ಡೆಹ್ರಾಡೂನ್(ಮಾ.10): ಉತ್ತರಾಖಂಡ್ ನೂತನ ಸಿಎಂ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಲಭಿಸಿದೆ. ಬಿಜೆಪಿ ಸಂಸದ ತೀರಥ್ ಸಿಂಗ್ ರಾವತ್ ಸಿಎಂ ಆಗಿ ಆಯ್ಕೆಯಾಗಿದ್ದು, ಇಂದು ಸಂಜೆ 4 ಗಂಟೆಗೆ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ ಬಳಿಕ ಇಂದು ಬೆಳಗ್ಗೆ ನಡೆದ ಶಾಂಸಕಾಂಗ ಸಭೆಯಲ್ಲಿ ಪೌರಿ ಗರ್ವಾಲ್ ಕ್ಷೇತ್ರದ ಸಂಸದ ತೀರಥ್ ಸಿಂಗ್ ರಾವತ್ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಉತ್ತರಾಖಂಡ್ ಸಂಸದರೂ ಆಗಿರುವ ರಾವತ್ ಈ ಹಿಂದೆ ಶಾಸಕರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ, ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ಹೆಸರು ಕೊನೆಯ ಕ್ಷಣದವರೆಗೂ ಕೇಳಿಬಂದಿತ್ತು, ಅಂತಿಮವಾಗಿ ತೀರಥ್ ಸಿಂಗ್ ರಾವತ್ ಹೆಸರನ್ನು ಅಂತಿಮಗೊಳಿಸಲಾಗಿದೆ.

ನೂತನ ಮುಖ್ಯಮಂತ್ರಿ ಹೆಸರನ್ನು ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರೇ ಶಾಸಕಾಂಗ ಸಭೆಯಲ್ಲಿ ಪ್ರಸ್ತಾಪಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ.ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮಾರ್ಚ್ 09 ರಂದು ರಾಜೀನಾಮೆ ಸಲ್ಲಿಸಿದ್ದರು, ಪಕ್ಷದದಲ್ಲಿನ ಆಂತರಿಕ ಬೆಳವಣಿಗೆ ಬಳಿಕ ರಾವತ್ ಈ ನಿರ್ಧಾರಕ್ಕೆ ಬಂದಿದ್ದಾರೆ.