ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಅಕ್ಟೋಬರ್ ಮೊದಲ ವಾರದಲ್ಲಿ ನಡೆಸಲು ಉದ್ದೇಶಿಸಿದ್ದ ‘ಇಂಡಿಯಾ’ ಮೈತ್ರಿಕೂಟದ ಸರ್ವಪಕ್ಷಗಳ ಉದ್ದೇಶಿತ ಮೊದಲ ಜಂಟಿ ರ್‍ಯಾಲಿಯನ್ನು ರದ್ದುಗೊಳಿಸಲಾಗಿದೆ
ಭೋಪಾಲ್ (ಸೆ.17): ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಅಕ್ಟೋಬರ್ ಮೊದಲ ವಾರದಲ್ಲಿ ನಡೆಸಲು ಉದ್ದೇಶಿಸಿದ್ದ ‘ಇಂಡಿಯಾ’ ಮೈತ್ರಿಕೂಟದ ಸರ್ವಪಕ್ಷಗಳ ಉದ್ದೇಶಿತ ಮೊದಲ ಜಂಟಿ ರ್‍ಯಾಲಿಯನ್ನು ರದ್ದುಗೊಳಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ತಿಳಿಸಿದ್ದಾರೆ.
ಭೋಪಾಲ್‌ನಲ್ಲಿ ಇಂಡಿಯಾ ಕೂಟದ 25ಕ್ಕೂ ಹೆಚ್ಚು ಪಕ್ಷಗಳ ನಾಯಕರ ಜಂಟಿ ರ್‍ಯಾಲಿ ನಡೆಸಲಾಗುವುದು ಎಂದು ಮೈತ್ರಿಕೂಟವು ಇತ್ತೀಚೆಗೆ ಘೋಷಣೆ ಮಾಡಿತ್ತು. ಆದರೆ ಇದೀಗ ಆ ರ್‍ಯಾಲಿಯನ್ನು ರದ್ದು ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಕಮಲ್‌ನಾಥ್ ಪ್ರಕಟಿಸಿದ್ದಾರೆ. ಆದರೆ ಇದಕ್ಕೆ ಅವರು ಯಾವುದೇ ಕಾರಣ ಕೊಟ್ಟಿಲ್ಲ.
ದೇಶವನ್ನು ವಿಭಜನಕಾರಿ ರಾಜಕೀಯದಿಂದ ಮುಕ್ತಗೊಳಿಸುವ ಗುರಿ : ಕಾಂಗ್ರೆಸ್
ಇತ್ತೀಚೆಗೆ ನಡೆದ ಮೈತ್ರಿಕೂಟದ ಮೊದಲ ಸಮನ್ವಯ ಸಮಿತಿ ಸಭೆಯಲ್ಲಿ ಈ ಜಂಟಿ ರ್‍ಯಾಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಸೀಟು ಹಂಚಿಕೆ ಕುರಿತ ನಿರ್ಧಾರವನ್ನು ಮುಂದೂಡಲಾಗಿತ್ತು. ಆದರೆ ಇದೀಗ ಯಾವುದೇ ಕಾರಣ ನೀಡದೇ ದಿಢೀರನೆ ರ್‍ಯಾಲಿ ರದ್ದು ಪಡಿಸಲಾಗಿದೆ.
ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಿಜೆಪಿ ಸರ್ಕಾರದ ಭ್ರಷ್ಟಾಚಾರ" ವಿಷಯಗಳ ಮೇಲೆ ಅಕ್ಟೋಬರ್ ಮೊದಲ ವಾರದಲ್ಲಿ ಭೋಪಾಲ್‌ನಲ್ಲಿ ಆಪ್ ಬ್ಲಾಕ್ ಇಂಡಿಯನ್ ನ್ಯಾಶನಲ್ ಡೆವಲಪ್‌ಮೆಂಟಲ್, ಇನ್‌ಕ್ಲೂಸಿವ್ ಅಲೈಯನ್ಸ್ (ಇಂಡಿಯಾ) ಮೊದಲ ಉದ್ದೇಶಿತ ಜಂಟಿ ರ್ಯಾಲಿಯನ್ನು ಹಮ್ಮಿಕೊಂಡಿತ್ತು.
ಇಂಡಿಯಾ ಒಕ್ಕೂಟ ಬಲಪಡಿಸಲು ನೀರು ಬಿಡುತ್ತಿದ್ದಾರೆ: ಯಡಿಯೂರಪ್ಪ
ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಲು ಸಮನ್ವಯ ಸಮಿತಿ ನಿರ್ಧರಿಸಿದೆ. ಸದಸ್ಯ ಪಕ್ಷಗಳು ಮಾತುಕತೆ ನಡೆಸಿ ಮೊದಲೇ ನಿರ್ಧರಿಸಲು ನಿರ್ಧರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸಮನ್ವಯ ಸಮಿತಿಯ ಮೊದಲ ಸಭೆ ಶರದ್ ಪವಾರ್ ಅವರ ನಿವಾಸದಲ್ಲಿ ನಡೆಯಿತು ಮತ್ತು 12 ಸದಸ್ಯ ಪಕ್ಷಗಳು ಭಾಗವಹಿಸಿದ್ದವು.
ಬಿಜೆಪಿ ವ್ಯಂಗ್ಯ: ಈ ನಡುವೆ ಆದರೆ ‘ಸನಾತನ ಧರ್ಮದ ಕುರಿತು ಇತ್ತೀಚೆಗೆ ‘ಇಂಡಿಯಾ’ ಕೂಟದ ನಾಯಕರು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅವರ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕರ ಈ ಕೋಪ ಮತ್ತು ಆಕ್ರೋಶಕ್ಕೆ ಹೆದರಿಯೇ ರ್‍ಯಾಲಿಯನ್ನು ರದ್ದು ಮಾಡಲಾಗಿದೆ’ ಎಂದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸಿಂಗ್ ವ್ಯಂಗ್ಯವಾಡಿದ್ದಾರೆ.
