ಕರ್ನಾಟಕದಿಂದ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್‌ ನೀರು ಹರಿಸುವಂತೆ ಸೂಚನೆ ನೀಡಿದ ಬೆನ್ನಲ್ಲಿಯೇ, ತಮಿಳುನಾಡು ಸಂಸದರು ಒಗ್ಗಟ್ಟಾಗಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿದ್ದಾರೆ.

ನವದೆಹಲಿ (ಸೆ.19): ಕರ್ನಾಟಕದಿಂದ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್‌ ನೀರು ಹರಿಸುವಂತೆ ಸೂಚನೆ ನೀಡಿದ ಬೆನ್ನಲ್ಲಿಯೇ, ತಮಿಳುನಾಡು ಸಂಸದರು ಒಗ್ಗಟ್ಟಾಗಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್‌ರನ್ನು ಭೇಟಿಯಾಗಿದ್ದಾರೆ. ಹೆಚ್ಚಿನ ನೀರನ್ನು ಹರಿಸುವಂತೆ ಬೇಡಿಕೆ ಇಟ್ಟಿದ್ದಾರೆ.

ರಾಷ್ಟ್ರಮಟ್ಟದ ನದಿ ನೀರು ಹಂಚಿಕೆ ವಿವಾದದಲ್ಲಿ ಪ್ರಮುಖವಾದ ಕರ್ನಾಟಕ- ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಸೋಲಾಗಿದೆ. ತಮಿಳುನಾಡಿಗೆ 5,000 ಕ್ಯೂಸೆಕ್ಸ್‌ ನೀರು ಹರಿಸುವಂತೆ ಸೂಚಿಸಲಾಗಿದೆ. ಇದರ ಬೆನ್ನಲ್ಲಿಯೇ ತಮಿಳುನಾಡು ಸಂಸದರು ಒಗ್ಗಟ್ಟಾಗಿ ಹೋಗಿ ಕೇಂದ್ರದ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಹೆಚ್ಚಿನ ನೀರು ಹರಿಸುವುದಕ್ಕೆ ಕರ್ನಾಟಕದ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಆದರೆ, ಕರ್ನಾಟಕ ಸಂಸದರು ಒಗ್ಗಟ್ಟು ಪ್ರದರ್ಶನ ಅಥವಾ ಕೇಂದ್ರ ಸಚಿವರ ಭೇಟಿ ಮಾಡಿದ ನಿದರ್ಶನಗಳು ಕಂಡುಬಂದಿಲ್ಲ.

ಬೆಂಗಳೂರಿನ ಜನರಿಗೆ ಕುಡಿಯೋದಕ್ಕೂ ಕಾವೇರಿ ನೀರು ಕೊಡಲಾಗಲ್ಲ: ಗೃಹ ಸಚಿವ ಪರಮೇಶ್ವರ್‌ ಮಾಹಿತಿ

ಕರ್ನಾಟಕದಲ್ಲಿ ಮಳೆ ಕೈಕೊಟ್ಟಾಗಲೆಲ್ಲಾ ತಮಿಳುನಾಡು ರಾಜ್ಯದಿಂದ ಕಾವೇರಿ ನೀರಿಗಾಗಿ ಕ್ಯಾತೆ ತೆಗೆಯುತ್ತದೆ. ಈ ವರ್ಷ ರಾಜ್ಯದಲ್ಲಿ ಶೇ.35 ಮಾತ್ರ ಮಳೆಯಾಗಿದ್ದು, ಕಾವೇರಿ ನದಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲದೇ ಸಂಕಷ್ಟ ಅನುಭವಿಸುವಂತಾಗಿದೆ. ಆದರೆ, ಈ ನಡುವೆಯೂ ಈಗಾಗಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಆರ್‌ಸಿ) ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿ (ಸಿಡಬ್ಲ್ಯೂಎಂಎ) ಸಭೆಗಳಲ್ಲಿ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್‌ ನೀರು ಹರಿಸುವಂತೆ ಆದೇಶ ಹೊರಡಿದಲಾಗಿದೆ. ಈಗ ಮತ್ತಷ್ಟು ಹೆಚ್ಚುವರಿ ನೀರು ಬಿಡಿಸಿಕೊಳ್ಳುವನಿಟ್ಟಿನಲ್ಲಿ ತಮಿಳುನಾಡಿ ಸಂಸದರು ಹೋಗಿ ಕೇಂದ್ರ ಜಲಶಕ್ತಿ ಸಚಿಬ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿಯಾಗಿದ್ದಾರೆ.