Asianet Suvarna News Asianet Suvarna News

ಗನ್ ತೋರಿಸಿ ಮಹಿಳಾ ಹೆಡ್‌ ಕಾನ್ಸ್‌ಟೇಬಲ್‌ ಮೇಲೆ ಅತ್ಯಾಚಾರ : ಸಬ್ ಇನ್ಸ್‌ಪೆಕ್ಟರ್ ಬಂಧನ

ಗನ್ ತೋರಿಸಿ ಮಹಿಳಾ ಹೆಡ್‌ ಕಾನ್ಸ್‌ಟೇಬಲ್ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಪೊಲೀಸ್ ಇನ್‌ಪೆಕ್ಟರ್‌ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ

Telangana sub inspector arrested for raping female head constable at gunpoint akb
Author
First Published Jun 19, 2024, 6:59 PM IST

ನವದೆಹಲಿ/ತೆಲಂಗಾಣ: ಗನ್ ತೋರಿಸಿ ಮಹಿಳಾ ಹೆಡ್‌ ಕಾನ್ಸ್‌ಟೇಬಲ್ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಪೊಲೀಸ್ ಇನ್‌ಪೆಕ್ಟರ್‌ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣದ ಜಯಶಂಕರ ಭೂಪಲಪಲ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆರೋಪಿಯೂ ಕಾಲೇಶ್ವರಂ ಪೊಲೀಸ್ ಠಾಣೆಯಲ್ಲಿ ಸಬ್‌ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ.  ಜೂನ್ 15 ರಂದು ನೀರಾವರಿ ಇಲಾಖೆಗೆ ಸೇರಿದ ಅತಿಥಿಗೃಹದಲ್ಲಿ ಈ ಘಟನೆ ನಡೆದಿದ್ದು, ಇಂದು ಆರೋಪಿಯ ಬಂಧನವಾಗಿದೆ. 

ತನ್ನ ಬಳಿ ಇದ್ದ ಸರ್ವೀಸ್ ರಿವಾಲ್ವರ್ ತೋರಿಸಿ ಆರೋಪಿ ಸಬ್ ಇನ್ಸ್‌ಪೆಕ್ಟರ್ ಮಹಿಳಾ ಹೆಡ್‌ಕಾನ್ಸ್‌ಟೇಬಲ್ ಮೇಲೆ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರಕ್ಕೊಳಗಾದ ಹೆಡ್‌ ಕಾನ್ಸ್‌ಟೇಬಲ್ ಕೂಡ ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅತ್ಯಾಚಾರವೆಸಗಿದ್ದಲ್ಲದೇ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ. ಆದರೆ ಎಲ್ಲೂ ಆರೋಪಿಯ ಹೆಸರನ್ನು ಅಧಿಕಾರಿಗಳು ಉಲ್ಲೇಖಿಸಿಲ್ಲ.

ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ವಿರೋಧಿಸಿದ್ದಕ್ಕೆ ಕೊಲೆ ಮಾಡಿದ ಎಸ್‌ಎಸ್‌ಎಲ್‌ಸಿ ಬಾಲಕ

ಪೊಲೀಸ್ ಇನ್ಸ್‌ಪೆಕ್ಟರ್ ಆಕೆಯನ್ನು ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳಾ ಕಾನ್ಸ್‌ಟೇಬಲ್ ದೂರು ನೀಡಿದ್ದಾರೆ. ಆದರೆ ಸತ್ಯ ಏನೆಂದು ನಾವು ತನಿಖೆ ಮಾಡುತ್ತೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಮಹಿಳಾ ಕಾನ್ಸ್‌ಟೇಬಲ್ ನೀಡಿದ ದೂರಿನ ಪ್ರಕಾರ, ಈ ಪೊಲೀಸ್ ಇನ್ಸ್‌ಪೆಕ್ಟರ್ ಆಕೆಯನ್ನು ಈ ಹಿಂದೆಯೂ ಹಲವು ಬಾರಿ ಹಿಂಬಾಲಿಸಿ ಬಂದಿದ್ದಾನೆ ಎಂದು ದೂರಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯೆ ಸಂಬಂಧಿತ ಸೆಕ್ಷನ್‌ಗಳ ಅಡಿ ಎಸ್‌ಐ ವಿರುದ್ಧ ದೂರು ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಯಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಮಲಗಿದ್ದ 6ರ ಪೋರಿಯನ್ನು ಹೊತ್ತೊಯ್ದು ರೇಪ್‌ಗೈದು ಕೊಂದ ಟ್ರಕ್ ಡ್ರೈವರ್ 

 

Latest Videos
Follow Us:
Download App:
  • android
  • ios