ಗೆ ಬಿಗಿ ಭದ್ರತೆಯ ನಡುವೆ ಬಾಲಾಜಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ಕರೆತಂದಿದೆ.
ಇದನ್ನು ಓದಿ: ಶಾರುಖ್ ಜಾಹೀರಾತು ನೀಡುವ ಬೈಜುಸ್ ಮೇಲೆ ಇಡಿ ರೇಡ್: 28,000 ಕೋಟಿ ಮೌಲ್ಯದ ವಿದೇಶಿ ಹೂಡಿಕೆ ಮೇಲೆ ಹದ್ದಿನ ಕಣ್ಣು
ಡಿಎಂಕೆ ನಾಯಕನನ್ನು ಆಸ್ಪತ್ರೆಗೆ ಕರೆತರುತ್ತಿದ್ದಂತೆಯೇ ಆಸ್ಪತ್ರೆಯ ಹೊರಗೆ ಭಾರಿ ಹೈಡ್ರಾಮಾ ನಡೆದಿದೆ. ಇಡಿ ಕ್ರಮವನ್ನು ವಿರೋಧಿಸಿ ಅವರ ಬೆಂಬಲಿಗರು ಅಲ್ಲಿ ಜಮಾಯಿಸಿದ್ದು, ಇನ್ನೊಂದೆಡೆ, ಕಾರಿನಲ್ಲಿ ಮಲಗಿದ್ದ ಸಚಿವರು ನೋವಿನಿಂದ ಅಳುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇನ್ನು, ಸಚಿವರ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಎಂಕೆ ಸಂಸದ ಮತ್ತು ವಕೀಲ ಎನ್‌ಆರ್ ಎಲಾಂಗೋ, ‘’ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ ಮತ್ತು ಬಾಲಾಜಿ ಬಂಧನವನ್ನು ಇಡಿ ಅಧಿಕೃತವಾಗಿ ಖಚಿತಪಡಿಸಿಲ್ಲ’’ ಎಂದು ಹೇಳಿದ್ದಾರೆ. "ನಾನು ಅವರನ್ನು (ಸೆಂಥಿಲ್ ಬಾಲಾಜಿ) ಐಸಿಯುಗೆ ಸ್ಥಳಾಂತರಿಸಿದಾಗ ನೋಡಿದೆ. ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಯು ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಿದಾಗ ವೈದ್ಯರು ಎಲ್ಲಾ ಗಾಯಗಳನ್ನು ಗಮನಿಸಬೇಕು ಮತ್ತು ವರದಿಯನ್ನು ನೋಡಿದ ನಂತರ ತಿಳಿಯುತ್ತದೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ (ಇಡಿಯಿಂದ) ತಿಳಿಸಲಾಗಿಲ್ಲ," ಎಂದು ಎಲಾಂಗೋ ಹೇಳಿದರು.
ಇದನ್ನೂ ಓದಿ: ಆಭರಣ ಕಂಪನಿಗೆ ಬಿಗ್ ಶಾಕ್: ಜೋಯ್ ಅಲುಕ್ಕಾಸ್‌ನ 305 ಕೋಟಿ ರೂ. ಜಪ್ತಿ ಮಾಡಿದ ಇಡಿ
ಸೆಂಥಿಲ್ ಬಾಲಾಜಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಇದನ್ನು ನಾವು ಕಾನೂನಾತ್ಮಕವಾಗಿ ಎದುರಿಸುತ್ತೇವೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆದರಿಕೆ ರಾಜಕೀಯಕ್ಕೆ ನಾವು ಹೆದರುವುದಿಲ್ಲ ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದರು.
ಇಡಿ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಳ್ಳುವಾಗ ಬಾಲಾಜಿ ಎದೆನೋವು ಎಂದು ದೂರಿದ್ದಾರೆ ಎಂದೂ ಡಿಎಂಕೆ ಮುಖಂಡರು ಆರೋಪಿಸಿದ್ದಾರೆ. ಇಡಿ ಆಸ್ಪತ್ರೆಗೆ ಕರೆದೊಯ್ದಾಗ ಸೆಂಥಿಲ್ ಬಾಲಾಜಿಗೆ ಪ್ರಜ್ಞೆ ಇರಲಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಇಡಿ ಹೆಸರಲ್ಲಿ Nippon Paints ಮುಖ್ಯಸ್ಥರ ಟಾರ್ಗೆಟ್ ಮಾಡಿ 20 ಕೋಟಿ ಬೇಡಿಕೆ ಇಟ್ಟ ಗ್ಯಾಂಗ್‌ಸ್ಟರ್‌ಗಳು..!
ಈ ಮಧ್ಯೆ, ಕ್ರೀಡಾ ಮತ್ತು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್, ಆರೋಗ್ಯ ಸಚಿವ ಎಂ. ಸುಬ್ರಮಣಿಯನ್, ಲೋಕೋಪಯೋಗಿ ಮತ್ತು ಹೆದ್ದಾರಿ ಸಚಿವ ಇವಿ ವೇಲು, ಮಾನವ ಸಂಪನ್ಮೂಲ ಮತ್ತು ಸಿಇ ಸಚಿವ ಸೇಕರ್ ಬಾಬು ಮತ್ತು ವಿವಿಧ ಡಿಎಂಕೆ ಬೆಂಬಲಿಗರು ಸೆಂಥಿಲ್ ಬಾಲಾಜಿ ಅವರನ್ನು ಭೇಟಿ ಮಾಡಲು ಆಸ್ಪತ್ರೆಗೆ ಆಗಮಿಸಿದರು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಂಗಳವಾರ ಬಾಲಾಜಿ ಅವರ ಕರೂರ್ ನಿವಾಸ ಮತ್ತು ರಾಜ್ಯ ಸಚಿವಾಲಯದ ಅವರ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದರ ಜೊತೆಗೆ ಕರೂರಿನಲ್ಲಿರುವ ಅವರ ಸಹೋದರ ಮತ್ತು ಆಪ್ತ ಸಹಾಯಕನ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.
ಪ್ರಕರಣದ ವಿವರ..
2011-15ರಲ್ಲಿ ದಿವಂಗತ ಜೆ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಸರ್ಕಾರದಲ್ಲಿ ಸೆಂಥಿಲ್ ಬಾಲಾಜಿ ಸಾರಿಗೆ ಸಚಿವರಾಗಿದ್ದರು. ಸಾರಿಗೆ ನಿಗಮಗಳಲ್ಲಿ ಚಾಲಕರು ಮತ್ತು ಕಂಡಕ್ಟರ್‌ಗಳಾಗಿ ನೇಮಕ ಮಾಡುವುದಾಗಿ ವಿವಿಧ ವ್ಯಕ್ತಿಗಳಿಂದ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಜೈಲಿನಲ್ಲಿ Delhi ಸಚಿವ ಸತ್ಯೇಂದ್ರ ಜೈನ್‌ಗೆ ಮಸಾಜ್: ಲಕ್ಷುರಿ ಜೀವನ ನಡೆಸುತ್ತಿರುವ ಬಗ್ಗೆ ED ಆರೋಪ
ಬಾಲಾಜಿ ವಿರುದ್ಧ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದ್ದು ಮತ್ತು ನಂತರ ಅವರ ವಿರುದ್ಧ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿತ್ತು. ಹಾಗೂ, ಸಂಸದರು ಮತ್ತು ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿತ್ತು. ಉದ್ಯೋಗಕ್ಕಾಗಿ ನಗದು ಹಗರಣದ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೇ ತಿಂಗಳಲ್ಲಿ ಪೊಲೀಸರು ಮತ್ತು ಇಡಿಗೆ ಅನುಮತಿ ನೀಡಿತ್ತು.
ಇದನ್ನೂ ಓದಿ: Xiaomi ಬಳಿ 5,551 ಕೋಟಿ ವಶಪಡಿಸಿಕೊಂಡ ED: ವಿದೇಶಿ ವಿನಿಮಯ ಪ್ರಾಧಿಕಾರ ಸ್ಪಷ್ಟನೆ