Asianet Suvarna News Asianet Suvarna News

ತೆಲಂಗಾಣ ಹೊಸ ಸಿಎಂ ಪ್ರಮಾಣವಚನ ಬೆನ್ನಲ್ಲೇ ಮಾಜಿ ಸಿಎಂ ಕೆಸಿಆರ್ ಆಸ್ಪತ್ರೆ ದಾಖಲು!

ತೆಲಂಗಾಣ ನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇತ್ತ ಅಧಿಕಾರ ಕಳೆದುಕೊಂಡ ಮಾಜಿ ಸಿಎಂ ಕೆ ಚಂದ್ರಶೇಖರ್ ಆಸ್ಪತ್ರೆ ದಾಖಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ.

Telangana Former CM KCR hospitalized after fell down in his farmhouse ckm
Author
First Published Dec 8, 2023, 1:06 PM IST

ಹೈದರಾಬಾದ್(ಡಿ.08) ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕೆ ಚಂದ್ರಶೇಖರ್ ನೇತೃತ್ವದ ಬಿಆರ್‌ಎಸ್ ಪಕ್ಷ ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್ ಅಭೂತಪೂರ್ವ ಗೆಲುವಿನೊಂದಿಗೆ ಸರ್ಕಾರ ರಚಿಸಿದೆ. ನಿನ್ನೆ(ಡಿ.07) ರೇವಂತ್ ರೆಡ್ಡಿ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಇತ್ತ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ತಮ್ಮ ನಿವಾಸದಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಸಿಆರ್ ಆಸ್ಪತ್ರೆ ದಾಖಲಾಗಿರುವ ಮಾಹಿತಿ ತಿಳಿದ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಕೆಸಿಆರ್ ಆರೋಗ್ಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಶೀಘ್ರದಲ್ಲೇ ಚೇತರಿಕೆಗೆ ಮೋದಿ ಹಾರೈಸಿದ್ದಾರೆ.

ತೆಲಂಗಾಣ ವಿಧಾನಸಭೆ ಸೋಲಿನ ಬಳಿಕ ನಿನ್ನೆ ಕೆಸಿಆರ್ ತಮ್ಮ ಎರಾವಲ್ಲಿ ಫಾರ್ಮ್ ಹೌಸ್‌ನಲ್ಲಿ ಬಿಆರ್‌ಎಸ್ ಪಕ್ಷದ ಪ್ರಮುಖ ನಾಯಕರ ಸಭೆ ಕರೆದಿದ್ದರು. ನಿನ್ನೆ ಬಹುತೇಕ ಕಾಲ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ. ಇದೇ ವೇಳೆ ಸೋಲಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಸತತ ಸಭೆ, ಸೋಲಿನ ನೋವಿನಿಂದ ಕೆಸಿಆರ್ ಬಳಲಿದ್ದರು. ರಾತ್ರಿ ವೇಳೆ ತಮ್ಮ ಫಾರ್ಮ್ ಹೌಸ್‌ನಲ್ಲಿ ಆಯತಪಪ್ಪಿ ಬಿದ್ದಿದ್ದಾರೆ.

ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

ಬಿದ್ದ ರಭಸಕ್ಕೆ ಕೆಸಿಆರ್ ಸೊಂಟದ ಎಲುಬು ಮುರಿತಕ್ಕೊಳಗಾಗಿದೆ. ತೀವ್ರವಾಗಿ ಗಾಯಗೊಂಡ ಕೆ ಚಂದ್ರಶೇಖರ್ ರಾವ್ ಅವರನ್ನು ಯಶೋದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕ್ಯಾನಿಂಗ್ ಸೇರಿದಂತೆ ಹಲವು ಪರೀಕ್ಷೆ ಮಾಡಿಸಿದ ವೈದ್ಯರು ಸರ್ಜರಿಗೆ ಸೂಚಿಸಿದ್ದಾರೆ. ಸದ್ಯ ಆರೋಗ್ಯ ಸುಧಾರಿಸಿದೆ. ಆದರೆ ಗಾಯ ಗಂಭೀರವಾಗಿರುವ ಕಾರಣ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಹೇಳಿದ್ದಾರೆ. 

ಇತ್ತ ಕೆಸಿಆರ್ ಆಸ್ಪತ್ರೆ ದಾಖಲು ಮಾಹಿತಿ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಆರೋಗ್ಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಟ್ವೀಟ್ ಮೂಲಕ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ ಅನ್ನೋ ಮಾಹಿತಿ ತಿಳಿದು ಬೇಸರವಾಗಿದೆ. ಕೆಸಿಆರ್ ಶೀಘ್ರವಾಗಿ ಚೇತರಿಸಿಕೊಳ್ಳಲು ಹಾಗೂ ಉತ್ತಮ ಆರೋಗ್ಯಕ್ಕೆ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 

 

 

ರೇವಂತ್‌ ರೆಡ್ಡಿ ಸಂಪುಟದಲ್ಲಿ ಒಬ್ಬ ಮುಸ್ಲಿಂ ಸಚಿವನೂ ಇಲ್ಲ: ಬಂದೂಕು ಹಿಡಿದಿದ್ದ ನಕ್ಸಲ್‌ ಸೀತಕ್ಕ ಈಗ ತೆಲಂಗಾಣ ಸಚಿವೆ

2023ರ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದಲ್ಲಿದ್ದ ಬಿಆರ್‌ಎಸ್ 39 ಸ್ಥಾನಕ್ಕೆ ಕುಸಿತ ಕಂಡು ಅಧಿಕಾರ ಕಳೆದುಕೊಂಡಿತು. 164 ಸ್ಥಾನಗಳ ಪೈಕಿ ಕಾಂಗ್ರೆಸ್ 119 ಸ್ಥಾನ ಗೆಲ್ಲುವ ಮೂಲಕ ತೆಲಂಗಾಣದಲ್ಲಿ ಅಧಿಕಾರಕ್ಕೇರಿದೆ.
 

Follow Us:
Download App:
  • android
  • ios