ಈ ಅಸಹ್ಯಕರ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ಕಾಳಜಿಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. 

ಹೈದರಾಬಾದ್‌ (ಮಾ.19): ಆಘಾತಕಾರಿ ಘಟನೆಯಲ್ಲಿ ತೆಲಂಗಾಣದ ವಾರಂಗಲ್‌ ಜಿಲ್ಲೆ ನೆಕ್ಕೊಂಡಾ ಪ್ರದೇಶದಲ್ಲಿ ಐಸ್‌ ಕ್ರೀಮ್‌ ಮಾರಾಟಗಾರನೊಬ್ಬ ಸಾರ್ವಜನಿಕರ ದೊಡ್ಡ ಮಟ್ಟದ ಆಕ್ರೋಶಕ್ಕೆ ಗುರಿಯಾಗಿದ್ದಾನೆ. ಆತನ ವಿಡಿಯೋ ವೈರಲ್‌ ಆಗಿದ್ದು, ತಳ್ಳುವ ಗಾಡಿಯಲ್ಲಿ ಐಸ್‌ಕ್ರೀಮ್‌ ಮಾರಾಟ ಮಾಡುವ ಆತ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದಲ್ಲದೆ, ವೀರ್ಯವನ್ನು ಫಾಲೂದಾ ಐಸ್‌ಕ್ರೀಮ್‌ಗೆ ಮಿಕ್ಸ್‌ ಮಾಡಿದ್ದಾರೆ. ಅಸಹ್ಯಕರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲಿಯೇ ಆರೋಗ್ಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಆರೋಗ್ಯ ಕಾಳಜಿಯನ್ನು ಕಾಯ್ದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಐಸ್‌ಕ್ರೀಮ್‌ಗೆ ವೀರ್ಯವನ್ನು ಮಿಕ್ಸ್‌ ಮಾಡುವ ಮುನ್ನ ಸಾರ್ವಜನಿಕವಾಗಿಯೇ ಹಸ್ತಮೈಥುನ ಮಾಡಿಕೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಇದು ಸುತ್ತಮುತ್ತಲಿನ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ಖಂಡನೀಯ ಕೃತ್ಯಗಳು ಸಾರ್ವಜನಿಕ ಆರೋಗ್ಯಕ್ಕೆ ಅಪಾಯವನ್ನುಂಟು ಮಾಡುವುದಲ್ಲದೆ ಆಹಾರ ನೈರ್ಮಲ್ಯ ಮತ್ತು ಸುರಕ್ಷತೆಯ ಮೂಲಭೂತ ನೈತಿಕ ಮಾನದಂಡಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಐಸ್‌ಕ್ರೀಮ್‌ ಮಾರಾಟಗಾರನ ಕುರಿತಾಗಿ ದೂರು ದಾಖಲು ಮಾಡಿದ ಬೆನ್ನಲ್ಲಿಯೇ ಆಹಾರ ಸುರಕ್ಷತಾ ಅಧಿಕಾರಿಗಳು ಮತ್ತು ಕಾನೂನು ಜಾರಿ ಅಧಿಕಾರಿಗಳು ಬಾಲಾಜಿ ಹೆಸರಿನ ಐಸ್ ಕ್ರೀಮ್ ಸ್ಟಾಲ್ ಮೇಲೆ ಕ್ಷಿಪ್ರವಾಗಿ ದಾಖಲಿ ನಡೆಸಿದ್ದಾರೆ. ಅದರೊಂದಿಗೆ ಕಲುಷಿತ ಐಸ್ ಕ್ರೀಮ್ ಉತ್ಪಾದನೆ ಮತ್ತು ಮಾರಾಟದಲ್ಲಿ ತೊಡಗಿರುವ ಹಲವಾರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಮತ್ತು ಪ್ರಸ್ತುತ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಅಧಿಕಾರಿಗಳು ಅವರ ವಿರುದ್ಧ ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ ಮತ್ತು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಪೊಲೀಸ್‌ ಅಧಿಕಾರಿಗಳು ನಡೆಸಿದ ಸಂಪೂರ್ಣ ಪರೀಕ್ಷೆಯಲ್ಲಿ ಐಸ್‌ ಕ್ರೀಮ್‌ ಫೆಸಿಲಿಟಿಯಲ್ಲಿದ್ದ ಇತರ ಉತ್ಪನ್ನಗಳನ್ನು ಪರೀಕ್ಷೆ ಮಾಡಿದ್ದಾರೆ. ಫ್ರುಟ್‌ ಸಲಾಡ್‌ಗಳನ್ನು ಪರೀಕ್ಷೆ ಮಾಡಲಾಗಿದ್ದು, ಮಾಲಿನ್ಯದ ಆತಂಕ ಇದ್ದ ಕಾರಣಕ್ಕೆ ಇದನ್ನು ಖಾಲಿ ಮಾಡಲಾಗಿದೆ. ಅದರೊಂದಿಗೆ, ರಸ್ತೆಬದಿಗಳಲ್ಲಿ ಗಾಡಿಗಳಿಂದ ಫಲೂದಾ ಐಸ್‌ಕ್ರೀಮ್ ಮಾರಾಟ ಮಾಡುವ ಮಾರಾಟಗಾರರಿಗೆ ಮತ್ತು ರಸ್ತೆ ಬದಿಯ ಆಹಾರ ಅಂಗಡಿಗಳ ಮಾಲೀಕರಿಗೆ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ, ಶುಚಿತ್ವವನ್ನು ಕಾಪಾಡಿಕೊಳ್ಳುವುದು ಮತ್ತು ಆಹಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚಿಸಿದ್ದಾರೆ.

Watch: KSRTC ಬಸ್‌ನಲ್ಲಿ ಇಬ್ಬರು ಹುಡುಗಿಯರ ಮಧ್ಯೆಯೇ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ!

ಈ ವಿಡಿಯೋವು ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಗಿಂತ ಲಾಭಕ್ಕೆ ಆದ್ಯತೆ ನೀಡುವ ವ್ಯಕ್ತಿಗಳಿಂದ ಅರೋಗ್ಯದ ಮೇಲೆ ಉಂಟಾಗುವ ಅಪಾಯದ ಬಗ್ಗೆ ಎಚ್ಚರಿಕ ನೀಡಿದೆ. ಇಂತಹ ಘೋರ ಕೃತ್ಯಗಳು ಮರುಕಳಿಸದಂತೆ ತಡೆಯಲು ಕಟ್ಟುನಿಟ್ಟಿನ ನಿಯಮಗಳು ಮತ್ತು ಜಾಗರೂಕತೆಯ ಜಾರಿಯ ಅಗತ್ಯವನ್ನು ಇದು ಒತ್ತಿಹೇಳುತ್ತದೆ.

KSRTC ಬಸ್‌ನಲ್ಲಿ ನಟಿ ಮುಂದೆ ಹಸ್ತಮೈಥುನ ಮಾಡ್ಕೊಂಡ ಯುವಕನಿಗೆ ಜೈಲಿನ ಬಳಿ ಅದ್ಧೂರಿ ಸ್ವಾಗತ!

Scroll to load tweet…