ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ಸೇನಾ ವಾಹನದ ಮೇಲೆ ಭೀಕರ ದಾಳಿ!

ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಸರ್ಕಾರ ರಚನೆಯಾದ ಬಳಿಕ ಉಗ್ರರ ಅಟ್ಟಹಾಸ ಮುಂದುವರಿದಿದೆ. ವಲಸೆ ಕಾರ್ಮಿಕರ ಮೇಲಿನ ದಾಳಿ ಬೆನ್ನಲ್ಲೇ ಇದೀಗ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಓರ್ವ ನಾಗರೀಕ ಮೃತಪಟ್ಟಿದ್ದರೆ, ಹಲವು ಯೋಧರು ಗಾಯಗೊಂಡಿದ್ದಾರೆ.

Terror attacks in Jammu and Kashmir army vehicle civilian killed soldier injured ckm

ನವದೆಹಲಿ(ಅ.24) ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದಾರೆ. ವಲಸೆ ಕಾರ್ಮಿಕರ ಮೇಲೆ ಭೀಕರ ದಾಳಿ ನಡೆದ ಕೆಲವೇ ದಿನಗಳಲ್ಲಿ ಇದೀಗ ಸೇನಾ ವಾಹನದ ಮೇಲೆ ದಾಳಿ ನಡೆದಿದೆ. ಗುಲ್ಮಾರ್ಗ್ ಬಳಿ ಈ ದಾಳಿ ನಡೆದಿದೆ. ಸೇನಾ ವಾಹನ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಓರ್ವ ನಾಗರೀಕ ಮೃತಪಟ್ಟಿದ್ದರೆ, ನಾಲ್ವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಭಾರತೀಯ ಸೇನೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾರಮುಲ್ಲಾ ನಾಗಿನ್ ಪೋಸ್ಟ್ ಬಳಿ  ಈ ದಾಳಿ ನಡೆದಿದೆ. 18 ರಾಷ್ಟ್ರೀಯ ರೈಫಲ್ಸ್ ಯೋಧರು ಬಾರಮುಲ್ಲಾದಲ್ಲಿ ಪ್ಯಾಟ್ರೋಲಿಂಗ್ ನಡೆಸಲು ತೆರಳುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದಾರೆ. ಉಗ್ರರ ದಾಳಿ ಆರಂಭಗೊಳ್ಳುತ್ತಿದ್ದಂತೆ, ಯೋಧರು ಪ್ರತಿ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಪರಾರಿಯಾಗಿದ್ದಾರೆ.

ಕಾಶ್ಮೀರದಲ್ಲಿ ಹೊಸ ಸರ್ಕಾರ ರಚನೆ ಬೆನ್ನಲ್ಲೇ ವಲಸೆ ಕಾರ್ಮಿಕರ ಮೇಲೆ ಉಗ್ರರ ದಾಳಿ!

ಗುಲ್ಮಾರ್ಗ್ ಬಳಿ ಸೇನಾ ವಾಹನದ ಮೇಲೆ ನಡೆದಿರುವ ಉಗ್ರ ದಾಳಿ ಕುರಿತು ಭಾರತೀಯ ಸೇನೆ ಅಲರ್ಟ್ ಆಗಿದೆ. ಇಡೀ ಪ್ರದೇಶ ಸುತ್ತುವರಿದು ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದೆ. ಇತ್ತ ಗಾಯಾಳು ಯೋಧರು ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇದೀಗ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಿದೆ. ಅಕ್ಟೋಬರ್ 20 ರಂದು ವಲಸೆ ಕಾರ್ಮಿಕರ ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಓರ್ವ ವೈದ್ಯ ಹಾಗೂ 6 ಕಾರ್ಮಿಕರು ಮೃತಪಟ್ಟಿದ್ದರು. ಶ್ರೀನಗರ ಲೇಹ ರಾಷ್ಟ್ರೀಯ ಹೆದ್ದಾರಿಯ ಸುರಂಗ ಮಾರ್ಗ ಕಾಮಗಾರಿಗೆ ಆಗಮಿಸಿದ್ದ ವಲಸೆ ಕಾರ್ಮಿಕರ ನಿವಾಸದ ಮೇಲೆ ಉಗ್ರರು ದಾಳಿ ನಡೆಸಿದ್ದರು. 

: ಜಮ್ಮು-ಕಾಶ್ಮೀರದ ಗಂದೇರ್‌ಬಾಲ್‌ ಜಿಲ್ಲೆಯಲ್ಲಿ ಭಾನುವಾರ ವಲಸೆ ಕಾರ್ಮಿಕರು ತಂಗಿದ್ದ ಶಿಬಿರದ ಮೇಲೆ ದಾಳಿ ನಡೆಸಿದ ಉಗ್ರರ ಬಳಿ ಭಾರೀ ಶಸ್ತ್ರಾಸ್ತ್ರಗಳಿದ್ದವು. ಹೆಚ್ಚು ಜನರನ್ನು ಕೊಲ್ಲುವ ಉದ್ದೇಶದಿಂದಲೇ ಕಾರ್ಮಿಕರ ಕ್ಯಾಂಪ್‌ ಮೇಲೆ ಉಗ್ರರು ದಾಳಿ ನಡೆಸಿದರು ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಿಳಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಎನ್‌ಐಎ ತಂಡ ತನಿಖೆ ಕೈಗೊಂಡಿದ್ದಾರೆ. ಭಾನುವಾರ ಇಬ್ಬರು ಉಗ್ರರು ಶಸ್ತ್ರ ಸಜ್ಜಿತರಾಗಿ ಶಿಬಿರದ ಮೇಲೆ ದಾಳಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ, ಗಂದರ್‌ಬಲ್‌, ಬಂಡಿಪೋರಾ, ಕುಲ್ಗಾಂ, ಬುದ್ಗಾಂ, ಅನಂತನಾಗ್ ಮತ್ತು ಪುಲ್ವಾಮಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಜಾಲ ಭೇದಿಸಿದ್ದಾರೆ. ಪಾಕಿಸ್ತಾನದಲ್ಲಿರುವ ಬಾಬಾ ಹಮಾಸ್‌ ಎಂಬಾತ ಈ ಉಗ್ರ ಸಂಘಟನೆ ನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಹತ್ಯೆಗೈದವರನ್ನು ಉಗ್ರರೆನ್ನಲು ಒಮರ್ ಹಿಂದೇಟು; ಸಿಎಂ ಮೃದು ಧೋರಣೆಗೆ ವ್ಯಾಪಕ ಟೀಕೆ
 

Latest Videos
Follow Us:
Download App:
  • android
  • ios