ಕೋಲ್ಕತ್ತಾ ವೈದ್ಯ ವಿದ್ಯಾರ್ಥಿನಿ ರೇಪ್‌ & ಮರ್ಡರ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲಿಯೇ ಟಿಎಂಸಿ ಕೂಡ ಪ್ರಶ್ನೆ ಮಾಡಲು ಆರಂಭಿಸಿದ್ದು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡೋಕೆ ಹೇಳ್ತೀರಾ ಎಂದು ಪ್ರಶ್ನೆ ಮಾಡಿದೆ.

ಕೋಲ್ಕತ್ತಾ (ಆ.19): ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯ ರೇಪ್‌ & ಮರ್ಡರ್‌ ಬಗ್ಗೆ ಮಾತನಾಡಿದ್ದ ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಕಥುವಾ ಟು ಕೋಲ್ಕತ್ತಾ ಎಂದು ಹೇಳಿಕೆ ನೀಡಿದ್ದರು. ಮೂರು ದಿನಗಳ ಹಿಂದೆ ಅವರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಟಿಎಂಸಿ ನಾಯಕರು, ಕರ್ನಾಟಕ ಸಿಎಂ ಸಿದ್ಧರಾಮಯ್ಯ ಅವರ ವಿಚಾರವನ್ನು ಮುನ್ನಲೆಗೆ ತಂದಿದ್ದಾರೆ. ಇಂಡಿಯಾ ಒಕ್ಕೂಟದ ಹೆಚ್ಚಿನ ಎಲ್ಲಾ ಪಕ್ಷಗಳು ಈ ವಿಚಾರದಲ್ಲಿ ನ್ಯಾಯ ಸಿಗಬೇಕು ಎಂದು ಒತ್ತಾಯ ಮಾಡಿದ್ದಲ್ಲದೆ, ಮಮತಾ ಬ್ಯಾನರ್ಜಿ ಸರ್ಕಾರ ತೆಗೆದುಕೊಂಡಿರುವ ಕ್ರಮವನ್ನು ಅವರು ಶ್ಲಾಘಿಸಿದ್ದರು. ಆದರೆ, ರಾಹುಲ್‌ ಗಾಂಧಿ ಮಾತ್ರ ಮಮತಾ ಬ್ಯಾನರ್ಜಿ ವಿರುದ್ಧವಾಗಿ ಮಾತನಾಡಿದ್ದರು. ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ನ್ಯಾಯ ದೊರಕಿಸಿಕೊಡುವ ಬದಲು, ಆರೋಪಿಯನ್ನು ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದ್ದರು. ಇನ್ನೊಂದೆಡೆ ಬಂಗಾಳ ಕಾಂಗ್ರೆಸ್‌ ಕೂಡ ಈ ವಿಚಾರವಾಗಿ ಪ್ರತಿಭಟನೆಗೆ ಇಳಿದಿದೆ.

ಮುಡಾ ಸೈಟ್‌ ಹಗರಣದಲ್ಲಿ ಗವರ್ನರ್‌ ಥಾವರ್‌ಚಂದ್‌ ಗೆಹಲೊತ್‌ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ನ್ಯೂಸ್‌ ಆರ್ಟಿಕಲ್‌ಗಳೊಂದಿಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಟಿಎಂಸಿಯ ಮಾಜಿ ರಾಜ್ಯಸಭಾ ಸಂಸದ ಕುನಾಲ್‌ ಘೋಷ್‌, 'ಹಾಗಿದ್ದರೆ, ನೀವು ನಿಮ್ಮ ಸಿಎಂಗೆ ರಾಜೀನಾಮೆ ನೀಡೋಕೆ ಹೇಳ್ತೀರಾ?' ಎಂದು ಪ್ರಶ್ನೆ ಮಾಡಿದ್ದಾರೆ. ಇದು ದೊಡ್ಡ ಪ್ರಮಾಣದಲ್ಲಿ ನಡೆದಿರುವ ಭ್ರಷ್ಟಾಚಾರ ಹಗರಣ. ಪಶ್ಚಿಮ ಬಂಗಾಳ ಕೇಸ್‌ನಲ್ಲಿ ಆಗಿರುವ ಘಟನೆಯ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ, ಮಮತಾ ಬ್ಯಾನರ್ಜಿ ಅವರು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರವೇ ತಿಳಿಯದೇ ನೀವು ಸೋಶಿಯಲ್‌ ಮೀಡಿಯಾದಲ್ಲಿ ಕಾಮೆಂಟ್‌ ಮಾಡಿದ್ದೀರಿ. ಈಗ ನೀವು ನಿಮ್ಮ ಸಿಎಂ ವಿಚಾರವಾಗಿ ಕ್ರಮ ಕೈಗೊಳ್ಳುತ್ತೀರಿ ಎಂದು ಭಾವಿಸುತ್ತೇನೆ' ಎಂದು ಟ್ವೀಟ್‌ ಮಾಡಿದ್ದಾರೆ.

ಕಳೆದ ಗುರುವಾರ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ರಾಹುಲ್‌ ಗಾಂಧಿ, ಇಂಥ ನೋವಿನ ಸಮಯದಲ್ಲಿ ನಾನು ಸಂತ್ರಸ್ಥಯ ಕುಟುಂಬದ ಜೊತೆ ನಿಲ್ಲುತ್ತೇನೆ. ಅದೆಂತಾ ಪರಿಸ್ಥಿತಿಯಲ್ಲೂ ಅವರಿಗೆಎ ನ್ಯಾಯ ಸಿಗಬೇಕು. ಅಪರಾಧಿಗಳಿಗೆ ಎಂಥಾ ಶಿಕ್ಷೆ ನೀಡಬೇಕೆಂದರೆ, ಸಮಾಜಕ್ಕೆ ಈ ಶಿಕ್ಷೆ ಮಾದರಿ ಎನ್ನುವ ರೀತಿಯಲ್ಲಿ ಇದ್ದಿರಬೇಕು. ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡುವ ಬದಲಾಗಿ ಆರೋಪಿಯನ್ನ ರಕ್ಷಣೆ ಮಾಡುವ ಯತ್ನಗಳು ಆಗುತ್ತಿವೆ. ಇದು ಆಸ್ಪತ್ರೆ ಹಾಗೂ ಸ್ಥಳೀಯ ಆಡಳಿತದ ಬಗ್ಗೆ ಪ್ರಶ್ನೆ ಎತ್ತುವಂತೆ ಮಾಡಿದೆ ಎಂದು ಹೇಳಿದ್ದರು.
ಭಾನುವಾರ ಆಪ್‌ ಸಂಸದ ಸಂಜಯ್‌ ಸಿಂಗ್‌ ಕೂಡ, ಕೋಲ್ಕತ್ತದಲ್ಲಿ ಆಗಿರುವ ಘಟನೆ ಹೃದಯವಿದ್ರಾವಕ ಎಂದು ಹೇಳಿದ್ದರು. ಈ ಕೇಸ್‌ನ ಬಗ್ಗೆ ಸಿಬಿಐ ಸರಿಯಾದ ರೀತಿಯಲ್ಲಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದರು. ಅದರೊಂದಿಗೆ ಮಮತಾ ಬ್ಯಾನರ್ಜಿ ಸರ್ಕಾರ ತಂದಿರುವ ಮಹಿಳಾ ಸ್ನೇಹಿ ಕ್ರಮಗಳ ಬಗ್ಗೆಯೂ ಮಾತನಾಡಿದ್ದರು.

ಏನಿದು ಮುಡಾ ಹಗರಣ? ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್‌ ಗಾಳಕ್ಕೆ ಸಿಕ್ಕಿಬಿದ್ದಿದ್ದು ಹೇಗೆ?

ಇನ್ನು ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಅಖಿಲೇಶ್‌ ಯಾದವ್‌ ಕೂಡ ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿ ಪರವಾಗಿ ಮಾತನಾಡಿದ್ದರು. ಮಹಿಳೆಯ ನೋವನ್ನು ಮಮತಾ ಬ್ಯಾನರ್ಜಿ ಅರ್ಥ ಮಾಡಿಕೊಂಡಿದ್ದಾರೆ. ಬೇಡಿಕೆಯ ಅನುಗುಣವಾಗಿ ಅವರು ಕ್ರಮ ತೆಗೆದುಕೊಂಡಿದ್ದಾರೆ. ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದಿದ್ದರು.

Muda Scam: ಸಿದ್ದರಾಮಯ್ಯ ರಾಜೀನಾಮೆ ನೀಡಲ್ಲ, ರಾಜ್ಯಪಾಲರು ಕೇಂದ್ರದ ಕೈಗೊಂಬೆ: ಸಿಎಂ ಪರ ಎಂಬಿ ಪಾಟೀಲ್‌ ಬ್ಯಾಟಿಂಗ್‌!

Scroll to load tweet…