Asianet Suvarna News Asianet Suvarna News

ಕರ್ನಾಟಕದಲ್ಲಿ ವಿದ್ಯುತ್‌ ಕೊರತೆ ಇಲ್ಲ: ಇಂಧನ ಸಚಿವ ಕೆ.ಜೆ. ಜಾರ್ಜ್‌

ಕರ್ನಾಟಕದಲ್ಲಿ ವಿದ್ಯುತ್‌ ಕೊರತೆ ಉಂಟಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್‌ ಸಮಸ್ಯೆ ಇಲ್ಲ ಎಂದು ಗುರುವಾರ ಹೇಳಿದ್ದಾರೆ.

There is no power shortage in Karnataka says Energy Minister K.J. George at hyderbad rav
Author
First Published Nov 24, 2023, 6:26 AM IST

ಹೈದರಾಬಾದ್‌: ಕರ್ನಾಟಕದಲ್ಲಿ ವಿದ್ಯುತ್‌ ಕೊರತೆ ಉಂಟಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್‌ ಸಮಸ್ಯೆ ಇಲ್ಲ ಎಂದು ಗುರುವಾರ ಹೇಳಿದ್ದಾರೆ.

ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ವಹಣೆಗಾಗಿ ರಾಜ್ಯದಲ್ಲಿನ ಕೆಲವು ವಿದ್ಯುತ್‌ ಘಟಕಗಳನ್ನು ಮುಂಗಾರು ಸಮಯದಲ್ಲಿ ಮುಚ್ಚಲಾಗಿತ್ತು. ಹೀಗಾಗಿ ಅಲ್ಪಕಾಲದ ಪವರ್‌ ಕಟ್‌ ಉಂಟಾಗಿತ್ತು. ಆದರೆ ಈ ಕೊರತೆಯನ್ನು ನಾವು ನೀಗಿಸಿದ್ದೇವೆ. ರೈತರು ಬೇಡಿಕೆ ಇಟ್ಟಾಗೆಲ್ಲಾ ನಾವು ಅವರಿಗೆ ವಿದ್ಯುತ್‌ ಪೂರೈಕೆ ಮಾಡಿದ್ದೇವೆ. ಈಗ ಯಾವುದೇ ದೂರುಗಳಿಲ್ಲ. 5ರಿಂದ 10 ದಿನಗಳ ಕಾಲ ಮಾತ್ರ ವಿದ್ಯುತ್‌ ಕೊರತೆ ಉಂಟಾಗಿತ್ತು. ಆದರೆ ಅನಾವಶ್ಯಕವಾಗಿ ಈ ಬಗ್ಗೆ ರಾಜಕೀಯ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಫುಲ್ ಆಕ್ಟಿವ್; ಸರ್ಕಾರದ ವಿರುದ್ಧ ಪೋಸ್ಟರ್ ಅಭಿಯಾನ!

ಇದೇ ವೇಳೆ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ವಿದ್ಯುತ್‌ ಕೊರತೆ ನೀಗಿಸಲು ಹೆಚ್ಚಿನ ಘಟಕಗಳ ಸ್ಥಾಪನೆ ಮಾಡಲಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಆರ್‌ಎಸ್‌, ಕರ್ನಾಟಕದಲ್ಲೇ ಪದೇ ಪದೇ ವಿದ್ಯುತ್‌ ಕೊರತೆ ಉಂಟಾಗುತ್ತಿದೆ. ಆದರೆ ಇಲ್ಲಿ ಬಂದು ಕರ್ನಾಟಕದಲ್ಲಿ ನೀಡಿದ ಭರವಸೆಗಳನ್ನು ಇಲ್ಲಿಯೂ ಜಾರಿ ಮಾಡುವ ಭರವಸೆ ನೀಡುತ್ತಿದೆ ಎಂದು ಹೇಳಿತ್ತು.

 

ಭಾರತ ತಂತ್ರಜ್ಞಾನದಲ್ಲಿ ಮುಂದುವರಿಯಲು ರಾಜೀವ್‌ ಗಾಂಧಿ ಕಾರಣ: ಸಚಿವ ಜಾರ್ಜ್‌

Follow Us:
Download App:
  • android
  • ios