ಭಾರತದ ಹಸಿರು ಕ್ರಾಂತಿಯ ಜನಕ ಎಂ.ಎಸ್‌. ಸ್ವಾಮಿನಾಥನ್ ಇನ್ನಿಲ್ಲ

ದೇಶದ ಹಸಿರು ಕ್ರಾಂತಿಯ ಜನಕ ಎಂದೇ ಖ್ಯಾತಿ ಗಳಿಸಿದ್ದ ಕೃಷಿತಜ್ಞ ಎಂ.ಎಸ್‌. ಸ್ವಾಮಿನಾಥನ್ ಅವರು ನಿಧನರಾಗಿದ್ದಾರೆ.

The father of India's Green Revolution M.S. Swaminathan passes away akb

ಚೆನ್ನೆ: ದೇಶದ ಹಸಿರು ಕ್ರಾಂತಿಯ ಜನಕ ಎಂದೇ ಖ್ಯಾತಿ ಗಳಿಸಿದ್ದ ಕೃಷಿತಜ್ಞ ಎಂ.ಎಸ್‌. ಸ್ವಾಮಿನಾಥನ್ ಅವರು ನಿಧನರಾಗಿದ್ದಾರೆ.  98 ವರ್ಷಷ ಪ್ರಾಯದ ಅವರು ತಮಿಳುನಾಡಿನ ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ. ಇಂದು ಮುಂಜಾನೆ 11.15ಕ್ಕೆ ಅವು ನಿಧನರಾಗಿದ್ದಾರೆ ಎಂಬ ವಿಚಾರವನ್ನು ಅವರ ಕುಟುಂಬ ಖಚಿತಪಡಿಸಿದೆ.  ಎಂ.ಎಸ್ ಸ್ವಾಮಿನಾಥನ್ ಅವರು 1925 ಆಗಸ್ಟ್ 7 ರಂದು ತಮಿಳುನಾಡಿನ ಕುಂಬಕೋಣಂನಲ್ಲಿ ಜನಿಸಿದರು.  ಇವರ ಪತ್ನಿ ಮೀನಾ ಸ್ವಾಮಿನಾಥನ್‌ ಕಳೆದ ವರ್ಷವಷ್ಟೇ ಸಾವನ್ನಪ್ಪಿದ್ದರು. 

 ಸ್ವಾಮಿನಾಥನ್ ಅವರು ನಾರ್ಮನ್ ಬೋರ್ಲಾಗ್ ಮತ್ತು ಇತರ ವಿಜ್ಞಾನಿಗಳೊಂದಿಗೆ ಸೇರಿಕೊಂಡು 1960 ರ ದಶಕದಲ್ಲಿ ಬರಗಾಲದಂತಹ ಸಂದರ್ಭಗಳಲ್ಲಿ ರೈತರ ಜೀವನ ಸುಧಾರಿಸಲು  ಸರ್ಕಾರದ ನೀತಿಗಳೊಂದಿಗೆ ಸಾಮಾಜಿಕ ಕ್ರಾಂತಿಯನ್ನು ತರಲು ಕೆಲಸ ಮಾಡಿದರು. ಈ ಮೂಲಕ ರೈತಾಪಿ ಜನರ ಬದುಕನ್ನು ಸುಧಾರಿಸಿದರು. ಈ ಕಾರಣಕ್ಕಾಗಿ, ಎಂಎಸ್ ಸ್ವಾಮಿನಾಥನ್ ಅವರನ್ನು ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯಲಾಗುತ್ತದೆ.

ಥಾಣೆಯ ಅಪಾರ್ಟ್‌ಮೆಂಟ್ ಕಿಟಕಿಯಲ್ಲಿ ಸಿಲುಕಿಕೊಂಡಿದ್ದ ಭಾರೀ ಗಾತ್ರದ ಹಾ ...

ಫಿಲಿಪೈನ್ಸ್‌ನ ಇಂಟರ್‌ನ್ಯಾಶನಲ್ ರೈಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ (ಐಆರ್‌ಆರ್‌ಐ) ಡೈರೆಕ್ಟರ್ ಜನರಲ್ ಆಗಿ ಕೆಲಸ ಮಾಡಿದ್ದ ಸ್ವಾಮಿನಾಥನ್‌ ಅವರಿಗೆ  1987 ರಲ್ಲಿ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಮೊದಲ ಜಾಗತಿಕ ಆಹಾರ ಪ್ರಶಸ್ತಿಯ ಅತ್ಯುತ್ತಮ ಗೌರವವನ್ನು ನೀಡಲಾಯ್ತು. ಸ್ವಾಮಿನಾಥನ್ ಅವರನ್ನು ಭಾರತದ ಕೃಷಿಯ ಪಿತಾಮಹ ಎಂದು ಕೂಡ ಕರೆಯಲಾಗುತ್ತದೆ. ಇವರು ಹೆಚ್ಚು ಇಳುವರಿ ನೀಡುವ ಭತ್ತದ ತಳಿ ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದು ಭಾರತದ ಕಡಿಮೆ ಆದಾಯದ, ಕಡಿಮೆ ಭೂಮಿ ಹೊಂದಿರುವ ರೈತರು ಹೆಚ್ಚಿನ ಇಳುವರಿಯನ್ನು ಉತ್ಪಾದಿಸಲು ಸಹಾಯ ಮಾಡಿತು.

ಮೆಟ್ರೋದಲ್ಲಿ ಚೆಲ್ಲಿದ ಆಹಾರ ಸ್ವಚ್ಛಗೊಳಿಸಿದ ಯುವಕ: ತರುಣನ ಕಾರ್ಯಕ್ಕೆ ...


ಪ್ರಧಾನಿ ಮೋದಿ ಸಂತಾಪ

ಕೃಷಿತಜ್ಞ ಎಂ.ಎಸ್ ಸ್ವಾಮಿನಾಥನ್ ನಿಧನಕ್ಕೆ ಅನೇಕ ಗಣ್ಯರು ಶೋಕ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಡಾ. ಎಂ.ಎಸ್. ಸ್ವಾಮಿನಾಥನ್ ನಿಧನದಿಂದ ತೀವ್ರ ಬೇಸರವಾಗಿದೆ. ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಲ್ಲಿ, ಕೃಷಿಯಲ್ಲಿ ಅವರ ಅದ್ಭುತ ಕೆಲಸವು ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿತು ಮತ್ತು ನಮ್ಮ ರಾಷ್ಟ್ರಕ್ಕೆ ಆಹಾರ ಭದ್ರತೆಯನ್ನು ಖಾತ್ರಿಪಡಿಸಿತು ಎಂದು ಪ್ರಧಾನಿ ಟ್ವಿಟ್ ಮಾಡಿದ್ದು, ಅವರೊಂದಿಗೆ ಕಳೆದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

 

 

Latest Videos
Follow Us:
Download App:
  • android
  • ios