ಗಣರಾಜ್ಯೋತ್ಸವಕ್ಕೂ ಮುನ್ನ ಜಮ್ಮುವಿನ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದು, ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸುತ್ತಿವೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಜಮ್ಮು ಕಾಶ್ಮೀರ: ಗಣರಾಜ್ಯೋತ್ಸವಕ್ಕೂ ಮುನ್ನವೇ ಜಮ್ಮುವಿನ ಸೇನಾ ಶಿಬಿರದ ಮೇಲೆ ದಾಳಿ ನಡೆಸುವ ಮೂಲಕ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ನಾಳೆ ಗಣರಾಜ್ಯೋತ್ಸವ ಹಿನ್ನೆಲೆ ದೆಹಲಿ ಸೇರಿ ದೇಶಾದ್ಯಂತ ಸಿದ್ಧತೆ ಕಾರ್ಯಗಳು ಭರದಿಂದ ನಡೆದಿವೆ. ಈ ಹೊತ್ತಲ್ಲಿ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆ ದೆಹಲಿ ಪೊಲೀಸರು ಹೈಅಲರ್ಟ್ ಆಗಿದೆ. 

ಕಥುವಾ ಜಿಲ್ಲೆಯ ಬಿಲ್ಲವರ್‌ನ ಭತೋಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆಕ್ರಮಣಕಾರಿ ಕ್ರಮದಿಂದ ಎಚ್ಚೆತ್ತ ಯೋಧರು ಪ್ರತಿದಾಳಿ ನಡೆಸಿದರು. ಪ್ರದೇಶವನ್ನು ಸುತ್ತುವರಿದಿರುವ ಯೋಧರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಗುಂಡಿನ ಚಕಮಕಿಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದು ತಿಳಿದುಬಂದಿಲ್ಲ.

ಭಾರತದ ನಿಗೂಡ ವ್ಯಾಧಿಗೆ 17 ಸಾವು, 230 ಮಂದಿ ಕ್ವಾರಂಟೈನ್; ವೈದ್ಯರ ರಜೆ ರದ್ದುಗೊಳಿಸಿದ ಜೆಕೆ

ಗಣರಾಜ್ಯೋತ್ಸವದಂದು ಜಮ್ಮುವಿನಲ್ಲಿ ಭಯೋತ್ಪಾದಕರ ದಾಳಿ ನಡೆಯುವ ಸಾಧ್ಯತೆಯಿರುವುದರಿಂದ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಜಮ್ಮುವಿನ ರಾಜಧಾನಿ ಶ್ರೀನಗರದ ಬಕ್ಷಿ ಸ್ಟೇಡಿಯಂನಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಆಚರಣೆ ನಡೆಯಲಿದೆ. ಆದರೆ ಭಯೋತ್ಪಾದಕರು ತಮ್ಮ ಅಸ್ತಿತ್ವವನ್ನು ತೋರಿಸಲು ಭಯೋತ್ಪಾದಕ ದಾಳಿಗಳನ್ನು ನಡೆಸಬಹುದು ಎಂದು ಭದ್ರತಾ ಏಜೆನ್ಸಿಗಳು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಶಾಂತಿಯುತ ವಾತಾವರಣದಲ್ಲಿ ಗಣರಾಜ್ಯೋತ್ಸವವನ್ನು ಯಶಸ್ವಿಗೊಳಿಸಲು ಭದ್ರತಾ ಸಿಬ್ಬಂದಿಗೆ ಎಚ್ಚರಿಕೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುತ್ತಿದೆ. ಭಯೋತ್ಪಾದಕ ಚಟುವಟಿಕೆಗಳ ಮೇಲೆ ನಿಗಾ ಇಡಲು ಶ್ರೀನಗರದ ಆಯಾಕಟ್ಟಿನ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಡ್ರೋನ್‌ಗಳನ್ನು ಬಳಸಲಾಗುತ್ತಿದೆ. ಪ್ರಮುಖ ಲಾಲ್ ಚೌಕ್ ಪ್ರದೇಶದಲ್ಲಿಯೂ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ.

Republic Day 2025 | ರಿಪಬ್ಲಿಕ್ ಡೇ ಆಚರಣೆಗೆ ದೆಹಲಿ ಸಜ್ಜು | Suvarna News | Kannada News

ಬಕ್ಷಿ ಸ್ಟೇಡಿಯಂನಲ್ಲಿ ಗಣರಾಜ್ಯೋತ್ಸವ:

ಗಣರಾಜ್ಯೋತ್ಸವದ ಸ್ಥಳವಾದ ಬಕ್ಷಿ ಸ್ಟೇಡಿಯಂನಲ್ಲಿ ಭಯೋತ್ಪಾದಕ ಬೆದರಿಕೆಗಳ ಮೇಲೆ ಕಣ್ಣಿಡಲಾಗಿದೆ. ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಮಹಾನಿರೀಕ್ಷಕರು ತಿಳಿಸಿದ್ದಾರೆ. ಕಾರ್ಯಕ್ರಮ ಯಶಸ್ವಿ ನಿರ್ವಹಣೆಗಾಗಿ ಹಲವು ಹಂತಗಳೊಂದಿಗೆ ಬಿಗಿ ಭದ್ರತಾ ವ್ಯವಸ್ಥೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಶರಣಾದ ಮಾಜಿ ಉಗ್ರರು ಸೇರಿದಂತೆ ಭಯೋತ್ಪಾದಕ ಬೆದರಿಕೆಗಳ ಮೇಲೆ ಕಣ್ಗಾವಲು ಇಡಲಾಗಿದೆ ಎಂದು ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಅನ್ನು ಅನುಸರಿಸಲಾಗುತ್ತಿದೆ.