ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ವಿಫಲ ದಾಳಿಗಳಿಗೆ ಪ್ರತಿಕಾರವಾಗಿ, ಭಾರತೀಯ ಸೇನೆಯು ಪಾಕಿಸ್ತಾನದ ಲಾಹೋರ್‌ನಲ್ಲಿ ಡ್ರೋನ್ ದಾಳಿ ನಡೆಸಿದೆ. ಲಷ್ಕರ್-ಎ-ತೊಯ್ಬಾದ ಮುಖ್ಯಸ್ಥ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಉಗ್ರ ಹಫೀಸ್ ಸಯೀದ್‌ನ ಲಾಹೋರ್‌ನ ಮನೆ ಗುರಿಯಾಗಿಸಿ ಈ ದಾಳಿ ನಡೆದಿದೆ. ಲಾಹೋರ್‌ನ ಮನೆಯೊಂದರಲ್ಲಿ ಅಡಗಿರುವ ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.
ನವದೆಹಲಿ(ಮೇ.8): ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ವಿಫಲ ದಾಳಿಗಳಿಗೆ ಪ್ರತಿಕಾರವಾಗಿ, ಭಾರತೀಯ ಸೇನೆಯು ಪಾಕಿಸ್ತಾನದ ಲಾಹೋರ್‌ನಲ್ಲಿ ಡ್ರೋನ್ ದಾಳಿ ನಡೆಸಿದೆ. ಲಷ್ಕರ್-ಎ-ತೊಯ್ಬಾದ ಮುಖ್ಯಸ್ಥ ಹಾಗೂ ಭಾರತದ ಮೋಸ್ಟ್ ವಾಂಟೆಡ್ ಉಗ್ರ ಹಫೀಸ್ ಸಯೀದ್‌ನ ಲಾಹೋರ್‌ನ ಮನೆ ಗುರಿಯಾಗಿಸಿ ಈ ದಾಳಿ ನಡೆದಿದೆ. ಲಾಹೋರ್‌ನ ಮನೆಯೊಂದರಲ್ಲಿ ಅಡಗಿರುವ ಖಚಿತ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಜಮ್ಮು ಕಾಶ್ಮೀರದ ಕುಪ್ವಾರಾ, ಬಾರಾಮುಲ್ಲಾ, ಉರಿ, ಮತ್ತು ಅಖ್ನೂರ್ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆಯು ಗಡಿಯಾಚೆಗಿನ ಗುಂಡಿನ ದಾಳಿಗಳನ್ನು ನಡೆಸಿತ್ತು. ಈ ದಾಳಿಗಳನ್ನು ಭಾರತೀಯ ಸೇನೆಯು ಯಶಸ್ವಿಯಾಗಿ ವಿಫಲಗೊಳಿಸಿತು. ಪಾಕಿಸ್ತಾನದ ಅತ್ಯಾಧುನಿಕ ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನದ ದಾಳಿಗೆ ಪ್ರತೀಕಾರವಾಗಿ ಭಾರತವೂ ಇದೀಗ ಲಾಹೋರ್‌ನಲ್ಲಿ ಡ್ರೋನ್ ದಾಳಿ ನಡೆಸುವ ಮೂಲಕ ದಿಟ್ಟವಾಗಿ ಉತ್ತರಿಸಿದೆ
.
ರಕ್ಷಣಾ ಸಚಿವರ ತುರ್ತು ಸಭೆ:
ಈ ಬೆಳವಣಿಗೆಯ ನಡುವೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಹಾಗೂ ಭಾರತೀಯ ಸೇನೆ, ನೌಕಾಪಡೆ, ಮತ್ತು ವಾಯುಪಡೆಯ ಮುಖ್ಯಸ್ಥರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಪಾಕಿಸ್ತಾನದ ದಾಳಿಗಳಿಗೆ ತಕ್ಕ ಉತ್ತರ ನೀಡುವ ಕುರಿತು ಚರ್ಚೆ ನಡೆದಿದ್ದು, ರಕ್ಷಣಾ ಸಚಿವರು ಸೇನೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಪ್ರಧಾನಿ ಮೋದಿಗೆ ಮಾಹಿತಿ:
ಭಾರತೀಯ ಸೇನೆಯು ಈ ಪ್ರತೀಕಾರದ ಕಾರ್ಯಾಚರಣೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಪೂರ್ಣ ಮಾಹಿತಿ ನೀಡಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಈ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ನಿರ್ವಹಿಸುತ್ತಿದ್ದಾರೆ.
ಅಮೆರಿಕದಿಂದ ಬೆಂಬಲ:
ಈ ಉದ್ವಿಗ್ನ ಪರಿಸ್ಥಿತಿಯಲ್ಲಿ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಮಾತನಾಡಿದ್ದಾರೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಗೆ ಸಂತಾಪ ವ್ಯಕ್ತಪಡಿಸಿದ ರೂಬಿಯೊ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಅಮೆರಿಕದ ಸಂಪೂರ್ಣ ಬೆಂಬಲವನ್ನು ದೃಢಪಡಿಸಿದ್ದಾರೆ.
ಹಿನ್ನೆಲೆ:
ಪಹಲ್ಗಾಮ್‌ನ ಬೈಸಾರನ್ ಕಣಿವೆಯಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಕೊಲ್ಲಲ್ಪಟ್ಟಿದ್ದರು. ಈ ದಾಳಿಯ ಜವಾಬ್ದಾರಿಯನ್ನು ಲಷ್ಕರ್-ಎ-ತೊಯ್ಬಾದ ಪ್ರಾಕ್ಸಿ ಗುಂಪಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಹೊತ್ತುಕೊಂಡಿತ್ತು. ಈ ದಾಳಿಯ ಮಾಸ್ಟರ್‌ಮೈಂಡ್ ಆಗಿ ಹಫೀಸ್ ಸಯೀದ್‌ನನ್ನು ಭಾರತೀಯ ಗುಪ್ತಚರ ಸಂಸ್ಥೆಗಳು ಗುರುತಿಸಿವೆ.


