ಹುಲಿ ಬಂತು ಹುಲಿ: ಶಾಲಾ-ಕಾಲೇಜು ಬಂದ್ ಮಾಡಿದ ಜಿಲ್ಲಾಡಳಿತ!

ಕಾಡಂಚಿನ ಗ್ರಾಮಗಳಲ್ಲಿ ಹುಲಿ ಸಂಚಾರದಿಂದ ಜನಜೀವನ ಅಸ್ತವ್ಯಸ್ತ. ಶಾಲಾ-ಕಾಲೇಜುಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹುಲಿ ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ನಡೆಸುತ್ತಿದೆ.

Tiger Spotted near school District Administration Orders close to Schools and Colleges sat

ಕಾಡಂಚಿನ ಗ್ರಾಮಗಳಲ್ಲಿರುವ ಶಾಲೆ ಕಾಲೇಜಿನ ಬಳಿ ಕಳೆದ ಕೆಲವು ದಿನಗಳಿಂದ ಹುಲಿ ಸಂಚಾರ ಮಾಡುತ್ತಿದೆ. ಈಗಾಗಲೇ ಹಲವು ಪ್ರಾಣಿಗಳನ್ನು ತಿಂದು ಹಾಕಿರುವ ಹುಲಿ, ವಾಹನ ಸವಾರರ ಮೇಲೂ ದಾಳಿ ಮಾಡಿದೆ. ಇದರಿಂದ ಶಾಲಾ-ಕಾಲೇಜುಗಳ ಮಕ್ಕಳಿರಲಿ, ಇಡೀ ಊರಿಗೆ ಊರಿನ ಗ್ರಾಮಸ್ಥರೇ ಮನೆಯಿಂದ ಹೊರಗೆ ಬರಲು ಹೆದರುತ್ತಿದ್ದಾರೆ. ಅರಣ್ಯ ಇಲಾಖೆಯಿಂದ ಎಷ್ಟೇ ಪ್ರಯತ್ನ ಮಾಡಿದರೂ ಹುಲಿ ಸಿಗದ ಕಾರಣ ಜಿಲ್ಲಾಧಿಕಾರಿಗಳು, ಹುಲಿ ಸಿಗುವವರೆಗೂ ಶಾಲೆ-ಕಾಲೇಜುಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಹುಲಿಯ ಭಯ ಆವರಿಸಿದ್ದು, ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಅರಣ್ಯ ಇಲಾಖೆಯ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಹುಲಿಯನ್ನು ಹಿಡಿಯುವಲ್ಲಿ ಇನ್ನೂ ಯಶಸ್ವಿಯಾಗಿಲ್ಲ. ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿಗಳು ಹುಲಿ ಸಂಚಾರ ಮಾಡುವ ಪ್ರದೇಶಗಳಲ್ಲಿರುವ ಎಲ್ಲಾ ಶಾಲಾ-ಕಾಲೇಜುಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದ್ದಾರೆ. ಆದಾಗ್ಯೂ, ಈ ಅವಧಿಯಲ್ಲಿ ಮಕ್ಕಳಿಗೆ ಆನ್‌ಲೈನ್‌ನಲ್ಲಿ ಪಾಠಗಳು ನಡೆಯಲಿವೆ.

ಹುಲಿಯನ್ನು ಹಿಡಿಯಲು ಗಸ್ತು ತಂಡ ರಚನೆ:  ಲಕ್ನೋದ ರಹಮಾನ್‌ಖೇಡಾ ಸಂಸ್ಥೆ ಮತ್ತು ಸಿಐಎಸ್‌ಎಚ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಓಡಾಡುತ್ತಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ. ಹುಲಿಯನ್ನು ಹಿಡಿಯಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹುಲಿಯನ್ನು ಸೆರೆ ಹಿಡಿಯಲು ಒಂದು ಗಸ್ತು ತಂಡವನ್ನು ರಚಿಸಲಾಗಿದೆ. ಇದಲ್ಲದೆ, ಹಲವು ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಮತ್ತು ಥರ್ಮಲ್ ಡ್ರೋನ್‌ಗಳನ್ನು ಅಳವಡಿಸಲಾಗಿದೆ. ಹುಲಿ ನಿರಂತರವಾಗಿ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಾ, ಅಲ್ಲಿಯೇ ಓಡಾಡುತ್ತಿದೆ.

ಇದನ್ನೂ ಓದಿ: ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಎಳೆದೊಯ್ದು ತಿಂದು ಹಾಕಿದ ಚಿರತೆ!

ಜನರಲ್ಲಿ ಭಯ: ಲಕ್ನೋದಲ್ಲಿ ಹುಲಿಯ ಭಯ ಸ್ಥಳೀಯರ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿದೆ. ಹುಲಿ ದಾಳಿ ಭಯದಿಂದಾಗಿ ಇಲ್ಲಿನ ಹಲವು ಪ್ರದೇಶಗಳ ನಿವಾಸಿಗಳು ತಮ್ಮ ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ. ವಿಶೇಷವಾಗಿ ಮಕ್ಕಳು ಮತ್ತು ಅವರ ಪೋಷಕರಲ್ಲಿ ಭಯದ ವಾತಾವರಣ ಮನೆಮಾಡಿದೆ. ಮೀಠೆ ನಗರದ ಒಂದು ಶಾಲೆಯ ಪ್ರಾಂಶುಪಾಲರು ತಮ್ಮ ಶಾಲೆಯಲ್ಲಿ ಒಟ್ಟು 52 ವಿದ್ಯಾರ್ಥಿಗಳಿದ್ದಾರೆ. ಆದರೆ ಚಳಿಗಾಲದ ರಜೆ ಮುಗಿದ ನಂತರವೂ ಒಬ್ಬ ವಿದ್ಯಾರ್ಥಿಯೂ ಶಾಲೆಗೆ ಬಂದಿಲ್ಲ ಎಂದು ತಿಳಿಸಿದ್ದಾರೆ. ಮಕ್ಕಳು ಶಾಲೆಗೆ ಹೋಗದ ಕಾರಣ ಅವರ ಶಿಕ್ಷಣ ಮತ್ತು ವಿಶೇಷವಾಗಿ ಬೋರ್ಡ್ ಪರೀಕ್ಷೆಯ ತಯಾರಿಯ ಮೇಲೆ ಪರಿಣಾಮ ಬೀರುತ್ತಿದೆ. ಸ್ಥಳೀಯ ಆಡಳಿತ ಮತ್ತು ಅರಣ್ಯ ಇಲಾಖೆ ಹುಲಿಯನ್ನು ಹಿಡಿಯಲು ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

Latest Videos
Follow Us:
Download App:
  • android
  • ios