ವಿಶಾಖಪಟ್ಟಣಂ(ಆ.01): ಇತ್ತೀಚೆಗಷ್ಟೇ ವಿಷಾನಿಲ ಸೋರಿಕೆಯಿಂದ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದ ವಿಶಾಖಪಟ್ಟಣಂನಲ್ಲಿ ಮತ್ತೊಂದು ದುರಂತ ಸಂಭಿಸಿದೆ. ಕ್ರೇನ್ ಕುಸಿದು ಬಿದ್ದ ಪರಿಣಾಮ ಕನಿಷ್ಟ ಹತ್ತು ಮಂದಿ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಹಿಂದೂಸ್ತಾನ್ ಷಿಪ್ ಯಾರ್ಡ್ ಲಿಮಿಟೆಡ್ ಘಟಕದಲ್ಲಿ ಈ ದುರಂತ ಸಂಭವಿಸಿದೆ.

ಕೇವಲ 4 ಸೆಕೆಂಡ್‌ ತಡವಾಗಿದ್ದರೆ, ನಾನು ಸಾಯುತ್ತಿದ್ದೆ: ಕಮಲ್ ಹಾಸನ್

ಪ್ರತಿನಿತ್ಯದಂತೆ ಇಂದು ಕೂಡಾ  ಶಿಪ್ ಯಾರ್ಡ್‌ನಲ್ಲಿ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಕೆಲಸ ನಡೆಯುತ್ತಿತ್ತು. ಹೀಗಿರುವಾಗ ಏಕಾಏಕಿ ಕ್ರೇನ್ ಕುಸಿದು ಬಿದ್ದಿದ್ದು, ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಇದರ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಸದ್ಯ ಅವಶೇಷಗಳಡಿ ಸಿಲುಕಿಕೊಂಡಿರುವ ಕಾರ್ಮಿಕರ ಮೃತದೇಹ ಹೊರತೆಗೆಯುವ ಕಾರ್ಯ ಮುಂದುವರೆಸಲಾಗಿದೆ.

ದುರಂತದ ಬೆನ್ನಲ್ಲೇ ಈ ಸಂಬಂಧ ಪ್ರಕರಣ ದಾಖಲಿಸಿದ್ದು, ಸೂಕ್ತ ತನಿಖೆ ನಡೆಸುವುದಾಗಿ ಡಿಸಿಪಿ ಸುರೇಶ್ ಬಾಬು ತಿಳಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ವಿಶಾಖಪಟ್ಟಣಂನ ಎಲ್ ಜಿ ಪಾಲಿಮರ್ ಕಾರ್ಖಾನೆಯಿಂದಾದ ವಿಷಾನಿಲ ಸೋರಿಕೆಯಿಂದ ಮತ್ತು ಗ್ಯಾಸ್ ಟ್ಯಾಂಕ್ ಸ್ಫೋಟ ಪ್ರಕರಣದಿಂದ ಅನೇಕ ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದರು.