'ನಾನು ಮೊದಲೇ ಹೇಳಿದ್ದೆ...': ಸಿಧು ರಾಜೀನಾಮೆ ಬೆನ್ನಲ್ಲೇ ಮೌನ ಮುರಿದ ಕ್ಯಾಪ್ಟನ್!
* ಪಂಜಾಬ್ ಕಾಂಗ್ರೆಸ್‌ಗೆ ಬಿಗ್ ಶಾಕ್
* ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನವಜೋತ್ ಸಿಂಗ್ ಸಿಧು
* ಸಿಧು ರಾಜೀನಾಮೆ ಬೆನ್ನಲ್ಲೇ ಮೌನ ಮುರಿದ ಕ್ಯಾಪ್ಟನ್
ಚಂಡೀಗಢ(ಸೆ.28): ಚುನಾವಣಾ ಹೊಸ್ತಿಲಲ್ಲಿ ಪಂಜಾಬ್ ಕಾಂಗ್ರೆಸ್(Punjab Congress) ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು(Navjot Singh Sidhu) ರಾಜೀನಾಮೆ ನೀಡಿರುವುದು ಭಾರೀ ಸಂಚಲನ ಸೃಷ್ಟಿಸಿದೆ. ಸಿಎಂ ಸ್ಥಾನ ಸಿಕ್ಕಿಲ್ಲ ಹಾಗೂ ಸಚಿವ ಸಂಪುಟ ವಿಸ್ತರಣೆಯಲ್ಲೂ ತನ್ನ ಅಭಿಪ್ರಾಯಕ್ಕೆ ಬೆಲೆ ಕೊಟ್ಟಿಲ್ಲ ಎಂದು ಬೇಸತ್ತ ಸಿಧು ರಾಜೀನಾಮೆ ನೀಡಿ ರಾಜಕೀಯ ಒತ್ತಡ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಆದರೀಗ ಸಿಧು ರಾಜೀನಾಮೆ ಬೆನ್ನಲ್ಲೇ ಮಾಜಿ ಸಿಎಂ ಕ್ಯಾಪ್ಟನ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ಪಂಜಾಬ್ ಕಾಂಗ್ರೆಸ್‌ಗೆ ಬಿಗ್ ಶಾಕ್: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನವಜೋತ್ ಸಿಂಗ್!
ಹೌದು ಸಿಧು ರಾಜೀನಾಮೆ ಬೆನ್ನಲ್ಲೇ ಟ್ವೀಟ್ ಮಾಡಿರುವ ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್(Amarinder Singh) ನಾನು ಮೊದಲೇ ಹೇಳಿದ್ದೆ ಅವರೊಬ್ಬ ಸ್ಥಿರ ವ್ಯಕ್ತಿಯಲ್ಲ, ಹಾಗೂ ಗಡಿ ರಾಜ್ಯವಾದ ಪಂಜಾಬ್ ನಾಯಕರಾಗಲು ಸೂಕ್ತರಲ್ಲ ಎಂದಿದ್ದಾರೆ.
ಸಿಧು ರಾಜೀನಾಮೆ, ಸೋನಿಯಾಗೆ ಬರೆದ ಪತ್ರದಲ್ಲೇನಿದೆ?
ಇತ್ತೀಚೆಗಷ್ಟೇ ಭಾರೀ ವಿವಾದಗಳ ಬಳಿಕ ಪಂಜಾಬ್ ಅಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದ ನವಜೋತ್ ಸಿಂಗ್ ಸಿಧು ಏಕಾಏಕಿ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಇನ್ನು ರಾಜೀನಾಮೆ ಜೊತೆ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರವೊಂದನ್ನೂ ಬರೆದಿದ್ದಾರೆ. ಈ ಪತ್ರದಲ್ಲಿ ಸಿಧು ವ್ಯಕ್ತಿಯೊಬ್ಬನ ಚಾರಿತ್ರ್ಯದ ಒಪ್ಪಂದಗಳಿಂದ ಆರಮಭವಾಗುತ್ತದೆ. ಹೀಗಿರುವಾಗ ನಾನು ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಅಭಿವೃದ್ಧಿ ಅಜೆಂಡಾದೊಂದಿಗೆ ರಾಜಿ ಮಾಡಿಕೊಳ್ಳಲಾರೆ ... ಆದ್ದರಿಂದ, ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕಾಂಗ್ರಸ್ ಸೇವೆ ಮುಂದುವರೆಸುತ್ತೇನೆ ಎಂದಿದ್ದಾರೆ.
ಸಿಎಂ ಬದಲಾದ್ರೂ ನಿಂತಿಲ್ಲ ಬಗೆಹರಿಯದ ಸಮಸ್ಯೆ
ಶಾಸಕರ ವಿರೋಧದ ನಂತರ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಕ್ಯಾಪ್ಟನ್ ರಾಜೀನಾಮೆ ನಂತರ ಸಿಧು ಸ್ವತಃ ಮುಖ್ಯಮಂತ್ರಿಯಾಗಲು ಬಯಸಿದ್ದರೂ, ಕಾಂಗ್ರೆಸ್ ಹೈಕಮಾಂಡ್, ದಲಿತ ಕಾರ್ಡ್ ಮುಂದಿಟ್ಟು, ಚರಣ್ಜಿತ್ ಸಿಂಗ್ ಚನ್ನಿಯನ್ನು ಪಂಜಾಬಿನ ಮುಖ್ಯಮಂತ್ರಿಯನ್ನಾಗಿ ಮಾಡಿತು. ಇದು ಸಿಧುವನ್ನು ಮತ್ತಷ್ಟು ಕೋಪಕ್ಕೀಡು ಮಾಡಿತ್ತು ಎನ್ನಲಾಗಿದೆ. ಪಂಜಾಬ್ ಕ್ಯಾಬಿನೆಟ್ ವಿಸ್ತರಣೆಯಲ್ಲೂ ಅವರ ಅಭಿಪ್ರಾಯಕ್ಕೆ ಬೆಲೆ ಕೊಟ್ಟಿಲ್ಲ ಎನ್ನಲಾಗಿದೆ. ಅದಕ್ಕಾಗಿಯೇ ಸಿದ್ದು ರಾಜೀನಾಮೆ ನೀಡುವ ಮೂಲಕ ಮತ್ತೊಮ್ಮೆ ರಾಜಕೀಯ ಒತ್ತಡ ಸೃಷ್ಟಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
BJPಯತ್ತ ಅಮರಿಂದರ್ ಸಿಂಗ್? ಅಮಿತ್ ಶಾ, ನಡ್ಡಾ ಭೇಟಿಗಾಗಿ ದೆಹಲಿ ತಲುಪಿದ ಮಾಜಿ ಸಿಎಂ!
ಸಂಜೆ ದೆಹಲಿ ತಲುಪಲಿದ್ದಾರೆ ಕ್ಯಾಪ್ಟನ್
ಕ್ಯಾಪ್ಟನ್ ಅಮರೀಂದರ್ ಸಿಂಗ್ ಇಂದು, ಮಂಗಳವಾರ ಸಂಜೆ 6 ಗಂಟೆಗೆ ತಲುಪಲಿದ್ದಾರೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ. ದೆಹಲಿಯಲ್ಲಿ ಅವರು ಅಮಿತ್ ಶಾ ಮತ್ತು ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ಆದರೆ ಕ್ಯಾಪ್ಟನ್ ಬಿಜೆಪಿ ನಾಯಕರನ್ನು ಏಕೆ ಭೇಟಿ ಮಾಡುತ್ತಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟವಾಗಿಲ್ಲ. ಹೀಗಿದ್ದರೂ ಅವರು ಬಿಜೆಪಿಗೆ ಸೇರುತ್ತಾರೆಂಬ ವರದಿಗಳು ಸದ್ದು ಮಾಡಿವೆ.