ಭುವನೇಶ್ವರ್, (ಫೆ.19): The surgery was successful but the patient died ಎನ್ನುವಂತೆ ಆಪರೇಷನ್ ಮಾಡಿ ರೋಗಿಯನ್ನ ಹೊರಗೆ ಕರ್ಕೊಂಡು ಬರ್ತಿದ್ದಂತೆ ಯುವತಿ ಸಾವನ್ನಪ್ಪಿದ್ದಾಳೆ

ಹೌದು...ವೈದ್ಯರು ಯುವತಿಯೋರ್ವಳ ಆಪರೇಷನ್ ಮಾಡಿದ್ದಾರೆ. ಆದರೆ ಆಪರೇಷನ್ ಥಿಯೇಟರ್‌ನಿಂದ ಹೊರಗೆ ಕರೆದುಕೊಂಡು ಬರುವಾಗ ಯುವತಿ ಮೃತಪಟ್ಟಿದ್ದಾಳೆ.

ಈ ಘಟನೆ ಒಡಿಶಾದ ಬೆರ್ಹಾಂಪುರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಮೃತಪಟ್ಟಿದ್ದಾಳೆಂದು ಆಕೆ ಸಂಬಂಧಿಕರು ಮತ್ತು ಸ್ಥಳೀಯರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಯಾಬಜಾರ್ ಟ್ರೇಲರ್ ಹೊರಬಿತ್ತು, ಸ್ನಾನಕ್ಕೆ ಹೋದ ಚೆಲುವೆಗೆ ಫೋನ್ ಆಪತ್ತು; ಫೆ.19ರ ಟಾಪ್ 10 ಸುದ್ದಿ!

ಐಶ್ವರ್ಯ ಸಿಂಗ್ ಡಿಯೋ (24) ಮೃತ ಯುವತಿ. ಮಂಗಳವಾರ ಸಂಜೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಐಶ್ವರ್ಯಳನ್ನ ಗುರುದೇವ್ ಆಸ್ಪತ್ರೆಗೆ ಕುಟುಂಬದವರು ದಾಖಲಿಸಿದ್ದರು. ವೈದ್ಯರು ಪರೀಕ್ಷಿಸಿ ಯುವತಿಗೆ ಅಪೆಂಡಿಕ್ಸ್ ಇದ್ದು,  ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ. 

ಆಪರೇಷನ್‌ಗೆ ಯುವತಿಯ ಪೋಷಕರು ಒಪ್ಪಿದ್ದು, ವೈದ್ಯರು ಐಶ್ವರ್ಯಗೆ ಆಪರೇಷನ್ ಮಾಡಿದ್ದಾರೆ. ಆದರೆ ದುರದೃಷ್ಟವಶಾತ್ ಆಪರೇಷನ್ ಥಿಯೇಟರ್‌ನಿಂದ ಹೊರಗೆ ಕರೆದುಕೊಂಡು ಬರುವಾಗ ಯುವತಿ ಮೃತಪಟ್ಟಿದ್ದಾಳೆ. 

ಈ ಹಿನ್ನೆಲೆಯಲ್ಲಿ ಯುವತಿಯ ಸಂಬಂಧಿಕರು ಮತ್ತು ಸ್ಥಳೀಯರಿಂದ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.