ಪಾರ್ಲಿಮೆಂಟ್‌ನಲ್ಲಿ ಕೆಂಪು ಟ್ರ್ಯಾಕ್ಟರ್ ಕೃಷಿ ಕಾಯ್ದೆ ವಿರೋಧಿಸಿದ ರಾಹುಲ್ ಗಾಂಧಿ

ನವದೆಹಲಿ(ಜು.26): ರಾಹುಲ್ ಗಾಂಧಿ ಇಂದು ಸಂಸತ್ತಿನಲ್ಲಿ ಹೊಸ ಟ್ರ್ಯಾಕ್ಟರ್ ಡ್ರೈವ್ ಮಾಡಿ ಎಚ್ಚರಿಕೆ ನೀಡಿದ್ದಾರೆ. ರೈತರ ಸಂದೇಶ ತಿಳಿಸಿ ಮೂರು ಕೃಷಿ ಕಾನೂನುಗಳ ವಿರುದ್ಧ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಹೊಳೆಯುವ ಕೆಂಪು ಟ್ರ್ಯಾಕ್ಟರ್‌ನಲ್ಲಿನಲ್ಲಿ ಕುಳಿತಿದ್ದ ರಾಹುಲ್ ಗಾಂಧಿ, ಅರ್ಧ ತೋಳಿನ ಅಂಗಿ, ಪ್ಯಾಂಟ್ ಮತ್ತು ಚಪ್ಪಲಿ ಧರಿಸಿ, ದೆಹಲಿಯ ಹೃದಯಭಾಗದಲ್ಲಿ ಮಾಸ್ಕ್ ಧರಿಸಿ ಆತ್ಮವಿಶ್ವಾಸದಿಂದ ಸವಾರಿ ಮಾಡಿದ್ದಾರೆ. ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸಿದ್ದಾರೆ.

CM ಶಿಖರ ತ್ಯಜಿಸಿದ ಶಿಕಾರಿಪುರದ ಹುಲಿ, ರಾಜೀನಾಮೆಯಿಂದ ರಾಜ್ಯ BJP ಗಲಿಬಿಲಿ; ಜು.26ರ ಟಾಪ್ 10 ಸುದ್ದಿ!

ನಾನು ರೈತರ ಸಂದೇಶವನ್ನು ಸಂಸತ್ತಿಗೆ ತಂದಿದ್ದೇನೆ. ಸರ್ಕಾರ ರೈತರ ಧ್ವನಿಯನ್ನು ನಿಗ್ರಹಿಸುತ್ತಿದೆ. ಸಂಸತ್ತಿನಲ್ಲಿ ಚರ್ಚೆ ನಡೆಯಲು ಬಿಡುತ್ತಿಲ್ಲ. ಅವರು ಈ ಕಪ್ಪು ಕಾನೂನುಗಳನ್ನು ರದ್ದುಗೊಳಿಸಬೇಕಾಗುತ್ತದೆ ಎಂದಿದ್ದಾರೆ.

ಸರ್ಕಾರದ ಪ್ರಕಾರ ರೈತರು ತುಂಬಾ ಸಂತೋಷವಾಗಿದ್ದಾರೆ. ಹೊರಗೆ ಕುಳಿತು ಪ್ರತಿಭಟಿಸುವ ರೈತರು ಭಯೋತ್ಪಾದಕರು. ಆದರೆ ವಾಸ್ತವದಲ್ಲಿ, ರೈತರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

Scroll to load tweet…

ರೈತರು ತಮ್ಮ ಭೂಮಿಯನ್ನು ಮಾರಾಟ ಮಾಡಲು ಒತ್ತಾಯಿಸಿದರೆ ಸಂಸತ್ತಿನಲ್ಲಿ ಟ್ರಾಕ್ಟರುಗಳು ಓಡುತ್ತವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಮತ್ತು ಕೃಷಿ ಕಾನೂನುಗಳ ವಿರುದ್ಧ ಘೋಷಣೆ ಕೂಗಿದ ಕೆಲವು ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಯಿತು. ಅವರನ್ನು ಮಧ್ಯಾಹ್ನ ತಡವಾಗಿ ಬಿಡುಗಡೆ ಮಾಡಲಾಯಿತು. ರೈತರನ್ನು ರಾಜಕೀಯ ಸಾಧನವಾಗಿ ಪ್ರತಿಪಕ್ಷಗಳು ಬಳಸುತ್ತಿವೆ ಎಂದು ಬಿಜೆಪಿ ಆರೋಪಿಸಿದೆ.

ರಾಹುಲ್ ಗಾಂಧಿ ರಾಜಕೀಯ ಆಟ ಆಡುತ್ತಿದ್ದಾರೆ. ರೈತರನ್ನು ರಾಜಕೀಯ ಸಾಧನವಾಗಿ ಬಳಸಲಾಗುತ್ತಿದೆ. ಕಾನೂನುಗಳಲ್ಲಿ ಸಮಸ್ಯೆಗಳಿದ್ದರೆ ಅವುಗಳನ್ನು ಪುನಃ ಪರಿಶೀಲಿಸಲು ಸಿದ್ಧವಾಗಿದೆ ಎಂದು ಕೇಂದ್ರ ಹೇಳಿದೆ. ಅವರು ಮಾತುಕತೆಗೆ ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಸಂಸದ ವಿನಯ್ ಸಹಸ್ರಬುದ್ಧೆ ಹೇಳಿದರು.

ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮತ್ತು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಅಥವಾ ಎಂಎಸ್‌ಪಿ ಖಾತರಿಪಡಿಸುವ ಹೊಸ ಕಾನೂನನ್ನು ಕೋರಿ ದೆಹಲಿಯ ಮೂರು ಗಡಿ ಕೇಂದ್ರಗಳಲ್ಲಿ ನವೆಂಬರ್‌ನಿಂದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.