ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಪಂಜಾಬ್ ಪೊಲೀಸರು ಸ್ಫೋಟದ ಸ್ಥಳದಿಂದ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.
ನವದೆಹಲಿ/ಅಮೃತಸರ (ಮೇ 11, 2023): ಪಂಜಾಬ್‌ನ ಅಮೃತಸರದ ಪವಿತ್ರ ಸ್ಥಳ ಹಗೂ ಖ್ಯಾತ ಪ್ರವಾಸಿ ಸ್ಥಳವಾದ ಅಮೃತಸರದಲ್ಲಿ ಒಂದು ವಾರದಲ್ಲಿ 3 ಸ್ಫೋಟಗಳು ಸಂಭವಿಸಿದೆ. ನಿನ್ನೆ ತಡರಾತ್ರಿ ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ ಸಂಭವಿಸಿದ್ದು, ಇನ್ನು, ಪಂಜಾಬ್ ಪೊಲೀಸರು ಈ ಸಂಬಂಧ ಐವರನ್ನು ಬಂಧಿಸಿದ್ದಾರೆ.
ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಇಂದು ಮುಂಜಾನೆ 1 ಗಂಟೆ ಸುಮಾರಿಗೆ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದ್ದು, ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, "ಅಮೃತಸರ ಕಡಿಮೆ ತೀವ್ರತೆಯ ಸ್ಫೋಟ ಪ್ರಕರಣಗಳನ್ನು ಪರಿಹರಿಸಲಾಗಿದೆ" ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ.
ಇದನ್ನು ಓದಿ: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಭಾರಿ ಸ್ಫೋಟ: ಹಲವು ಯುವತಿಯರಿಗೆ ಗಂಭೀರ ಗಾಯ!
ಮೇ 6 ರಂದು ಮೊದಲ ಸ್ಫೋಟ ಮತ್ತು ಎರಡನೆಯ ಸ್ಫೋಟ ಸೋಮವಾರ ಸಂಭವಿಸಿದೆ ಎಂದು ವರದಿಯಾಗಿತ್ತು. ಇಂದು ನಡೆದ ಕಡಿಮೆ ತೀವ್ರತೆಯ ಸ್ಫೋಟದ ಸ್ಥಳವು ನಗರದ ಜನಪ್ರಿಯ ಪ್ರವಾಸಿ ತಾಣವಾದ ಗೋಲ್ಡನ್ ಟೆಂಪಲ್ ಬಳಿಯ ಹೆರಿಟೇಜ್ ಸ್ಟ್ರೀಟ್‌ನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಪಂಜಾಬ್ ಪೊಲೀಸರು ಸ್ಫೋಟದ ಸ್ಥಳದಿಂದ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಆದರೆ, ಸ್ಫೋಟದಲ್ಲಿ ಯಾವುದೇ ಪ್ರಚೋದಕ ಕಾರ್ಯವಿಧಾನವನ್ನು ಬಳಸಲಾಗಿಲ್ಲ ಎಂದು ಪ್ರಾಥಮಿಕ ವರದಿಗಳು ಸೂಚಿಸುತ್ತವೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಪಂಜಾಬ್ ಗೋಲ್ಡನ್ ಟೆಂಪಲ್ ಬಳಿ 2 ದಿನದಲ್ಲಿ 2 ಸ್ಫೋಟ: ಖಲಿಸ್ತಾನಿ ಉಗ್ರರ ಕೃತ್ಯ?
ಅಮೃತಸರದ ಹೆರಿಟೇಜ್ ಸ್ಟ್ರೀಟ್‌ನಲ್ಲಿ ನಡೆದ ಎರಡು ಸ್ಫೋಟಗಳಲ್ಲಿ ಬಳಸಲಾದ ಸ್ಫೋಟಕವನ್ನು ಎರಡು ಹೆಲ್ತ್ ಡ್ರಿಂಕ್ಸ್ ಕ್ಯಾನ್‌ಗಳೊಂದಿಗೆ ಪ್ಯಾಕ್ ಮಾಡಲಾಗಿತ್ತು.
ಇನ್ನು, ಸೋಮವಾರ ನಡೆದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು. ಆದರೆ ಆ ವೇಳೆ ಯಾವುದೇ ಡಿಟೋನೇಟರ್ ಪತ್ತೆಯಾಗಿರಲಿಲ್ಲ ಮತ್ತು ಸ್ಫೋಟಕ್ಕೆ ಬಳಸಲಾದ ಸ್ಫೋಟಕವನ್ನು ಕಂಟೇನರ್‌ನಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಹಾಗೆ, ಸ್ಫೋಟಕವನ್ನು ಕಚ್ಚಾ ರೀತಿಯಲ್ಲಿ ತಯಾರಿಸಲಾಗಿದ್ದು, ಯಾವುದೇ ಚೂರುಗಳನ್ನು ಬಳಸಲಾಗಿಲ್ಲ ಎಂದೂ ಅವರು ಎರಡನೆಯ ಸ್ಫೋಟದ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೇ 6 ರಂದು ನಡೆದ ಸ್ಫೋಟದಲ್ಲಿ ಯುವತಿಯರು ಗಾಯಗೊಂಡಿದ್ದರು ಮತ್ತು ಕೆಲವು ಕಟ್ಟಡಗಳ ಗಾಜಿನ ಮುಂಭಾಗಗಳು ಹಾನಿಗೊಳಗಾಗಿದ್ದವು. ಗೋಲ್ಡನ್ ಟೆಂಪಲ್ ಬಳಿಯ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಶನಿವಾರ ತಡರಾತ್ರಿ ಈ ಸ್ಫೋಟ ಸಂಭವಿಸಿದ್ದು, ಈ ಸ್ಫೋಟದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದ ಕೂಡಲೇ ಸುತ್ತಮುತ್ತಲಿದ್ದ ಜನರು ಗಾಬರಿಯಾಗಿದ್ದಾರೆ. ಅಲ್ಲದೆ, ಈ ಘಟನೆಯನ್ನು ಭಯೋತ್ಪಾದಕ ದಾಳಿ ಎಂದು ಭಾವಿಸಿ ಭಕ್ತರು ಮತ್ತು ಸ್ಥಳೀಯರು ಭಯಭೀತರಾಗಿದ್ದರು.
ಇದನ್ನೂ ಓದಿ: ಉಗ್ರರ ಬೇಟೆ ವೇಳೆ 5 ಸೈನಿಕರು ಹುತಾತ್ಮ: ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ ಸಂದರ್ಭ ಉಗ್ರರಿಂದ ಸ್ಫೋಟ
ಬಳಿಕ, ಮೇ 8 ರ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು ಎಂದು ವರದಿಯಾಗಿದೆ. ಇನ್ನೊಂದೆಡೆ, ಈ ಸ್ಫೋಟಗಳಲ್ಲಿ ಖಲಿಸ್ತಾನಿ ಉಗ್ರರ ಕೈವಾಡದ ಬಗ್ಗೆಯೂ ಶಂಕೆ ವ್ಯಕ್ತಪಡಿಸಲಾಗಿದೆ.
ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ನಕ್ಸಲರ ಅಟ್ಟಹಾಸ: ಐಇಡಿ ಸ್ಫೋಟದಲ್ಲಿ 10 ಜವಾನರು ಹುತಾತ್ಮ; ಚಾಲಕನೂ ಬಲಿ
