ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಸಲ್ಲಿಕೆಯಾಗಿರುವ ಹಲವಾರು ಅರ್ಜಿಗಳನ್ನು ಆ.2ರಿಂದ ಪ್ರತಿನಿತ್ಯ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಮಂಗಳವಾರ ಘೋಷಿಸಿದೆ.
ನವದೆಹಲಿ/ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಸಲ್ಲಿಕೆಯಾಗಿರುವ ಹಲವಾರು ಅರ್ಜಿಗಳನ್ನು ಆ.2ರಿಂದ ಪ್ರತಿನಿತ್ಯ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಮಂಗಳವಾರ ಘೋಷಿಸಿದೆ. ನ್ಯಾಯಾಲಯದ ಈ ನಿಲುವನ್ನು ಕಾಶ್ಮೀರದ ರಾಜಕೀಯ ಪಕ್ಷಗಳು ಮುಕ್ತಕಂಠದಿಂದ ಸ್ವಾಗತ ಮಾಡಿವೆ.
370ನೇ ವಿಧಿಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸಂವಿಧಾನಿಕ ಪೀಠ, ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಹಲವಾರು ನಿರ್ದೇಶನಗಳನ್ನು ನೀಡಿತು. ಅಲ್ಲದೆ ಲಿಖಿತ ಹೇಳಿಕೆ ಸಲ್ಲಿಸಲು ವಿವಿಧ ಪಕ್ಷಗಾರರಿಗೆ ಜು.27ರ ಅಂತಿಮ ಗಡುವನ್ನು ವಿಧಿಸಿತು. ಸೋಮವಾರ ಹಾಗೂ ಶುಕ್ರವಾರ ಹೊರತುಪಡಿಸಿ ಪ್ರತಿದಿನ ವಿಚಾರಣೆ ನಡೆಯಲಿದೆ ಎಂದು ಸ್ಪಷ್ಟಪಡಿಸಿತು. ಈ ನಡುವೆ, 370ನೇ ವಿಧಿ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿದಾರರ ಪೈಕಿ ಐಎಎಸ್ ಅಧಿಕಾರಿ ಶಾ ಫಸಲ್ ಹಾಗೂ ಜೆಎನ್‌ಯು ವಿದ್ಯಾರ್ಥಿ ನಾಯಕಿಯಾಗಿದ್ದ ಶೆಹಲಾ ರಶೀದ್ ಶೋರಾ ಅವರು ತಮ್ಮ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಕಾಶ್ಮೀರಕ್ಕೆ ವಾಪಸಾಗುತ್ತಾ 370ನೇ ವಿಧಿ? ಜುಲೈ 11ರಿಂದ ಸುಪ್ರೀಂ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ
ಏನಿದು ಕೇಸ್?:
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುತ್ತಿದ್ದ ಸಂವಿಧಾನದ ಪರಿಚ್ಛೇದವನ್ನು ಕೇಂದ್ರ ಸರ್ಕಾರ 2019ರ ಆ.5ರಂದು ನಿಷ್ಕ್ರಿಯಗೊಳಿಸಿತ್ತು. ಜಮ್ಮು-ಕಾಶ್ಮೀರ ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಘೋಷಿಸಿತ್ತು. ಇದು ಕಾಶ್ಮೀರದ ರಾಜಕೀಯ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.
370ನೇ ವಿಧಿ ವಾಪಾಸ್ ಆಗೋವರೆಗೂ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಎಂದ ಮೆಹಬೂಬಾ ಮುಫ್ತಿ!
